ಫೇಸ್‌ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ: ಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನ

| Updated By: ಸಾಧು ಶ್ರೀನಾಥ್​

Updated on: Sep 07, 2021 | 11:49 AM

ಹಿಂದೂ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ರಿಕ್ಷಾ ಚಾಲಕನಾಗಿದ್ದ. ಬಂಟ್ವಾಳ ತಾಲೂಕಿನ ಮಹಿಳೆಯೋರ್ವಳಿಗೆ ತಾನು ಅನಿಲ್ ಶೆಟ್ಟಿ ಎಂದು ಫೇಸ್ ಬುಕ್ ಮೂಲಕ ಪರಿಚಯ ಮಾಡಿಕೊಂಡಿದ್ದ.

ಫೇಸ್‌ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ: ಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನ
ಆರೋಪಿ ಮೊಹಮ್ಮದ್ ಅಲಿ
Follow us on

ಮಂಗಳೂರು: ಹಿಂದೂಗಳ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಗುರುಪುರ ಗ್ರಾಮದ ಆರೋಪಿ ಮೊಹಮ್ಮದ್ ಅಲಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹಿಂದೂ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದವನನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ರಿಕ್ಷಾ ಚಾಲಕನಾಗಿದ್ದ. ಬಂಟ್ವಾಳ ತಾಲೂಕಿನ ಮಹಿಳೆಯೋರ್ವಳಿಗೆ ತಾನು ಅನಿಲ್ ಶೆಟ್ಟಿ ಎಂದು ಫೇಸ್ ಬುಕ್ ಮೂಲಕ ಪರಿಚಯ ಮಾಡಿಕೊಂಡಿದ್ದ. ನಾನೊಬ್ಬ ಬ್ಯುಸಿನೆಸ್ ಮ್ಯಾನ್ ಎಂದು ಹೇಳಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು ಮಹಮ್ಮದ್ ಆಲಿ ಹಿಂದೂಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರನ್ನು ಬಲೆಗೆ ಹಾಕುತ್ತಿದ್ದ ಎಂಬ ಬಗ್ಗೆ ಮಾಹಿತಿ ಗೊತ್ತಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ತನಿಖೆಗೆ ಒಳಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಫಾ ಅಲರ್ಟ್ ಘೋಷಣೆ
ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಫಾ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. ಶಂಕಿತ ಪ್ರಕರಣ ಕಂಡುಬಂದರೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಕೇರಳದಲ್ಲಿ ಸದ್ಯ ಇಬ್ಬರು ಆರೋಗ್ಯ ಸಿಬ್ಬಂದಿಗೆ ನಿಫಾ ಹರಡಿರುವ ಮಾಹಿತಿ ಸಿಕ್ಕಿದೆ. ಸೆಪ್ಟೆಂಬರ್ 3 ರಂದು ಕೇರಳದಲ್ಲಿ ನಿಫಾದಿಂದ 12 ವರ್ಷ ಪ್ರಾಯದ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: ಶಾಲಾ ಆವರಣದಲ್ಲಿ ಕಟ್ಟಡಕ್ಕೆ ವಿರೋಧ: ಕ್ರೀಡಾಪಟುಗಳ ವಿರುದ್ಧ ಸಚಿವ ಮಾಧುಸ್ವಾಮಿ ಗರಂ; ಇದೆನ್ ನಿಮ್ಮ ಆಸ್ತಿನಾ? ಜಾಸ್ತಿ ಆಯ್ತು ಎಂದರು

Published On - 11:23 am, Tue, 7 September 21