AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaleel Murder Case: ಸಂಘ ಪರಿವಾರದ ಕೇಸರಿ ಉಗ್ರರಿಂದ ಮುಸ್ಲಿಂ ಹಾಗೂ ದಲಿತರ ಹತ್ಯೆ ಆಗುತ್ತಿದೆ: ಇಲ್ಯಾಸ್ ಮಹಮ್ಮದ್ ತುಂಬೆ

ಮಂಗಳೂರಿನ ಕಾಟಿಪಳ್ಳದಲ್ಲಿ ಜಲೀಲ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕ್ಲಾಕ್ ಟವರ್ ಬಳಿ ಎಸ್​ಡಿಪಿಐ ಪ್ರತಿಭಟನೆ ಮಾಡಿದ್ದು, ಈ ವೇಳೆ ಇಲ್ಯಾಸ್ ಮಹಮ್ಮದ್ ತುಂಬೆ ಆರ್​ಎಸ್​ಎಸ್​​ ವಿರುದ್ಧ ಕಿಡಿಕಾರಿದ್ದಾರೆ.

Jaleel Murder Case: ಸಂಘ ಪರಿವಾರದ ಕೇಸರಿ ಉಗ್ರರಿಂದ ಮುಸ್ಲಿಂ ಹಾಗೂ ದಲಿತರ ಹತ್ಯೆ ಆಗುತ್ತಿದೆ: ಇಲ್ಯಾಸ್ ಮಹಮ್ಮದ್ ತುಂಬೆ
ಇಲ್ಯಾಸ್ ಮೊಹಮ್ಮದ್ ತುಂಬೆ
TV9 Web
| Edited By: |

Updated on:Dec 30, 2022 | 6:49 PM

Share

ಮಂಗಳೂರು: ಮಂಗಳೂರಿನ (Mangalore) ಕಾಟಿಪಳ್ಳದಲ್ಲಿ ಜಲೀಲ್​ ಕೊಲೆ ಪ್ರಕರಣ (Mangaluru Jaleel Murder Case) ಕ್ಕೆ ಸಂಬಂಧಿಸಿದಂತೆ ನಗರದ ಕ್ಲಾಕ್ ಟವರ್ ಬಳಿ ಎಸ್​ಡಿಪಿಐ ಪ್ರತಿಭಟನೆ ಮಾಡಿದೆ. ಈ ವೇಳೆ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ಮಾತನಾಡಿ, ಸಂಘ ಪರಿವಾರದ ಕೇಸರಿ ಉಗ್ರರು ಹತ್ಯೆ ನಡೆಸುತ್ತಿದ್ದಾರೆ. ಜಿಲ್ಲೆಯ ಪೊಲೀಸ್ ಇಲಾಖೆ ಅವರಿಗೆ ಸಾಥ್ ನೀಡುತ್ತಿದೆ. ಇದಕ್ಕೆ ನಮ್ಮಲ್ಲಿ ಸಾಕಷ್ಟು ಸಾಕ್ಷಿಗಳಿವೆ ಎಂದು ಕಿಡಿಕಾರಿದರು. ಸಿಎಂ ಬೊಮ್ಮಾಯಿ ಆರ್​ಎಸ್​ಎಸ್​ಗೆ ಪ್ರಚೋದನೆ ನೀಡಿದ್ದಾರೆ. ಇಲ್ಲಿ ಮುಸ್ಲಿಂ ಸಮುದಾಯಕ್ಕೆ ಯಾವುದೇ ನ್ಯಾಯ ಸಿಗುತ್ತಿಲ್ಲ‌. ಯುಎಪಿಎ ಅಡಿ ಕೇಸ್​ ದಾಖಲಾದರು ನಾವು ಹೆದರುವುದಿಲ್ಲ. ಜಲೀಲ್ ಕೊಲೆ ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಪ್ರಕರಣದಲ್ಲಿ RSS ಕಾರ್ಯಕರ್ತನ ವಿರುದ್ಧ ಕ್ರಮ ಆಗಬೇಕು. ಚಾರ್ಜ್​ಶೀಟ್​ನಲ್ಲಿ RSS ಹೆಸರು ದಾಖಲಿಸುವಂತೆ ಇಲ್ಯಾಸ್ ಮಹಮ್ಮದ್ ತುಂಬೆ ಒತ್ತಾಯಿಸಿದರು.

ಮೂವರು ಆರೋಪಿಗಳು ವಶಕ್ಕೆ

ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಈ ಹಿಂದೆ ಹೇಳಿಕೆ ನೀಡಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ವಶಕ್ಕೆ ಪಡೆದ ಮೂವರ ಪೈಕಿ ಇಬ್ಬರು ಕೃತ್ಯದಲ್ಲಿ ಭಾಗಿಯಾಗಿದ್ದು, ಒಬ್ಬ ಬೈಕ್​ನಲ್ಲಿ ಕರೆತಂದು ಇಬ್ಬರನ್ನು ಡ್ರಾಪ್ ಮಾಡಿದ್ದ.​ ಕೊಲೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳಲ್ಲಿ ಮತ್ತು 2021ರಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಅವರನ್ನು ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: Mangaluru Jaleel Murder Case: ಜಲೀಲ್ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ, ಆರೋಪಿಗಳ ಬಗ್ಗೆ ಮಾಹಿತಿ ನೀಡಿದ ಕಮಿಷನರ್

ತನಿಖೆ ಬಳಿಕ ಹೆಚ್ಚಿನ ಮಾಹಿತಿ

ಗುರುತು ಪತ್ತೆ ಆಗುವವರೆಗೂ ಆರೋಪಿಗಳ ಮಾಹಿತಿ ಹೇಳಲು ಆಗಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ವಿಚಾರಣೆ ಮಾಡುತ್ತೇವೆ. ಕೊಲೆಗೆ ಕಾರಣ ಏನು ಅನ್ನೋದನ್ನ ಪೂರ್ಣ ತನಿಖೆ ಬಳಿಕ ಹೇಳುತ್ತೇವೆ. ಜಲೀಲ್ ಕೇಸ್​ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನ ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನ ಮಾತ್ರ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: Mangaluru Jaleel Murder Case: ಕಾಟಿಪಳ್ಳಕ್ಕೆ ಜಲೀಲ್ ಮೃತದೇಹ ರವಾನೆ; ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್​​ ವಾತಾವರಣ

ಘಟನೆ ಹಿನ್ನೆಲೆ

ಮಂಗಳೂರು ಹೊರವಲಯದ ಸುರತ್ಕಲ್​​ನ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ಜಲೀಲ್ (45) ಎಂಬುವರಿಗೆ  ದುಷ್ಕರ್ಮಿಗಳು ಡಿ. 24ರಂದು ಚಾಕು ಇರಿದಿದ್ದರು. ಜಲೀಲ್  ಕಾಟಿಪಳ್ಳದ ನೈತಂಗಡಿ ರಸ್ತೆಯಲ್ಲಿರುವ ಲತೀಫಾ ಸ್ಟೋರ್ ಮಾಲಿಕರಾಗಿದ್ದಾರೆ. ಸ್ಟೋರ್​ನಲ್ಲಿದ್ದ ಜಲೀಲ್​ಗೆ ದುಷ್ಕರ್ಮಿಗಳ ಗುಂಪು ಚಾಕು ಇರಿದು ಪರಾರಿಯಾಗಿದ್ದರು. ಇದರಿಂದ ತೀರ್ವ ಗಯಗೊಂಡಿದ್ದ ಜಲೀಲ್​ರನ್ನು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಚಿಕಿತ್ಸೆ ಫಲಕಾರಿಯಾಗದೆ ಜಲೀಲ್​ ಸಾವನ್ನಪ್ಪಿದ್ದಾನೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:47 pm, Fri, 30 December 22

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ