ಪ್ರವೀಣ್ ನೆಟ್ಟಾರು ಹತ್ಯೆ: ಹಂತಕ ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ

ದಕ್ಷಿಣ ಕನ್ನಡದ ಪ್ರವೀಣ್ ನೆಟ್ಟಾರು ಹ್ಯತ್ಯೆ ಪ್ರಕರಣದ ಆರೋಪಿ ಅಬ್ದುಲ್ ರಹಿಮಾನ್​ನನ್ನು ಎನ್​ಐಎ ಬಂಧಿಸಿದೆ. ಅಬ್ದುಲ್ ರಹಿಮಾನ್​ ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದನು. ಈ ಪ್ರಕರಣದಲ್ಲಿ ಒಟ್ಟು 28 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಪಿಎಫ್​ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್​ಐಎ ಸಲ್ಲಿಸಿದ ಚಾರ್ಜ್​ ಶೀಟ್​ನಲ್ಲಿದೆ.

ಪ್ರವೀಣ್ ನೆಟ್ಟಾರು ಹತ್ಯೆ: ಹಂತಕ ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ
ಆರೋಪಿ ಅಬ್ದುಲ್​ ರಹಿಮಾನ್, ಪ್ರವೀಣ್​ ನೆಟ್ಟಾರು
Edited By: ವಿವೇಕ ಬಿರಾದಾರ

Updated on: Jul 04, 2025 | 7:47 PM

ಮಂಗಳೂರು, ಜುಲೈ 04: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ (Mangaluru) ಪ್ರವೀಣ್ ನೆಟ್ಟಾರು (Praveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್​ನನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್​ ಕತಾರ್​ನಲ್ಲಿ ತಲೆಮರೆಸಿಕೊಂಡಿದ್ದನು. ಶುಕ್ರವಾರ (ಜು.04) ಕತಾರ್​ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು. ಹೀಗಾಗಿ, ಎನ್​ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ
ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ
ಸುಹಾಸ್ ಶೆಟ್ಟಿ ಕೊಲೆ ಆರೋಪಿ ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌
ಸುಹಾಸ್​ ಕೊಲೆಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ: ಭಜರಂಗದಳ ಮುಖಂಡ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

ಇದನ್ನೂ ಓದಿ: ಸುಹಾಸ್​ ಶೆಟ್ಟಿ ಹತ್ಯೆ ಆರೋಪಿಗಳಿಗೆ PFI ನಂಟು: ಕೊಲೆಗೆ ವಿದೇಶದಿಂದ ಹಣದ ನೆರವು..!

ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್​ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್​ಐಎ ಸಲ್ಲಿಸಿದ ಚಾರ್ಜ್​ ಶೀಟ್​ನಲ್ಲಿದೆ.

ಎನ್​ಐಎ ಟ್ವೀಟ್​

ಪ್ರವೀಣ್​ ನೆಟ್ಟಾರು ಕೊಲೆ

2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಗಂಭೀರತೆ ಅರಿತ ಎನ್ಐಎ ಆಗಸ್ಟ್ 4ರಂದು ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಈ ಪ್ರಕರಣದಲ್ಲಿ ಇದುವರೆಗೆ 28 ಜನ ಆರೋಪಿಗಳ ವಿರುದ್ಧ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Fri, 4 July 25

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us