AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಜೀವತಳೆಯಲಿದೆ ಮೂಡಬಿದ್ರೆಯ ನಾಗಲಿಂಗ ಪುಷ್ಪದ ಗಿಡ!

Mudbidri Cannon-Ball Plant sent to Ayodhya; ನಾಗಲಿಂಗ ವೃಕ್ಷ ಎಂದರೆ ನಾಗಲಿಂಗಾಕಾರದ ಹೂ ಬಿಡುವ ವಿಶಿಷ್ಟ ವೃಕ್ಷ. ದೊಡ್ಡ ಮರವಾಗಿ ಬೆಳೆಯುವ ಈ ಗಿಡವನ್ನು ಬೆಳೆಸಿ ಉಚಿತವಾಗಿ ಹಂಚುವವರು ನಿಡ್ದೋಡಿಯ ವಿನೇಶ್ ಪೂಜಾರಿ. ಈ ಕುರಿತ ಮಾಹಿತಿ ಪಡೆದ ಅಧಿಕಾರಿಗಳು ಅಯೋಧ್ಯೆಯಲ್ಲಿ ಈ ಹೂವಿನ ಗಿಡವನ್ನು ನೆಡುವ ಸಲುವಾಗಿ ಕಳುಹಿಸಿಕೊಡುವಂತೆ ವಿನಂತಿಸಿದ್ದರು.

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಜೀವತಳೆಯಲಿದೆ ಮೂಡಬಿದ್ರೆಯ ನಾಗಲಿಂಗ ಪುಷ್ಪದ ಗಿಡ!
ಅಯೋಧ್ಯೆಗೆ ಕಳುಹಿಸಿರುವ ನಾಗಲಿಂಗ ವೃಕ್ಷದ ಗಿಡ ಮತ್ತು ನಾಗಲಿಂಗ ಹೂ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Sep 26, 2023 | 7:01 PM

Share

ಮಂಗಳೂರು, ಸೆಪ್ಟೆಂಬರ್ 26: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ಮುಂದಿನ ವರ್ಷ ರಾಮಮಂದಿರ (Rama Mandir) ಲೋಕಾರ್ಪಣೆಯಾಗಲಿದೆ. ಈಗಾಗಲೇ ರಾಜ್ಯದ ಬೇರೆ ಬೇರೆ ಭಾಗದಿಂದ ರಾಮಮಂದಿರಕ್ಕೆ ವಸ್ತುಗಳು ಸಮರ್ಪಿತವಾಗಿದೆ. ಈ ನಡುವೆ ಕಡಲನಗರಿ ಮಂಗಳೂರಿನಿಂದ ನಾಗಲಿಂಗ ಎಂಬ ವೃಕ್ಷದ ಗಿಡ (Cannon-Ball Tree) ರವಾನೆಯಾಗಿದೆ. ಹಾಗಾದ್ರೆ ನಾಗಲಿಂಗ ವೃಕ್ಷದ ಮಹತ್ವವೇನು? ಕಡಲನಗರಿಯಿಂದ ಅಯೋಧ್ಯೆಗೆ ಇದು ತಲುಪಿದ ಬಗೆ ಹೇಗೆ? ಸಂಪೂರ್ಣ ವಿವರ ಇಲ್ಲಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಮುಂದಿನ ಜನವರಿ ತಿಂಗಳಲ್ಲಿ ಮಂದಿರ ಲೋಕಾರ್ಪಣೆಯಾಗುವ ಸೂಚನೆಯಿದೆ. ಈ ಮೂಲಕ ಕೋಟ್ಯಾಂತರ ರಾಮಭಕ್ತರ ದಶಕಗಳ ಕನಸು ನೆರವೇರುತ್ತಿದೆ. ಈಗಾಗಲೇ ಈ ರಾಮಮಂದಿರ ನಿರ್ಮಾಣಕ್ಕೆ ವಿವಿಧ ರಾಜ್ಯಗಳಿಂದ ಹಲವು ವಸ್ತುಗಳ ಸಮರ್ಪಿತವಾಗಿವೆ. ಇದೀಗ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ನಿಡ್ಡೋಡಿಯಿಂದ ನಾಗಲಿಂಗ ವೃಕ್ಷದ ಗಿಡವನ್ನು ಅಯೋಧ್ಯೆಗೆ ಕಳುಹಿಸಿಕೊಡಲಾಗಿದೆ.

ಏನಿದು ನಾಗಲಿಂಗ ವೃಕ್ಷ?

ನಾಗಲಿಂಗ ವೃಕ್ಷ ಎಂದರೆ ನಾಗಲಿಂಗಾಕಾರದ ಹೂ ಬಿಡುವ ವಿಶಿಷ್ಟ ವೃಕ್ಷ. ದೊಡ್ಡ ಮರವಾಗಿ ಬೆಳೆಯುವ ಈ ಗಿಡವನ್ನು ಬೆಳೆಸಿ ಉಚಿತವಾಗಿ ಹಂಚುವವರು ನಿಡ್ದೋಡಿಯ ವಿನೇಶ್ ಪೂಜಾರಿ. ಗೂಗಲ್ ಮೂಲಕ ಅಯೋಧ್ಯೆಯ ಬಗ್ಗೆ ವಿವರ ಪಡೆದು ಅಲ್ಲಿನ ಅಧಿಕಾರಿಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನಾಗಲಿಂಗ ವೃಕ್ಷದ ಬಗ್ಗೆ ವಿವರ ನೀಡಿದ್ದರು. ಮಾಹಿತಿ ಪಡೆದ ಅಧಿಕಾರಿಗಳು ಅಯೋಧ್ಯೆಯಲ್ಲಿ ಈ ಹೂವಿನ ಗಿಡವನ್ನು ನೆಡುವ ಸಲುವಾಗಿ ಕಳುಹಿಸಿಕೊಡುವಂತೆ ವಿನಂತಿಸಿದರು. ಅದರಂತೆ ವಿನೇಶ್ ಪೂಜಾರಿ ಕೊರಿಯರ್ ಮೂಲಕ ನಾಗಲಿಂಗ ವೃಕ್ಷದ 5 ಗಿಡಗಳನ್ನು ಅಯೋಧ್ಯೆಗೆ ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಿದೆ, ಇಲ್ಲಿದೆ ಫೋಟೋಗಳು

ಕೆಲ ದಿನಗಳಲ್ಲಿಯೇ ಅಯೋಧ್ಯೆಯ ಅಧಿಕಾರಿಗಳಿಂದ ವಿನೇಶ್ ಅವರಿಗೆ ಕರೆ ಬಂದಿದ್ದು ಗಿಡ ಸಿಕ್ಕಿದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನು ರಾಮಮಂದಿರದ ಆವರಣದಲ್ಲಿಯೇ ನೆಟ್ಟು ಪೋಟೊವನ್ನು ಕಳುಹಿಸಿಕೊಡುವುದಾಗಿ ಹೇಳಿದ್ದಾರೆ. ನಾಗಲಿಂಗ ಪುಷ್ಪ ಮೂಲತಃ ದಕ್ಷಿಣ ಅಮೆರಿಕದ್ದಾಗಿದ್ದು ಅತ್ಯಂತ ವಿರಳವಾಗಿ ಕಾಣಸಿಗುವ ಪುಷ್ಪ ಇದಾಗಿದೆ. ಶಿವಪೂಜೆಗೆ ಪವಿತ್ರ ಎಂದು ನಂಬಲ್ಪಡುವ ಈ ನಾಗಲಿಂಗ ಪುಷ್ಪವನ್ನು ಮಲ್ಲಿಕಾರ್ಜುನ ಪುಷ್ಪ, ಶಿವಲಿಂಗ ಪುಷ್ಪ ಎಂದೆಲ್ಲ ಕರೆಯುತ್ತಾರೆ. ಮಂಗಳೂರಿನ ಒಂದು ಕಡೆ ಈ ಮರವನ್ನು ಕಂಡ ವಿನೀಶ್ ಪೂಜಾರಿ, ಇದರ ಕಾಯಿಗಳನ್ನು ತಂದು ಬೀಜದ ಮೊಳಕೆ ಬರಿಸಿ ಅಗತ್ಯವಿದ್ದವರಿಗೆ ಉಚಿತವಾಗಿ ಹಂಚುವ ಕೆಲಸ ಶುರು ಮಾಡಿದರು. ಕೇರಳದ ಪ್ರಸಿದ್ದ ಶಬರಿಮಲೆ ಅಯ್ಯಪ್ಪನ ದೇವಸ್ಥಾನ ಸೇರಿದಂತೆ ದೈವಸ್ಥಾನ ಮತ್ತಿತರ ಕಡೆಗಳಿಗೆ ವಿತರಿಸಿದ ವಿನೇಶ್ ಇದುವರೆಗೆ ಸುಮಾರು 3000ಕ್ಕಿಂತಲೂ ಅಧಿಕ ಗಿಡಗಳನ್ನು ಹಂಚಿದ್ದಾರೆ.

ವೃತ್ತಿಯಲ್ಲಿ ಎಲೆಕ್ಟಿಕಲ್ ಕೆಲಸವನ್ನು ನಿರ್ವಹಿಸುವ ವಿನೇಶ್ ಅವರ ನಾಗಲಿಂಗ ವೃಕ್ಷ ವಿತರಣೆಯ ಕಾರ್ಯ ಈಗಲೂ ಮುಂದುವರಿದೆ. ಸದ್ಯ ಅಯೋಧ್ಯೆಯಲ್ಲಿಯು ನಾಗಲಿಂಗ ವೃಕ್ಷ ಬೆಳೆಯುತ್ತಿರುವುದು ವಿನೇಶ್ ಅವರ ಸಂತಸಕ್ಕೆ ಕಾರಣವಾಗಿದೆ.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?