ಭಾವುಕ ಮಾತುಗಳಲ್ಲೇ ಮತ್ತೆ ಲೋಕಸಭೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ನಳಿನ್ ಕುಮಾರ್ ಕಟೀಲ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಡಳಿತ ವಿರೋಧ ಅಲೆ ಎದ್ದಿದ್ದು, ಸ್ವಪಕ್ಷದ ಕಾರ್ಯಕರ್ತರೇ ಹೊಸ ಮುಖವನ್ನು ಬಯಸಿದ್ದಾರೆ. ಹತ್ತೂರಿಗೆ ಅರುಣ್ ಕುಮಾರ್ ಪುತ್ತಿಲ ಎಂದು ಹೇಳಲಾಗುತ್ತಿದೆ. ಈ ನಡುವೆ ಕಟೀಲ್ ಅವರು ಭಾವುಕವಾಗಿ ಮಾತನಾಡುತ್ತಲೇ ಮತ್ತೆ ಲೋಕಸಭೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: Rakesh Nayak Manchi

Updated on: Nov 23, 2023 | 2:29 PM

ಮಂಗಳೂರು, ನ.23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ವಿರುದ್ಧ ಆಡಳಿತ ವಿರೋಧ ಅಲೆ ಎದ್ದಿದ್ದು, ಸ್ವಪಕ್ಷದ ಕಾರ್ಯಕರ್ತರೇ ಹೊಸ ಮುಖವನ್ನು ಬಯಸಿದ್ದಾರೆ. ಹತ್ತೂರಿಗೆ ಅರುಣ್ ಕುಮಾರ್ ಪುತ್ತಿಲ ಎಂದು ಹೇಳಲಾಗುತ್ತಿದೆ. ಈ ನಡುವೆ ಕಟೀಲ್ ಅವರು ಭಾವುಕವಾಗಿ ಮಾತನಾಡುತ್ತಲೇ ಮತ್ತೆ ಲೋಕಸಭೆಗೆ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ತಮ್ಮ ವಿರುದ್ಧ ಕಾರ್ಯಕರ್ತರು ಅಸಮಾಧಾನದ ಹೊರಹಾಕುತ್ತಿರುವ ಬಗ್ಗೆ ಮೊದಲ ಬಾರಿಗೆ ಕಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬಂಟ್ವಾಳದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಭಾವುಕ ನುಡಿಗಳನ್ನಾಡಿದ ಅವರು, ನನ್ನ ವಿರುದ್ಧದ ಹಲವು ಟೀಕೆ, ಟಿಪ್ಪಣಿಯನ್ನ ಕೇಳಿದ್ದೇನೆ. ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ ಎಂದರು.

ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ. ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ. ಹಲವು ನೋವನ್ನ ಅನುಭವಿಸಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ. ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ. ನನಗೂ ದುಃಖವಿದೆ. ಸಂಸದನಾದ ಬಳಿಕ ಹಳ್ಳಿ ಹಳ್ಳಿಗಳಿಗೆ ಬರಲು ಆಗಲಿಲ್ಲ. ರಾಜ್ಯಾಧ್ಯಕ್ಷನ ನೆಲೆಯಲ್ಲಿ ಇಡೀ ರಾಜ್ಯದ ಜವಾಬ್ದಾರಿಯಿತ್ತು ಎಂದರು.

ಇದನ್ನೂ ಓದಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮತ್ತೆ ನಳಿನ್ ಕುಮಾರ್ ಕಟೀಲ್ ಅಭ್ಯರ್ಥಿ: ಬಂಡಾಯದ ಬೆಂಕಿಗೆ ತುಪ್ಪ ಸುರಿದರಾ ವಿಜಯೇಂದ್ರ?

ಪ್ರಾಮಾಣಿಕವಾಗಿ ಬಿಜೆಪಿಯನ್ನ ಹಳ್ಳಿ ಹಳ್ಳಿಗಳಿಗೆ ತಲುಪಿಸುವ ಕೆಲಸ ಮಾಡಿದ್ದೇನೆ. ಆದರೆ ನೀವು ತಲೆ ತಗ್ಗಿಸುವ ರೀತಿಯ ಕೆಲಸ ಮಾಡಲಿಲ್ಲ. ಈಗ ಮತ್ತೆ ನಾನು ದಕ್ಷಿಣ ಕನ್ನಡ ಜಿಲ್ಲೆಯತ್ತ ಗಮನ ನೀಡುತ್ತೇನೆ. ನಿಮ್ಮ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಇನ್ನೂ ಉಳಿದಿರುವ 6 ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿಮ್ಮ ಗ್ರಾಮಕ್ಕೆ ಬರುತ್ತೇನೆ. ಮತ್ತೆ ನಿಮ್ಮ ಆಶೀರ್ವಾದವನ್ನ ಕಾಲು ಮುಟ್ಟಿ ನಮಸ್ಕಾರ ಮಾಡುವ ಮೂಲಕ ಕೇಳುತ್ತೇನೆ ಎಂದರು.

ನಿನ್ನೆಯಷ್ಟೇ ಜಿಲ್ಲೆಗೆ ಭೇಟಿ ನೀಡಿದ್ದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಮತ್ತೆ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸಿಕೊಡಿ ಎಂದು ಕರೆ ನೀಡಿದ್ದರು. ಆ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯಿಂದ ಮತ್ತೆ ಅವರೇ ಕಣಕ್ಕಿಳಿಯಲಿದ್ದಾರೆ ಎಂದು ಪರೋಕ್ಷವಾಗಿ ಹೇಳಿದ್ದರು.

ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ಇಳಿಸಿ ಕಾಂಗ್ರೆಸ್ ಜೊತೆ ನೇರವಾಗಿ ಹಣಾಹಣಿ ನಡೆಸಿ ಸೋಲುಂಡ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಹೆಸರು ಲೋಕಸಭೆಗೆ ಕಣಕ್ಕಿಳಿಸಲು ಕಾರ್ಯಕರ್ತರ ಪಡೆ ಭರ್ಜರಿ ಪ್ರಚಾರದಲ್ಲಿ ತೊಡಗಿದೆ. ಇವರು ಮಾತ್ರವಲ್ಲದೆ, ಹಲವು ಮಂದಿ ಸಂಸದ ಸ್ಥಾನದ ಟಿಕೆಟ್ ಆಕಾಂಕ್ಷಿಗಳು ಪಕ್ಷದಲ್ಲಿದ್ದಾರೆ. ಪರಿಸ್ಥಿತಿ ಹೀಗಿರುವಾಗಲೇ, ಮತ್ತೆ ನಳಿನ್ ಗೆಲ್ಲಿಸಿ ಎಂದ ವಿಜಯೇಂದ್ರ ಕರೆಕೊಟ್ಟಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ