AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿನಿ ಜತೆ ಮಾತನಾಡಿದಕ್ಕೆ ಯುವಕನ ಮೇಲೆ ಹಲ್ಲೆ, ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್​ಗಿರಿ ಪ್ರಕರಣ ವರದಿಯಾಗಿದೆ. ವಿದ್ಯಾರ್ಥಿನಿ ಜೊತೆ ಮಾತನಾಡಿದಕ್ಕೆ ಅನ್ಯಧರ್ಮಿಯ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ್ದು, ಈ ಸಂಬಂಧ ಮೂಡಬಿದ್ರೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ವಿದ್ಯಾರ್ಥಿನಿ ಜತೆ ಮಾತನಾಡಿದಕ್ಕೆ ಯುವಕನ ಮೇಲೆ ಹಲ್ಲೆ, ಮೂವರ ಬಂಧನ
ಬಂಧಿತ ಆರೋಪಿಗಳು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Aug 24, 2023 | 12:28 PM

Share

ಮಂಗಳೂರು, (ಆಗಸ್ಟ್ 25): ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಷ್ಟೇ ಖಡಕ್ ಎಚ್ಚರಿಕೆ ಕೊಟ್ಟರೂ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ ಗಿರಿ(moral police) ಪ್ರಕರಣಗಳು ಬೆಳಕಿಗೆ ಬರುತ್ತಲ್ಲೇ ಇವೆ. ಇದೀಗ ಮಂಗಳೂರಿನ (Mangaluru) ಮೂಡಬಿದ್ರೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ವಿದ್ಯಾರ್ಥಿನಿ ಜೊತೆ ಮಾತನಾಡಿದ ಅನ್ಯಧರ್ಮಿಯ ವಿದ್ಯಾರ್ಥಿ (Student) ಮೇಲೆ ಗುಂವೊಂದು ಹಲ್ಲೆ ಮಾಡಿದೆ. ಮೂಡಬಿದ್ರೆ ತಾಲೂಕಿನ ರಾಜೀವ ಗಾಂಧಿ ಸಂಕೀರ್ಣದ ಎದುರು ನಡೆದಿದ್ದ ಘಟನೆ ನಡೆದಿದ್ದು, ಈ ಸಂಬಂಧ ಮೂಡಬಿದ್ರೆ(Mudbidri) ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಬಂಧಿತರು.

ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆಗಸ್ಟ್ 22ರಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ ಸಮಯದಲ್ಲಿ ಆಗಮಿಸಿದ್ದ ಕೋಟೆಬಾಗಿಲು ಸಮೀಪದ ವಿದ್ಯಾರ್ಥಿ ಹುಡುಗಿಯೊಂದಿಗೆ ಮಾತನಾಡಿದ್ದಾನೆ. ಇದನ್ನು ನೋಡಿಕೊಂಡಿದ್ದ ಗುಂಪು, ಯುವತಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿ ಬಳಿ ಬಂದು ಹಲ್ಲೆ ನಡೆಸಿದೆ. ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ನಾಗಬನ ಅಪವಿತ್ರಗೊಳಿಸಿದ್ದಕ್ಕೆ ವ್ಯಕ್ತಿ ಮೇಲೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ; ಮೂವರ ಬಂಧನ

ಮನೆ ಕಳ್ಳತನಕ್ಕೆ ಬಂದು ಇಬ್ಬರು ಮಹಿಳೆಯರ ಮೇಲೆ ಹಲ್ಲೆ

ಮಂಗಳೂರು,(ಆಗಸ್ಟ್ 24): ಕಳ್ಳತನಕ್ಕಾಗಿ ಮನೆಗೆ ನುಗಿದ ದುಷ್ಕರ್ಮಿ ಒಬ್ಬ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಗಳೂರಿನ ಪುತ್ತೂರಿನ ( Putturu) ಬಡಗನ್ನೂರು ತೋಟದ ಮನೆಯಲ್ಲಿ ನಡೆದಿದೆ. ಕಳ್ಳತನಕ್ಕೆ ನುಗಿದ್ದ ಖದೀಮನನ್ನು ಹಿಡಿಯಲು ಸುರೇಖಾ ಹಾಗೂ ಗಿರಿಜಾ ಯತ್ನಿಸಿದ್ದಾರೆ. ಆ ವೇಳೆ ಕಳ್ಳ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ. ಅಲ್ಲದೇ ಗಿರಿಜಾಳ ಕುತ್ತಿಗೆಗೆ ಟವೆಲ್​ನಿಂದ​ ಬಿಗಿದು ಪರಾರಿಯಾಗಿದ್ದಾನೆ. ಕೂಡಲೇ ಪಕ್ಕದ ಮನೆಯ ಗಂಗಾಧರ ಎನ್ನುವವರು ಗಮನಿಸಿ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಗಂಗಾಧರ, ಗಿರಿಜಾರವರು ಕುತ್ತಿಗೆಗೆ ಟವೇಲ್ ಬಿಗಿದ ರೀತಿಯಲ್ಲಿ ಬಿದ್ದಿದ್ದರು, ಇನ್ನೋರ್ವ ಮಹಿಳೆ ಸುರೇಖಾ ಸಹ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಶೀಘ್ರವೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಸುರೇಖಾರವರ ಮನೆಯವರಾದ ರವಿಚಂದ್ರನ್ ಅವರಿಗೆ ವಿಷಯ ತಿಳಿಸಲಾಯ್ತು ಎಂದರು.

ಕಳ್ಳತನಕ್ಕೆ ಯತ್ನಿಸಿದ್ದಲ್ಲದೆ ಮಹಿಳೆಯ ಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಸುರೇಶ್ ನಾಯ್ಕ್​ ಎನ್ನುವವರ ವಿರುದ್ಧ ಐಪಿಸಿ ಸೆಕ್ಷನ್ 394ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ದಕ್ಷಿಣ ಕನ್ನಡ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:02 pm, Thu, 24 August 23

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More