AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಕಂಬಳಕ್ಕೆ ತಮ್ಮಣ್ಣ ಶೆಟ್ಟಿ ಆಕ್ಷೇಪ: ತುಳುನಾಡಿನ ದೈವಾರಾಧನೆ ಸಂಪ್ರದಾಯಕ್ಕೆ ವಿರುದ್ಧ ಎಂದ ದೈವಾರಾಧಕ

ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವುದಕ್ಕೆ ತುಳುನಾಡಿನ ದೈವಾರಾಧಕ ತಮ್ಮಣ್ಣ ಶೆಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನವರಾತ್ರಿ (ಮಾರ್ನೆಮಿ) ಸಮಯದಲ್ಲಿ ಕಂಬಳದ ಕೋಣಗಳನ್ನು ಬೇರೆ ಊರಿಗೆ ಕೊಂಡೊಯ್ಯುವುದು ದೈವರಾಧನೆ ಹಾಗೂ ತುಳುನಾಡಿನ ಸಂಪ್ರದಾಯಕ್ಕೆ ವಿರುದ್ಧವಾಗಿದ್ದು, ಮೂಲ ನಿಯಮಗಳನ್ನು ಉಲ್ಲಂಘಿಸಿದರೆ ದೈವಕೋಪ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಮೈಸೂರು ದಸರಾ ಕಂಬಳಕ್ಕೆ ತಮ್ಮಣ್ಣ ಶೆಟ್ಟಿ ಆಕ್ಷೇಪ: ತುಳುನಾಡಿನ ದೈವಾರಾಧನೆ ಸಂಪ್ರದಾಯಕ್ಕೆ ವಿರುದ್ಧ ಎಂದ ದೈವಾರಾಧಕ
ತಮ್ಮಣ್ಣ ಶೆಟ್ಟಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Oct 03, 2026 | 12:11 PM

Share

ಮುಖ್ಯಾಂಶಗಳು

  • ಮೈಸೂರು ದಸರಾ ಕಂಬಳ ಆಯೋಜನೆಗೆ ಕರಾವಳಿಯ ದೈವಾರಾಧಕ ತಮ್ಮಣ್ಣ ಶೆಟ್ಟಿ ತೀವ್ರ ಆಕ್ಷೇಪ.
  • ನವರಾತ್ರಿ ವೇಳೆ ಕೋಣಗಳನ್ನು ಬೇರೆಡೆ ಕೊಂಡೊಯ್ಯುವುದು ತುಳುನಾಡಿನ ದೈವ ನಿಯಮಕ್ಕೆ ವಿರುದ್ಧ.
  • ಮೂಲ ಸಂಪ್ರದಾಯ ಮೀರಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ.

ಮಂಗಳೂರು, ಅಕ್ಟೋಬರ್ 03: ಮೈಸೂರು ದಸರಾ ಮಹೋತ್ಸವದ ಭಾಗವಾಗಿ ಆಯೋಜಿಸಲು ಉದ್ದೇಶಿಸಿರುವ ‘ದಸರಾ ಕಂಬಳ’ ಸ್ಪರ್ಧೆಯು ತುಳುನಾಡಿನ ದೈವಾರಾಧನೆ ಹಾಗೂ ಧಾರ್ಮಿಕ ಸಂಪ್ರದಾಯಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಕರಾವಳಿಯ ಪ್ರಸಿದ್ಧ ದೈವಾರಾಧಕರಾದ ತಮ್ಮಣ್ಣ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕಂಬಳಕ್ಕೂ ದೈವಾರಾಧನೆಗೂ ಅವಿನಾಭಾವ ಸಂಬಂಧ

ಕರಾವಳಿಯ ಕಂಬಳ ಕ್ರೀಡೆಗೂ ಮತ್ತು ದೈವಾರಾಧನೆಗೂ ಅವಿನಾಭಾವ ಸಂಬಂಧವಿದೆ. ಕಂಬಳದ ಗದ್ದೆಗೆ ದೈವ ಸಾನಿಧ್ಯದಷ್ಟೇ ಪವಿತ್ರ ಮಹತ್ವ ನೀಡಲಾಗುತ್ತದೆ. ತುಳುನಾಡಿನಲ್ಲಿ ನವರಾತ್ರಿಯ ಸಮಯವನ್ನು ‘ಮಾರ್ನೆಮಿ’ ಎಂದು ಕರೆಯಲಾಗುತ್ತಿದ್ದು, ಈ ಒಂಬತ್ತು ದಿನಗಳಲ್ಲಿ ದೈವಗಳ ವಿಶೇಷ ಪೂಜೆ ಹಾಗೂ ತಂಬಿಲಗಳು ನಡೆಯುತ್ತವೆ. ಈ ಸಮಯದಲ್ಲಿ ಕಂಬಳದ ಕೋಣಗಳನ್ನು ಬೇರೆ ಊರುಗಳಿಗೆ ಕೊಂಡುಹೋಗುವುದು ದೈವ ನಿಯಮಕ್ಕೆ ತಗಲುವ ಕಟ್ಟುಪಾಡು ಎಂದು ಅವರು ಪ್ರತಿಪಾದಿಸಿದ್ದಾರೆ.

LIVE TV

ನವರಾತ್ರಿ ಸಮಯದಲ್ಲಿ ಕಂಬಳ ಆಯೋಜಿಸಿದ ಇತಿಹಾಸವೇ ಇಲ್ಲ: ತಮ್ಮಣ್ಣ ಶೆಟ್ಟಿ

ದೈವಾರಾಧನೆಯ ಸಾಂಪ್ರದಾಯಿಕ ನಿಯಮಗಳ ಪ್ರಕಾರ 12 ಸಂಕ್ರಮಣ, ಚೌತಿ, ಪರ್ಬ ಹಾಗೂ ಬಿಸು ದಿನಗಳಲ್ಲಿ ಕಠಿಣ ನಿಯಮಗಳನ್ನು ಪಾಲಿಸಲಾಗುತ್ತದೆ. ನವರಾತ್ರಿ ಅವಧಿಯಲ್ಲಿ ಕೋಣದ ಯಜಮಾನರು ತಮ್ಮ ಕುಟುಂಬ ಮತ್ತು ಗ್ರಾಮ ದೈವಗಳ ನಂಟನ್ನು ಗೌರವಿಸಬೇಕಿರುತ್ತದೆ. ಅಲ್ಲದೆ, ಗದ್ದೆಗಳಲ್ಲಿ ಭತ್ತದ ಬೆಳೆ ಇರುವುದರಿಂದ ನವರಾತ್ರಿ ಸಮಯದಲ್ಲಿ ಕರಾವಳಿಯಲ್ಲಿ ಕಂಬಳ ಆಯೋಜಿಸಿದ ಇತಿಹಾಸವೇ ಇಲ್ಲ.

“ಲಾಭಕ್ಕಾಗಿ ಅಥವಾ ಪ್ರಚಾರಕ್ಕಾಗಿ ತುಳುನಾಡಿನ ಸಂಸ್ಕೃತಿ ಮತ್ತು ನಂಬಿಕೆಗಳನ್ನು ಮಾರಾಟ ಮಾಡಬಾರದು. ಸಂಪ್ರದಾಯವನ್ನು ಮೀರಿ ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ,” ಎಂದು ತಮ್ಮಣ್ಣ ಶೆಟ್ಟಿ ಎಚ್ಚರಿಸಿದ್ದಾರೆ. ಮೂಲ ಸಂಪ್ರದಾಯ ಹಾಗೂ ಕಟ್ಟುಪಾಡುಗಳನ್ನು ಕಾಯ್ದುಕೊಂಡು ಕಂಬಳ ಆಯೋಜಿಸುವುದು ಎಲ್ಲರ ಕರ್ತವ್ಯ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು