AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂಬ ವದಂತಿಗೆ ಬ್ರೇಕ್ ಹಾಕಿದ ಎಮ್​ಆರ್​ಪಿಎಲ್!

ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ರಿಫೈನರಿ ಘಟಕಗಳು ಕಚ್ಚಾ ತೈಲ ಕೊರತೆಯಿಂದ ಸ್ಥಗಿತಗೊಂಡಿವೆ ಎಂಬ ಸಾಮಾಜಿಕ ಜಾಲತಾಣದ ವದಂತಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದೆ. ಕಂಪನಿಯು ತನ್ನ ಕಾರ್ಯಾಚರಣೆಗಳು ಸಾಮಾನ್ಯ ಸ್ಥಿತಿಯಲ್ಲಿವೆ ಎಂದು ದೃಢಪಡಿಸಿದೆ. ಅಗತ್ಯವಿರುವಷ್ಟು ಕಚ್ಚಾ ತೈಲವನ್ನು ಈಗಾಗಲೇ ವ್ಯವಸ್ಥೆಗೊಳಿಸಲಾಗಿದೆ. ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ ಎಂದು ಇಂಡಿಯನ್ ಆಯಿಲ್ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಹ ಸ್ಪಷ್ಟಪಡಿಸಿದ್ದಾರೆ.

ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂಬ ವದಂತಿಗೆ ಬ್ರೇಕ್ ಹಾಕಿದ ಎಮ್​ಆರ್​ಪಿಎಲ್!
ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂಬ ವದಂತಿಗೆ ಬ್ರೇಕ್ ಹಾಕಿದ ಎಮ್​ಆರ್​ಪಿಎಲ್!
ಭಾವನಾ ಹೆಗಡೆ
|

Updated on: Mar 07, 2026 | 5:57 PM

Share

ಮಂಗಳೂರು, ಮಾರ್ಚ್​ 07: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ತನ್ನ ರಿಫೈನರಿಯ ಕೆಲವು ಘಟಕಗಳನ್ನು ಕಚ್ಚಾ ತೈಲದ ಕೊರತೆಯಿಂದ ಸ್ಥಗಿತಗೊಳಿಸಲಾಗಿದೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಿದೆ. ಕಂಪನಿಯ ಕಾರ್ಯಾಚರಣೆಗಳು ಸಾಮಾನ್ಯವಾಗಿ ನಡೆಯುತ್ತಿವೆ ಎಂದು ಸ್ಪಷ್ಟಪಡಿಸಿದೆ.

ಸೋಶಿಯಲ್ ಮೀಡಿಯಾ ವದಂತಿ ಸುಳ್ಳು ಎಂದ ರಿಫೈನರಿ

ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ OilPrice.com ಪ್ರಕಟಿಸಿದ ಪೋಸ್ಟ್‌ನಲ್ಲಿ ಪರ್ಷಿಯನ್ ಗಲ್ಪ್ ಪ್ರದೇಶದ ಉದ್ವಿಗ್ನತೆಯಿಂದ ಕಚ್ಚಾ ತೈಲ ಸಾಗಣೆ ವಿಳಂಬವಾಗಿದ್ದು, ಮಂಗಳೂರಿನ 3 ಲಕ್ಷ ಬ್ಯಾರೆಲ್ ಸಾಮರ್ಥ್ಯದ ರಿಫೈನರಿಯ ಕೆಲವು ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಈ ಮಾಹಿತಿ ತಪ್ಪಾಗಿದೆ ಎಂದು MRPL ಸ್ಪಷ್ಟಪಡಿಸಿದೆ. ಈ ರೀತಿಯ ವದಂತಿಗಳು ವಾಸ್ತವಕ್ಕೆ ದೂರವಾಗಿದ್ದು, MRPL ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ. ರಿಫೈನರಿ ಕಾರ್ಯಾಚರಣೆ ಮುಂದುವರಿಸಲು ಬೇಕಾದಷ್ಟು ಕಚ್ಚಾ ತೈಲವನ್ನು ಈಗಾಗಲೇ ವ್ಯವಸ್ಥೆ ಮಾಡಲಾಗಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ರಿಫೈನರಿಯಲ್ಲಿ ಯಾವುದೇ ಘಟಕವನ್ನು ಸ್ಥಗಿತಗೊಳಿಸಲಾಗಿಲ್ಲ ಹಾಗೂ ಸಾಮಾನ್ಯ ಸಾಮರ್ಥ್ಯದಲ್ಲೇ ಕಾರ್ಯನಿರ್ವಹಣೆ ಮುಂದುವರಿದಿದೆ ಎಂದು MRPL ಹೇಳಿದೆ. ತಪ್ಪು ಮಾಹಿತಿಗಳು ಹರಡದಂತೆ ಸಾರ್ವಜನಿಕರು ಈ ಸ್ಪಷ್ಟೀಕರಣವನ್ನು ಗಮನಿಸಬೇಕು ಎಂದು ಕಂಪನಿ ಮನವಿ ಮಾಡಿದೆ. ಇದರ ನಡುವೆ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕೂಡ ತಳ್ಳಿ ಹಾಕಿದೆ.

ಇದನ್ನೂ ಓದಿ ಅಡಿಕೆ ಬೆಳೆಗಾರರಿಗೆ ಬಜೆಟ್​ನಲ್ಲಿ ಶುಭ ಸುದ್ದಿ: ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.

ದೇಶದಲ್ಲಿ ಸಾಕಷ್ಟು ಇಂಧನ ಸಂಗ್ರಹವಿದ್ದು, ಪೂರೈಕೆ ಮತ್ತು ವಿತರಣೆ ವ್ಯವಸ್ಥೆ ಸಾಮಾನ್ಯವಾಗಿ ನಡೆಯುತ್ತಿದೆ ಎಂದು ಕಂಪನಿ ತಿಳಿಸಿದೆ. ಇದೇ ವೇಳೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ಡೀಪ್ ಸಿಂಗ್ ಪುರಿ ಕೂಡ ಜಾಗತಿಕ ಭೌಗೋಳಿಕ ರಾಜಕೀಯ ಸವಾಲುಗಳ ನಡುವೆಯೂ ಭಾರತದಲ್ಲಿ ಇಂಧನ ಸರಬರಾಜಿನಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ: ಸಚಿವ ಖಾದರ್​​
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ, ಬೆಳಗಾವಿಯಲ್ಲಿ ಪರಿಸ್ಥಿತಿ ಹೇಗಿದೆ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್​ ತಯಾರಾಗುತ್ತೆ ಗೊತ್ತಾ?
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ
ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ