AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ‌-ಕೊಡಗು ಗಡಿಭಾಗದ ಅಂಗಡಿಯಲ್ಲಿ ದಿನಸಿ ಸಾಮಾನು ಖರೀದಿಸಿದ ನಕ್ಸಲರು

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನಕ್ಸಲರು ಮತ್ತೆ ಕಾಣಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಇರುವ ಅಂಗಡಿಯೊಂದಕ್ಕೆ ಎಂಟು ಜನ ನಕ್ಸಲರು ತೆರಳಿ ದಿನಸಿ ಖರೀದಿಸಿದ್ದಾರೆ.

ದಕ್ಷಿಣ ಕನ್ನಡ‌-ಕೊಡಗು ಗಡಿಭಾಗದ ಅಂಗಡಿಯಲ್ಲಿ ದಿನಸಿ ಸಾಮಾನು ಖರೀದಿಸಿದ ನಕ್ಸಲರು
ನಕ್ಸಲ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Mar 18, 2024 | 9:22 AM

Share

ಮಂಗಳೂರು, ಮಾರ್ಚ್​​ 18: ಮಲೆನಾಡು ಮತ್ತು ಕರಾವಳಿಯಲ್ಲಿ ಭಾಗದಲ್ಲಿ ನಕ್ಸಲರ (Naxal) ಚುಟುವಟಿಕೆ ಮತ್ತೆ ಶುರುವಾಗಿದೆ. ಐದು ವರ್ಷಗಳ ಬಳಿಕ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಕ್ಸಲರು ಮತ್ತೆ ಕಾಣಿಸಿಕೊಂಡಿದ್ದಾರೆ. ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಇರುವ ಅಂಗಡಿಯೊಂದಕ್ಕೆ ಎಂಟು ಜನ ನಕ್ಸಲರು ತೆರಳಿ ದಿನಸಿ ಖರೀದಿಸಿದ್ದಾರೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಕ್ಸಲರಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ನಕ್ಸಲರು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಕೂಜಿಮಲೆ, ಕಲ್ಮಕಾರ್​​ಕ್ಕೆ ನಕ್ಸಲ್ ನಿಗ್ರಹ‌ ಪಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಕೆಲ ದಿನಗಳ ಹಿಂದೆ ಕೊಲ್ಲೂರು ಭಾಗದಲ್ಲಿ ಕಾಣಿಸಿ ಕೊಂಡಿದ್ದ ನಕ್ಸಲರು, ಇದೀಗ ದಕ್ಷಿಣ‌ ಕನ್ನಡದ ಗಡಿ ಭಾಗದಲ್ಲಿ ಪ್ರತ್ಯಕ್ಷವಾಗಿದ್ದಾರೆ.

ಉಡುಪಿ, ಚಿಕ್ಕಮಗಳೂರಿನಲ್ಲಿ ಕಾಣಿಸಿಕೊಂಡಿದ್ದ ನಕ್ಸಲರು

ನಕ್ಸಲರು ಕಳೆದ ತಿಂಗಳು ಫೆಬ್ರವರಿಯಲ್ಲಿ ಕೇರಳದಿಂದ ಉಡುಪಿ ಜಿಲ್ಲೆಯ ಬೈಂದೂರುಗೆ ಆಗಮಿಸಿರುವ ಅನುಮಾನ ವ್ಯಕ್ತವಾಗಿತ್ತು. ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ನೇತೃತ್ವದ ನಕ್ಸಲರ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ಮೂಡಿತ್ತು. ವಿಕ್ರಮ್ ಗೌಡ ಸುಮಾರು 20 ವರ್ಷಗಳ ಹಿಂದೆ ನಕ್ಸಲೈಟ್ ಆಗಿದ್ದಾನೆ. ಕೇರಳದಲ್ಲಿ ಈತ ತನ್ನ ಚಟುವಟಿಕೆಗಳನ್ನು ನಡೆಸುತ್ತಿದ್ದನು.

ಇದನ್ನೂ ಓದಿ: ಉಡುಪಿ ವ್ಯಾಪ್ತಿಯಲ್ಲಿ ನಕ್ಸಲರ ಓಡಾಟ ಕೇಸ್​ಗೆ ಬಿಗ್ ಟ್ವಿಸ್ಟ್: ನಕ್ಸಲರ ಕಥೆ ಹಿಂದಿದೆಯಾ ಡ್ರಗ್ ಮಾಫಿಯಾ?

ಬಿ.ಜಿ ಕೃಷ್ಣಮೂರ್ತಿ ಬಳಿಕ ಕರ್ನಾಟಕದ ನಕ್ಸಲ್ ನಾಯಕತ್ವವನ್ನು ವಿಕ್ರಂ ಗೌಡ ವಹಿಸಿಕೊಂಡಿದ್ದಾನೆ. ಈತನ ತಂಡದ ಮೂವರು ಮೂವರು ಸಶಸ್ತ್ರಧಾರಿಯಾಗಿ ಬೈಂದೂರಿಗೆ ಆಗಮಿಸಿರುವ ಮಾಹಿತಿ ಲಭ್ಯವಾಗಿತ್ತು. ಈ ಮೂವರು ಗ್ರಾಮದ ಮನೆಗಳಿಗೂ ತೆರಳಿ ಹೋಗಿರುವುದಾಗಿ ಮಾಹಿತಿ ಸಿಕ್ಕಿತ್ತು. ನಕ್ಸಲರ ಓಡಾಟ ಮಾಹಿತಿ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿ, ವರ್ಷಗಳ ನಂತರ ಮತ್ತೆ ಬೈಂದೂರಿನಲ್ಲಿ ಕಾರ್ಯಾಚರಣೆ ನಡೆಸಿದ್ದರು.

1990 ರಿಂದ 2012ರ ವರೆಗು ಉತ್ತುಂಗದಲ್ಲಿದ್ದ ನಕ್ಸಲ್​ ಚಟುವಟಿಕೆ

1990 ರಿಂದ 2012ರ ವರೆಗೆ ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಉತ್ತುಂಗದಲ್ಲಿತ್ತು. ಸುಮಾರು 40 ರಿಂದ 45 ಸಕ್ರಿಯ ಸಶಸ್ತ್ರ ನಕ್ಸಲರು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೀದರ್, ರಾಯಚೂರು, ಬಳ್ಳಾರಿ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರದೇಶಗಳಲ್ಲಿ ಆಶ್ರಯ ಪಡೆದಿದ್ದರು.

2005 ಮತ್ತು 2012 ರ ನಡುವೆ, ಎಎನ್​ಎಫ್​​ ಅಧಿಕಾರಿಗಳ 11 ಎನ್‌ಕೌಂಟರ್‌ಗಳಲ್ಲಿ 19 ನಕ್ಸಲರು ಮೃತಪಟ್ಟಿದ್ದರು. ಈ ಕಾರ್ಯಾಚರಣೆಯಲ್ಲಿ ಮೂವರು ಅಧಿಕಾರಿಗಳು ಹುತಾತ್ಮರಾಗಿದ್ದರು. 2005 ರಲ್ಲಿ ತುಮಕೂರಿನಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್​ ಪಡೆಯ ಎಂಟು ಜನ ಸಿಬ್ಬಂದಿಗಳು ಮೃತಪಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ