AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾಡಿ ಘಾಟ್‌ ಸುರಂಗ ಮಾರ್ಗ ನಿರ್ಮಾಣ ಯೋಜನೆಗೆ ಹೊಸ ರೂಪ, 2024ರಲ್ಲಿ ಕಾಮಗಾರಿ ಆರಂಭ; ನಳಿನ್ ಕುಮಾರ್ ಕಟೀಲ್

Shiradi Ghat tunnel construction project; ಶಿರಾಡಿ ಘಾಟಿಯ ಎರಡು ಕಡೆಗಳಲ್ಲಿ ಸುರಂಗ ಮತ್ತು ಇತರ ಪ್ರದೇಶಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 2500 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಶಿರಾಡಿ ಘಾಟ್‌ ಸುರಂಗ ಮಾರ್ಗ ನಿರ್ಮಾಣ ಯೋಜನೆಗೆ ಹೊಸ ರೂಪ, 2024ರಲ್ಲಿ ಕಾಮಗಾರಿ ಆರಂಭ; ನಳಿನ್ ಕುಮಾರ್ ಕಟೀಲ್
ನಳಿನ್ ಕುಮಾರ್ ಕಟೀಲ್
ಗಣಪತಿ ಶರ್ಮಾ
|

Updated on: Sep 15, 2023 | 10:18 PM

Share

ಮಂಗಳೂರು, ಸೆಪ್ಟೆಂಬರ್ 15: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಶಿರಾಡಿ ಘಾಟ್‌ ಸುರಂಗ ಮಾರ್ಗ ನಿರ್ಮಾಣ ಯೋಜನೆಗೆ (Shiradi Ghat tunnel construction project) ಹೊಸ ರೂಪ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ತಿಳಿಸಿದರು. ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾಡಿಯಲ್ಲಿ ಹೆದ್ದಾರಿ ಬದಲು ಪರ್ಯಾಯ ಸುರಂಗ ಮಾರ್ಗ ನಿರ್ಮಿಸಲು ಕೇಂದ್ರ ಸರ್ಕಾರ ಎರಡು ಬಾರಿ ಸಮೀಕ್ಷೆ ನಡೆಸಿದೆ. ಮೊದಲ ಸಮೀಕ್ಷೆಯಂತೆ 3000 ಕೋಟಿ ರೂ.ಗಳ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಎರಡನೇ ಸಮೀಕ್ಷೆಯಂತೆ 12500 ಕೋಟಿ ರೂ. ಡಿಪಿಆರ್ ಸಿದ್ಧಪಡಿಸಲಾಗಿದೆ. ಈಗ ಯೋಜನೆಯ ವಿನ್ಯಾಸ ಬದಲಾಗಿದೆ ಎಂದು ತಿಳಿಸಿದರು.

ಶಿರಾಡಿ ಘಾಟಿಯ ಎರಡು ಕಡೆಗಳಲ್ಲಿ ಸುರಂಗ ಮತ್ತು ಇತರ ಪ್ರದೇಶಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 2500 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಎಸ್‌ಸಿ ಮತ್ತು ಎಸ್‌ಟಿಗಳ ಜಮೀನು ಒತ್ತುವರಿ ಪ್ರಕರಣದಲ್ಲಿ ಸಚಿವ ಸುಧಾಕರ್‌ ಮೇಲೆ ಮಾಡಿರುವ ಆರೋಪದ ಬಗ್ಗೆ ಮುಖ್ಯಮಂತ್ರಿ ಮೌನವಾಗಿದ್ದಾರೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಈ ಸರ್ಕಾರ ಸರ್ವಾಧಿಕಾರಿಗಳು ಮತ್ತು ಹಗರಣಗಾರರಿಂದ ತುಂಬಿದೆ. ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮಗಳ ಮೇಲೆ ಕೇಸು ಹಾಕಲಾಗುತ್ತಿದೆ’ ಎಂದು ಆರೋಪಿಸಿದರು.

ರೈತರ ಶೈಕ್ಷಣಿಕ ನಿಧಿಯನ್ನು ಹಿಂಪಡೆಯಲಾಗಿದೆ. ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಸೇರಿಸಿದ್ದ ಅನುದಾನವನ್ನು ಸರ್ಕಾರ ಹಿಂಪಡೆದಿದೆ. ಕಳೆದ ಮೂರು ತಿಂಗಳಲ್ಲಿ 275 ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರಕಾರ ಮೌನವಾಗಿದೆ. ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ಕರ್ನಾಟಕದ ಹಿತಾಸಕ್ತಿಯನ್ನು ಬಲಿಕೊಡುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇಂಡಿ ಅಲ್ಲ ‘ಘಮಂಡಿ’ ಮೈತ್ರಿಕೂಟ; ರಾಜಸ್ಥಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

ಸರ್ಕಾರವು 161 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದೆ. ಇದು ಸರಿಯಲ್ಲ. ಇಡೀ ರಾಜ್ಯವನ್ನು ಬರಪೀಡಿತ ಎಂದು ಘೋಷಿಸಬೇಕು. ಪ್ರತಿ ವರ್ಷ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿತ್ತು. ಈ ವರ್ಷ ಮಳೆ ಕೊರತೆಯಿಂದ ನದಿಗಳು ಬತ್ತಿ ಹೋಗಿವೆ. ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ವಿರೋಧ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ನಡೆಸಲಾಗಿದೆ ಎಂದು ನಳಿನ್ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ