ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಏಕಾಏಕಿ ಜರಿದು ಬಿದ್ದ ಗುಡ್ಡ – ಇಬ್ಬರ ರಕ್ಷಣೆ, ಇಬ್ಬರಿಗಾಗಿ ಹುಡುಕಾಟ
ಭಾರೀ ಮಳೆಗೆ ಮನೆ ಮೇಲೆ ಗುಡ್ಡವೊಂದು ಏಕಾಏಕಿ ಜರಿದು ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಮನೆ ಮೇಲೆ ಗುಡ್ಡ ಜರಿದ ಪರಿಣಾಮ ಮನೆಯೊಳಗೆ ನಾಲ್ವರು ಸಿಲುಕಿಕೊಂಡಿದ್ದರು.
ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಗುಡ್ಡವೊಂದು ಏಕಾಏಕಿ ಜರಿದು ಬಿದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಮನೆ ಮೇಲೆ ಗುಡ್ಡ ಜರಿದ ಪರಿಣಾಮ ಮನೆಯೊಳಗೆ ನಾಲ್ವರು ಸಿಲುಕಿಕೊಂಡಿದ್ದಾರೆ. ತಕ್ಷಣ ಸ್ಥಳೀಯರಿಂದ ಇಬ್ಬರ ರಕ್ಷಣೆ ಮಾಡಲಾಗಿದ್ದು, ಉಳಿದ ಇಬ್ಬರಿಗಾಗಿ ಹುಡುಕಾಟ ನಡೆದಿದೆ.
ಹೆನ್ರಿ ಕಾರ್ಲೊ ಎಂಬವರಿಗೆ ಸೇರಿದ ಕೊಠಡಿಯತ್ತ ಗುಡ್ಡ ಜರಿದು ಬಿದ್ದಿದೆ. ಕಾರ್ಲೋ ಅವರ ಮನೆಯ ತೋಟದ ಕೆಲಸಕ್ಕೆ ಬಂದಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕರು ಇವರು. ಈ ನಾಲ್ವರೂ ಅನೇಕ ವರ್ಷಗಳಿಂದ ಇವರ ತೋಟದ ಕೆಲಸ ಮಾಡುತ್ತಿದ್ದರು. ಕಾರ್ಲೋ ಅವರ ಮನೆಯ ಹತ್ತಿರದಲ್ಲಿ ಪ್ರತ್ಯೇಕ ಕೊಠಡಿ ಅವರಿಗೆ ನೀಡಲಾಗಿತ್ತು. ಜೆಸಿಬಿ ಬಳಸಿ ಮಣ್ಣು ತೆರವು ಮಾಡಿ ಶೋಧ ಕಾರ್ಯ ನಡೆಸಲಾಗಿದೆ. ನಾಲ್ವರ ಪೈಕಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಉಳಿದಿಬ್ಬರ ಶೋಧ ಕಾರ್ಯ ನಡೆದಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ. ನಾಗರಾಜ್ ಮತ್ತು ಎಸ್. ಐ ಹರೀಶ್ ತಂಡ ಭೇಟಿ ನೀಡಿದೆ.