AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾಗತಿಗೆ ವಾರ್ನಿಂಗ್​​: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA

Praveen Nettaru murder: ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡುವುದಾಗಿಯೂ NIA ನ್ಯಾಯಾಲಯ ಅಧಿಕಾರಿಗಳು ಪ್ರಕಟಿಸಿದ್ದಾರೆ.

ಶರಣಾಗತಿಗೆ ವಾರ್ನಿಂಗ್​​: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 28, 2023 | 4:14 PM

Share

ಮಂಗಳೂರು: ಕರ್ನಾಟಕದಲ್ಲಿ ಪ್ರಕರಣವೊಂದ ಕೊಲೆ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿ, ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಹೊಸ ಅಸ್ತ್ರ ಪ್ರಯೋಗಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಶರಣಾಗಲು ಆರೋಪಿಗಳಿಗೆ ಜೂನ್​ 30ರವರೆಗೆ ಗಡುವು ನೀಡಲಾಗಿದೆ. NIA ನ್ಯಾಯಾಲಯಕ್ಕೆ ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಸುಳ್ಯದಲ್ಲಿ (Sullia) ಮೈಕ್ ಅನೌನ್ಸ್ ಮೆಂಟ್​​ ಮೂಲಕ ಸಾರ್ವಜನಿಕವಾಗಿ ಘೋಷಣೆ ಕೂಗಲಾಗಿದೆ (Praveen Nettaru murder case).

ಇದೇ ವೇಳೆ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ನೀಡುವುದಾಗಿಯೂ ಪ್ರಕಟಿಸಿದ್ದಾರೆ. ಸುಳ್ಯದ ಕಲ್ಲುಮುಟ್ಲುವಿನಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಹಾಗೂ ಮುಸ್ತಾಫ್ ನಿವಾಸಕ್ಕೆ ಈ ಕುರಿತಾದ ಭಿತ್ತಿಪತ್ರಗಳನ್ನು NIA ನ್ಯಾಯಾಲಯದ ಅಧಿಕಾರಿಗಳು ಅಂಟಿಸಿದ್ದಾರೆ. ಕೋರ್ಟ್​​ ಆದೇಶದ ಪ್ರತಿಯನ್ನು ಅಂಟಿಸಿರುವ ಅಧಿಕಾರಿಗಳು, ಆರೋಪಿಗಳಿಗೆ ಶರಣಾಗಲು ಇನ್ನೆರೆಡೇ ದಿನ ಕಾಲಾವಕಾಶ ನೀಡಿರುವುದಾಗಿ ತಿಳಿಸಿದ್ದಾರೆ.

ಏನಿದು ಪ್ರಕರಣ: ಪ್ರವೀಣ್ ನೆಟ್ಟಾರು ಹತ್ಯೆ ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದಿತ್ತು. ನೆಟ್ಟಾರು ಕೊಲೆ ಕೇಸ್​ನಲ್ಲಿ ಇದುವರೆಗೆ 21 ಅರೋಪಿಗಳನ್ನು ಎನ್​ಐಎ ಅರೆಸ್ಟ್ ಮಾಡಿ, ಆರೋಪಿಗಳ ವಿರುದ್ದ ಚಾರ್ಜ್​ಶೀಟ್ ಸಲ್ಲಿಸಿತ್ತು. ಅದರ ಮುಂದಿನ ಭಾಗವಾಗಿ ಮತ್ತೆ, ಇಬ್ಬರು ಅರೋಪಿಗಳಾದ ತುಫೈಲ್ ಎಂ ಹೆಚ್ ಮತ್ತು ಮಹಮ್ಮದ್ ಜಬೀರ್ ವಿರುದ್ದ ಪೂರಕ ಚಾರ್ಜ್​ರ್ಶೀಟ್​ ಅನ್ನು ಎನ್ ಐ ಎ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದೆ.

ಕೊಲೆ ಮಾಡಿದ್ದ ಅರೋಪಿಗಳ ಪೈಕಿ ಮಹಮ್ಮದ್ ಜಾಬಿರ್ ಮಸೂದ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಹೇಳಿ ಪ್ರಚೋದನಕಾರಿ ಭಾಷಣವನ್ನೂ ಮಾಡಿದ್ದ ಎಂಬುದು ಎನ್ ಐ ಎ ತನಿಖೆ ವೇಳೆ ಪತ್ತೆಯಾಗಿದೆ. ಒಟ್ಟಾರೆ ಪ್ರವೀಣ್ ನೆಟ್ಟಾರು ಕೊಲೆ ಕೇವಲ ಒಂದು ಕಾರಣಕ್ಕೆ ಆಗಿದ್ದಲ್ಲ, ಬದಲಾಗಿ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ತರುವ ಉದ್ದೇಶಕ್ಕೆ ಪೂರಕವಾಗಿ ಇಟ್ಟಿದ್ದ ಹೆಜ್ಜೆಗುರುತು ಎನ್ನುವುದು ಆತಂಕಕಾರಿ ವಿಷಯವಾಗಿದೆ. ಸದ್ಯ 21 ಅರೋಪಿಗಳ ವಿರುದ್ದ ಈ ಕೇಸ್​ನಲ್ಲಿ ಚಾರ್ಜ್​ರ್ಶಿಟ್ ಸಲ್ಲಿಕೆ ಮಾಡಿರುವ ಎನ್ ಐ ಎ ಹೆಚ್ಚಿನ ತನಿಖೆ ನಡೆಸುತ್ತಿದೆ.

ಮಂಗಳೂರು ಕುರಿತಾದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Wed, 28 June 23

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!