Ramadan 2024: ಕರಾವಳಿ ಪ್ರದೇಶದಲ್ಲಿ ನಾಳೆಯೇ ರಂಜಾನ್ ಹಬ್ಬ ಆಚರಣೆ

ramadan Festival 2024: ಕರ್ನಾಟಕದಲ್ಲಿ ನಾಡಿದ್ದು ಅಂದರೆ ಏಪ್ರಿಲ್ 11ರಂದು ರಂಜಾನ್​ ಹಬ್ಬ ಇದೆ. ಆದ್ರೆ, ಕರಾವಳಿ ಪ್ರದೇಶದಲ್ಲಿ ನಾಳೆಯೇ (ಏಪ್ರಿಲ್‌ 10) ರಂಜಾನ್ ಆಚರಿಸಲಾಗುತ್ತದೆ. ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ನಾಳೆಯೇ ರಂಜಾನ್ ಆಚರಿಸಲು ತೀರ್ಮಾನಿಸಲಾಗಿದೆ.

Ramadan 2024: ಕರಾವಳಿ ಪ್ರದೇಶದಲ್ಲಿ ನಾಳೆಯೇ ರಂಜಾನ್ ಹಬ್ಬ ಆಚರಣೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Apr 09, 2024 | 9:01 PM

ಬೆಂಗಳೂರು, (ಏಪ್ರಿಲ್ 10): ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ನಾಳೆಯೇ (ಏಪ್ರಿಲ್‌ 10) ರಂಜಾನ್ (ramadan Festival 2024) ಆಚರಿಸಲಾಗುತ್ತದೆ. ಈ ಬಗ್ಗೆ ದಕ್ಷಿಣ ಕನ್ನಡ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆ. ಇಂದು (ಏಪ್ರಿಲ್ 09) ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿ ಭಾಗದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿಯಲ್ಲಿ ನಾಳೆ(ಏಪ್ರಿಲ್ 09) ರಂಜಾನ್ ಆಚರಿಸಲಾಗುತ್ತದೆ. ಇನ್ನು ಕರಾವಳಿ ಬಿಟ್ಟು ಕರ್ನಾಟಕದ ಎಲ್ಲೆಡೆ ನಾಡಿದ್ದು ಅಂದರೆ ಏಪ್ರಿಲ್ 11ರಂದು ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತದೆ.

ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ನಾಳೆಯೇ ರಂಜಾನ್ ಹಬ್ಬ ಎಂದು ದಕ್ಷಿಣ ಕನ್ನಡ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಪ್ಪತ್ತೊಂಬತ್ತು ದಿನಗಳ ಉಪವಾಸ ವೃತ ಆಚರಿಸಿದ್ದ ಮುಸ್ಲಿಮರು, ನಾಳೆ ಈದುಲ್ ಫಿತರ್ ಹಬ್ಬದೊಂದಿಗೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ ಉಪವಾಸ ಅಂತ್ಯಗೊಳಿಸಲಿದ್ದಾರೆ.

ಇದನ್ನೂ ಓದಿ: Viral Video: ರಂಜಾನ್ ಸ್ಪೆಷಲ್; ಮಾರುಕಟ್ಟೆಗೆ ಎಂಟ್ರಿಕೊಟ್ಟ ಗೋಣಿಚೀಲದ ಕುರ್ತಾ-ಪೈಜಾಮ 

ಮುಸ್ಲಿಂ ಸಮುದಾಯದವರಿಗೆ ಇದು ಪವಿತ್ರ ಹಬ್ಬವಾಗಿದೆ. ಭಾರತ ಮಾತ್ರವಲ್ಲದೆ ವಿಶ್ವದೆಲ್ಲೆಡೆ ಈ ಹಬ್ಬವನ್ನು ಮುಸ್ಲಿಮರು ಸಡಗರ ಸಂಭ್ರಮದಿಂದ ಆಚರಿಸುತ್ತಾರೆ. ರಂಜಾನ್‌ ತಿಂಗಳ ಕೊನೆಯ ದಿನವನ್ನು ಈದ್-ಉಲ್-ಫಿತರ್ ಆಗಿ ಆಚರಿಸಲಾಗುತ್ತದೆ. ರಂಜಾನ್ ತಿಂಗಳ ಉದ್ದಕ್ಕೂ ಮುಸ್ಲಿಂ ಸಮುದಾಯದ ಜನರು ಬೆಳಗ್ಗೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸವನ್ನು ಆಚರಿಸುತ್ತಾರೆ. ಈ ಅವಧಿಯಲ್ಲಿ ಆಹಾರ ಮಾತ್ರವಲ್ಲ ನೀರು ಸಹ ಕುಡಿಯುವುದಿಲ್ಲ. ಈದ್‌ ಚಂದ್ರ ಗೋಚರಿಸಿದ ಬಳಿಕ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ರೋಜಾ ಆಚರಣೆಯನ್ನು ಮುಕ್ತಾಯಗೊಳಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Tue, 9 April 24

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ