ಮಂಗಳೂರು: ಮಂಗಳೂರಿನ (Mangalore) ಕಾಟಿಪಳ್ಳದಲ್ಲಿ ಜಲೀಲ್ ಕೊಲೆ ಪ್ರಕರಣ (Mangaluru Jaleel Murder Case) ಕ್ಕೆ ಸಂಬಂಧಿಸಿದಂತೆ ನಗರದ ಕ್ಲಾಕ್ ಟವರ್ ಬಳಿ ಎಸ್ಡಿಪಿಐ ಪ್ರತಿಭಟನೆ ಮಾಡಿದೆ. ಈ ವೇಳೆ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ಮಾತನಾಡಿ, ಸಂಘ ಪರಿವಾರದ ಕೇಸರಿ ಉಗ್ರರು ಹತ್ಯೆ ನಡೆಸುತ್ತಿದ್ದಾರೆ. ಜಿಲ್ಲೆಯ ಪೊಲೀಸ್ ಇಲಾಖೆ ಅವರಿಗೆ ಸಾಥ್ ನೀಡುತ್ತಿದೆ. ಇದಕ್ಕೆ ನಮ್ಮಲ್ಲಿ ಸಾಕಷ್ಟು ಸಾಕ್ಷಿಗಳಿವೆ ಎಂದು ಕಿಡಿಕಾರಿದರು. ಸಿಎಂ ಬೊಮ್ಮಾಯಿ ಆರ್ಎಸ್ಎಸ್ಗೆ ಪ್ರಚೋದನೆ ನೀಡಿದ್ದಾರೆ. ಇಲ್ಲಿ ಮುಸ್ಲಿಂ ಸಮುದಾಯಕ್ಕೆ ಯಾವುದೇ ನ್ಯಾಯ ಸಿಗುತ್ತಿಲ್ಲ. ಯುಎಪಿಎ ಅಡಿ ಕೇಸ್ ದಾಖಲಾದರು ನಾವು ಹೆದರುವುದಿಲ್ಲ. ಜಲೀಲ್ ಕೊಲೆ ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಪ್ರಕರಣದಲ್ಲಿ RSS ಕಾರ್ಯಕರ್ತನ ವಿರುದ್ಧ ಕ್ರಮ ಆಗಬೇಕು. ಚಾರ್ಜ್ಶೀಟ್ನಲ್ಲಿ RSS ಹೆಸರು ದಾಖಲಿಸುವಂತೆ ಇಲ್ಯಾಸ್ ಮಹಮ್ಮದ್ ತುಂಬೆ ಒತ್ತಾಯಿಸಿದರು.
ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಈ ಹಿಂದೆ ಹೇಳಿಕೆ ನೀಡಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದೇವೆ. ವಶಕ್ಕೆ ಪಡೆದ ಮೂವರ ಪೈಕಿ ಇಬ್ಬರು ಕೃತ್ಯದಲ್ಲಿ ಭಾಗಿಯಾಗಿದ್ದು, ಒಬ್ಬ ಬೈಕ್ನಲ್ಲಿ ಕರೆತಂದು ಇಬ್ಬರನ್ನು ಡ್ರಾಪ್ ಮಾಡಿದ್ದ. ಕೊಲೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳಲ್ಲಿ ಮತ್ತು 2021ರಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಅವರನ್ನು ನ್ಯಾಯಾಲಯಕ್ಕೆ ಹಾಜರು ಮಾಡಿದ್ದೇವೆ. 14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದರು.
ಇದನ್ನೂ ಓದಿ: Mangaluru Jaleel Murder Case: ಜಲೀಲ್ ಹತ್ಯೆ ಪ್ರಕರಣದಲ್ಲಿ ಮೂವರ ಬಂಧನ, ಆರೋಪಿಗಳ ಬಗ್ಗೆ ಮಾಹಿತಿ ನೀಡಿದ ಕಮಿಷನರ್
ಗುರುತು ಪತ್ತೆ ಆಗುವವರೆಗೂ ಆರೋಪಿಗಳ ಮಾಹಿತಿ ಹೇಳಲು ಆಗಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ವಿಚಾರಣೆ ಮಾಡುತ್ತೇವೆ. ಕೊಲೆಗೆ ಕಾರಣ ಏನು ಅನ್ನೋದನ್ನ ಪೂರ್ಣ ತನಿಖೆ ಬಳಿಕ ಹೇಳುತ್ತೇವೆ. ಜಲೀಲ್ ಕೇಸ್ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನ ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ. ಆದರೆ ಸದ್ಯ ಒಟ್ಟು 3 ಜನರನ್ನ ಮಾತ್ರ ಬಂಧನ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: Mangaluru Jaleel Murder Case: ಕಾಟಿಪಳ್ಳಕ್ಕೆ ಜಲೀಲ್ ಮೃತದೇಹ ರವಾನೆ; ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್ ವಾತಾವರಣ
ಮಂಗಳೂರು ಹೊರವಲಯದ ಸುರತ್ಕಲ್ನ ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ಜಲೀಲ್ (45) ಎಂಬುವರಿಗೆ ದುಷ್ಕರ್ಮಿಗಳು ಡಿ. 24ರಂದು ಚಾಕು ಇರಿದಿದ್ದರು. ಜಲೀಲ್ ಕಾಟಿಪಳ್ಳದ ನೈತಂಗಡಿ ರಸ್ತೆಯಲ್ಲಿರುವ ಲತೀಫಾ ಸ್ಟೋರ್ ಮಾಲಿಕರಾಗಿದ್ದಾರೆ. ಸ್ಟೋರ್ನಲ್ಲಿದ್ದ ಜಲೀಲ್ಗೆ ದುಷ್ಕರ್ಮಿಗಳ ಗುಂಪು ಚಾಕು ಇರಿದು ಪರಾರಿಯಾಗಿದ್ದರು. ಇದರಿಂದ ತೀರ್ವ ಗಯಗೊಂಡಿದ್ದ ಜಲೀಲ್ರನ್ನು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಲೀಲ್ ಸಾವನ್ನಪ್ಪಿದ್ದಾನೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:47 pm, Fri, 30 December 22