ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್

ಕಳೆದ ಶುಕ್ರವಾರ ಮಂಗಳೂರಿನ ಕಂಕನಾಡಿಯ ಮಸೀದಿ ರಸ್ತೆಯ ಮುಂಭಾಗದಲ್ಲಿ ಹಗಲು ವೇಳೆಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದರು. ನಮಾಜ್​ ಮಾಡಿದ ವಿಡಿಯೋ ಎಲ್ಲಡೆ ಹರಿದಾಡಿತ್ತು. ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತಡೆ ಹಿನ್ನಲೆ ಇದೀಗ ಕದ್ರಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಸುಮೊಟೊ ಪ್ರಕರಣವನ್ನು​ ದಾಖಲಿಸಿದ್ದಾರೆ.

ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್
ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:May 28, 2024 | 6:37 PM

ದಕ್ಷಿಣ ಕನ್ನಡ, ಮೇ.28: ಇದೇ ಮೇ.24 ರಂದು ಮಂಗಳೂರಿನ(Mangaluru) ಕಂಕನಾಡಿಯಲ್ಲಿನ ಮಸೀದಿ ಮುಂದೆ ಇರುವ ರಸ್ತೆಯಲ್ಲಿಯೇ ಯುವಕರ ತಂಡವೊಂದು ನಮಾಜ್ ಮಾಡಿದ್ದು, ಆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಸ್​ ದಾಖಲಾಗಿದೆ. ಹೌದು, ಕದ್ರಿ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 341, 283, 143, 149ರ ಅಡಿ ಸ್ವಯಂಪ್ರೇರಿತ ಸುಮೊಟೊ ಪ್ರಕರಣವನ್ನು​ ದಾಖಲಿಸಿದ್ದಾರೆ.

ಏನಿದು ಘಟನೆ?

ಕಳೆದ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಹಗಲು ವೇಳೆಯಲ್ಲಿಯೇ ನಡು ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ್ದರು. ನಮಾಜ್​ ಮಾಡಿದ ವಿಡಿಯೋ ಎಲ್ಲಡೆ ಹರಿದಾಡಿತ್ತು. ಇದಕ್ಕೆ ಎಲ್ಲೆಡೆ  ಅಸಮಧಾನ ವ್ಯಕ್ತವಾಗಿತ್ತು. ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಓಡಾಡಲು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತಡೆಯಾಗಿದ್ದು, ವಾಹನ ಸವಾರರು ಯೂಟರ್ನ್ ತೆಗೆದುಕೊಂಡು ಹೋಗಿದ್ದರು. ಈ ಹಿನ್ನಲೆ ಅಪರಿಚಿತ ವ್ಯಕ್ತಿಗಳ ಮೇಲೆ ಮಂಗಳೂರಿನ ಕದ್ರಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ:ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲಿ ನಮಾಜ್​

ವಿಶ್ವ ಹಿಂದೂ ಪರಿಷತ್​ ಕಿಡಿ

ಈ ಘಟನೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್​ ಕಿಡಿಕಾರಿದ್ದು, ವಿ.ಎಚ್.ಪಿ ಮುಖಂಡ ಪ್ರದೀಪ್ ಸರಿಪಲ್ಲ ಮಾತನಾಡಿ, ‘ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ತಡೆಯುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡುತ್ತೇವೆ. ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡಲು ಈ ರೀತಿಯ ಕೃತ್ಯ ಎಸುಗುತ್ತಿದ್ದಾರೆ. ಮಸೀದಿ ಒಳಗೆ ಸಾಕಷ್ಟು ಜಾಗ ಇದ್ದರೂ ಕೂಡ ಸಾರ್ವಜನಿಕರಿಗೆ ತೊಂದರೆ ಕೊಡಲು ರಸ್ತೆಯಲ್ಲಿ ನಮಾಜ್ ಮಾಡಲಾಗಿದೆ. ಚುನಾವಣೆ ವೇಳೆ ರಸ್ತೆಯಲ್ಲಿ ಇಫ್ತಾರ್ ಕೂಟ ಮಾಡಿದ್ದಾಗ ಕೂಡ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಅದರ ಮುಂದುವರೆದ ಭಾಗವಾಗಿ ಈಗ ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ. ಈ ಮೂಲಕ‌ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಅಲ್ಲಿ ಸಾಮೂಹಿಕ ಹನುಮಾನ್ ಚಾಲೀಸ್ ಪಠಣ ಮಾಡಲಾಗುವುದು ಎಂದು  ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:36 pm, Tue, 28 May 24