AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಬದಲು ಕೋಟಿ ಚೆನ್ನಯ್ಯ ಹೆಸರಿಡಿ; ಶಾಸಕ ಭರತ್ ಶೆಟ್ಟಿಗೆ ಮುಸ್ಲಿಂ ಐಕ್ಯತಾ ವೇದಿಕೆ ಕೌಂಟರ್

ಮುಸ್ಲಿಂ ಐಕ್ಯತಾ ವೇದಿಕೆ ಪಾಲಿಕೆ ಕಮಿಷನರ್ ‌ಮತ್ತು ಮೇಯರ್ ಗೆ ಮನವಿ ಸಲ್ಲಿಸಿದ್ದು ತುಳುನಾಡಿನ ದೈವಿಕ ಶಕ್ತಿಗಳಾದ ಕೋಟಿ ಚೆನ್ನಯರ ಹೆಸರಿಡುವಂತೆ ಮನವಿ ಮಾಡಿದ್ದಾರೆ.

ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಬದಲು ಕೋಟಿ ಚೆನ್ನಯ್ಯ ಹೆಸರಿಡಿ; ಶಾಸಕ ಭರತ್ ಶೆಟ್ಟಿಗೆ ಮುಸ್ಲಿಂ ಐಕ್ಯತಾ ವೇದಿಕೆ ಕೌಂಟರ್
ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಬದಲು ಕೋಟಿ ಚೆನ್ನಯ್ಯ ಹೆಸರಿಡಲು ಮನವಿ
TV9 Web
| Edited By: ಆಯೇಷಾ ಬಾನು|

Updated on:Oct 09, 2022 | 8:59 AM

Share

ಮಂಗಳೂರು: ಸುರತ್ಕಲ್ ವೃತ್ತಕ್ಕೆ( Surathkal Circle) ಸಾವರ್ಕರ್​ ಹೆಸರಿಡಲು ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದು ಸಾವರ್ಕರ್(Veer Savarka) ಬದಲಾಗಿ ಸುರತ್ಕಲ್​ ವೃತ್ತಕ್ಕೆ ಕೋಟಿ ಚೆನ್ನಯ್ಯ(Koti Chennaya) ಹೆಸರಿಡಲು ಮುಸ್ಲಿಮರು ಮನವಿ ಮಾಡಿದ್ದಾರೆ. ಈ ಮೂಲಕ ವೀರ ಸಾರ್ವಕರ್​ ಹೆಸರಿಗೆ ಆಕ್ಷೇಪಿಸಿ ಜಾಣ ನಡೆ ಪ್ರದರ್ಶಿಸಿದ್ದಾರೆ. ಜೊತೆಗೆ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೌಂಟರ್ ಕೊಟ್ಟಿದ್ದಾರೆ.

ಮುಸ್ಲಿಂ ಐಕ್ಯತಾ ವೇದಿಕೆಯು ಸುರತ್ಕಲ್ ವೃತ್ತಕ್ಕೆ ಕೋಟಿ ಚೆನ್ನಯ್ಯ ಹೆಸರಿಡಿ ವೀರ ಸಾವರ್ಕರ್​ರೇ ಏಕೆ? ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮುಸ್ಲಿಂ ಐಕ್ಯತಾ ವೇದಿಕೆ ಪಾಲಿಕೆ ಕಮಿಷನರ್ ‌ಮತ್ತು ಮೇಯರ್ ಗೆ ಮನವಿ ಸಲ್ಲಿಸಿದ್ದು ತುಳುನಾಡಿನ ದೈವಿಕ ಶಕ್ತಿಗಳಾದ ಕೋಟಿ ಚೆನ್ನಯರ ಹೆಸರಿಡುವಂತೆ ಮನವಿ ಮಾಡಿದ್ದಾರೆ. ಕೋಟಿ ಚೆನ್ನಯ್ಯರ ಹೆಸರಿನ ಜೊತೆ ನವ ಮಂಗಳೂರು ‌ನಿರ್ಮಾತೃ ಶ್ರೀನಿವಾಸ ಮಲ್ಯ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಎಂ.ಲೋಕಯ್ಯ ಶೆಟ್ಟಿ ಅವರ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಬೋಗಸ್ ದಾಖಲೆ ಸೃಷ್ಟಿಸಿ ಭೂಗಳ್ಳರಿಗೆ ನೆರವು: ಕೆಆರ್​ ಪುರದ ಸರ್ಕಾರಿ ಅಧಿಕಾರಿ ವಿರುದ್ಧ ಮತ್ತೊಂದು ಎಫ್​ಐಆರ್

ಸದ್ಯ ಮಂಗಳೂರು ‌ಮಹಾನಗರ ಪಾಲಿಕೆ ಸಭೆಯಲ್ಲಿ ಸುರತ್ಕಲ್ ಗೆ ಸಾವರ್ಕರ್ ಹೆಸರಿಡಲು ಪ್ರಸ್ತಾವನೆ ಸಲ್ಲಿಸಿದ್ದ ಶಾಸಕ ಭರತ್ ಶೆಟ್ಟಿ ಅವರ ಪ್ರಸ್ತಾಪ ಪಾಸ್ ಆಗಿದೆ. ಇದರ ನಡುವೆ ಮುಸ್ಲಿಂ ಐಕ್ಯತಾ ವೇದಿಕೆಯ ಮನವಿ ಪತ್ರ ಬಂದ ಹಿನ್ನೆಲೆ ಸಾರ್ವಜನಿಕ ಆಕ್ಷೇಪಣೆ ಮತ್ತು ಸಲಹೆ ಪಡೆಯಲು ಪಾಲಿಕೆ ಮುಂದಾಗಿದೆ. ಸುರತ್ಕಲ್ ‌ಸರ್ಕಲ್ ನಾಮಕರಣ ವಿವಾದ ಮಂಗಳೂರು ಪಾಲಿಕೆಗೆ ಮತ್ತೆ ತಲೆ ನೋವು ತಂದಿದೆ. ಇನ್ನು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸೋ ಮುನ್ನವೇ ಮುಸ್ಲಿಮರು ಆಕ್ಷೇಪ ಹೊರ ಹಾಕಿದ್ದು ಯಾವುದೇ ಮುಸ್ಲಿಂ ಹೆಸರು ಸೂಚಿಸದೇ ಮೂವರ ಹೆಸರುಗಳನ್ನು ಸೂಚಿಸುವ ಮೂಲಕ ಅಚ್ಚರಿ‌ ನಡೆ ಪ್ರದರ್ಶಿಸಿದ್ದಾರೆ. ವಿವಾದಿತ ವ್ಯಕ್ತಿಗಳ ಹೆಸರಿಟ್ಟರೆ ಕೋಮು ಸೌಹಾರ್ದ ಹಾಳಾಗುವ ಸಾಧ್ಯತೆ ಅಂತ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:59 am, Sun, 9 October 22

Follow Us
TV9 Web
TV9 Web

TV9 Kannada

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ