ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರಿಂದ ನಾಲ್ವರು ಆರೋಪಿಗಳ ಬಂಧನ ಮಾಡಲಾಗಿದೆ.

ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ
Follow us
ಗಂಗಾಧರ​ ಬ. ಸಾಬೋಜಿ
|

Updated on:May 11, 2023 | 8:28 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಶೆಡ್ಡೆಯಲ್ಲಿ ನಿನ್ನೆ ಸಂಜೆ ಕಾಂಗ್ರೆಸ್ (Congress)​ ಮತ್ತು ಬಿಜೆಪಿ (bjp) ಕಾರ್ಯಕರ್ತರ ನಡುವೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರಿಂದ ನಾಲ್ವರು ಆರೋಪಿಗಳ ಬಂಧನ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ಕಾರು ಮೇಲೆ ಕಲ್ಲುತೂರಾಟ ನಡೆದಿತ್ತು. ಘಟನೆ ಬಳಿಕ 20ಕ್ಕೂ ಹೆಚ್ಚು ಆರೋಪಿಗಳು ತಲೆಮರೆಸಿಕೊಂಡಿದ್ದರು. ಕಾವೂರು ಪೊಲೀಸ್ ಠಾಣೆಯಲ್ಲಿ ಐದು ದೂರು ದಾಖಲಾಗಿತ್ತು. ಇಬ್ಬರು ಕಾಂಗ್ರೆಸ್​ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿಗೆ ಗಾಯವಾಗಿತ್ತು.

ಸೆಕ್ಷನ್​ 144 ಜಾರಿ

ಚುನಾವಣಾ ಪಕ್ಷದ ಬೂತ್​ಗೆ ಅಭ್ಯರ್ಥಿ ಮಿಥುನ್ ರೈ ಬಂದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಜೈಕಾರ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ಮಧ್ಯೆ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾವೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ: ಕಾಂಗ್ರೆಸ್​ ಅಭ್ಯರ್ಥಿ ಕಾರಿನ ಮೇಲೆ ಕಲ್ಲುತೂರಾಟ

ಮತದಾನ ಮುಗಿದ ಬಳಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಕುಲದೀಪ್​ ಜೈನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದರೆ. ಎರಡು ಪಕ್ಷದ ಕಾರ್ಯಕರ್ತರಿಂದ ಪರ ವಿರೋಧ ಘೋಷಣೆ ಹಿನ್ನೆಲೆ ಮಾರಾಮಾರಿಗೆ ಕಾರಣವಾಗಿದೆ. ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರು; ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ; ಐದು ಎಫ್​ಐಆರ್ ದಾಖಲು, ಆರೋಪಿಗಳು ನಾಪತ್ತೆ

ಮತದಾನ ಮುಗಿದ ಬಳಿಕ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಪರಸ್ಪರ ಘೋಷಣೆ ಕೂಗಿದ ವೇಳೆ ಗಲಾಟೆ ಆಗಿದೆ ಎಂದು ಪೊಲೀಸ್​ ಆಯುಕ್ತ ಕುಲದೀಪ್​ ಜೈನ್​ ಹೇಳಿದ್ದರು. ಸದ್ಯ ಪರಿಸ್ಥಿತಿ ನಿಯಂತ್ರಿಸಿ ಹೆಚ್ಚುವರಿ ಭದ್ರತೆ ಹಾಕಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದಿದ್ದರು.

ಮೂಡುಶೆಡ್ಡೆಯಲ್ಲಿ ಚೆಕ್ ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸುತ್ತೇವೆ. ಬರುವ ಮತ್ತು ಹೊರಗಿನ ವಾಹನಗಳ ಮೇಲೆ ನಿಗಾ ಇಡಲಾಗಿತ್ತೆ. ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಾಯಗಳಾಗಿವೆ. ನಮ್ಮ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:22 pm, Thu, 11 May 23

ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್