Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳ ಪತ್ತೆಗೆ ತಲಾ 2 ಲಕ್ಷ ಬಹುಮಾನ ಘೋಷಿಸಿದ ಎನ್​ಐಎ

ಪ್ರವೀಣ್ ನೆಟ್ಟಾರು(Praveen Nettar) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಂ. 23 ನೌಷಾದ್, ಆರೋಪಿ ನಂ.22 ಅಬ್ದುಲ್ ನಾಸೀರ್ ಮತ್ತು ಆರೋಪಿ ನಂ.24 ಅಬ್ದುಲ್ ರಹಮಾನ್ ಸೇರಿ ಮೂವರ ಸುಳಿವಿಗೆ ರಾಷ್ಟ್ರೀಯ ತನಿಖಾ ದಳದವರು ತಲಾ 2 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳ ಪತ್ತೆಗೆ ತಲಾ 2 ಲಕ್ಷ ಬಹುಮಾನ ಘೋಷಿಸಿದ ಎನ್​ಐಎ
ಪ್ರವೀಣ್ ನೆಟ್ಟಾರು ಹತ್ಯೆಯ ಮೂವರು ಆರೋಪಿಗಳ ಪತ್ತೆಗೆ ಎನ್​ಐಎ ಬಹುಮಾನ ಘೋಷಣೆ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 27, 2023 | 6:42 PM

ದಕ್ಷಿಣ ಕನ್ನಡ, ಅ.27: ಬಿಜೆಪಿ ಮುಖಂಡ (BJP Worker) ಪ್ರವೀಣ್ ನೆಟ್ಟಾರು(Praveen Nettar) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ (NIA) ಯಿಂದ ಮತ್ತೊಂದು ರಿವಾರ್ಡ್ ವಾಂಟೆಡ್ ನೋಟಿಸ್ ಪ್ರಕಟವಾಗಿದೆ. ಹೌದು, ಆರೋಪಿ ನಂ. 23 ನೌಷಾದ್, ಆರೋಪಿ ನಂ.22 ಅಬ್ದುಲ್ ನಾಸೀರ್ ಮತ್ತು ಆರೋಪಿ ನಂ.24 ಅಬ್ದುಲ್ ರಹಮಾನ್ ಸೇರಿ ಮೂವರ ಸುಳಿವಿಗೆ ತಲಾ 2 ಲಕ್ಷ ಬಹುಮಾನ ಘೋಷಣೆ ಮಾಡಿದೆ. ಇನ್ನು ಈ ಮೂವರು ಕೂಡ ನಿಷೇಧಿತ ಪಿಎಫ್​ಐ ಸಂಘಟನೆ ಕಾರ್ಯಕರ್ತರಾಗಿದ್ದರು. ಈ ಹಿಂದೆ ಎನ್​ಐಎ ಅಧಿಕಾರಿಗಳು ನೌಷಾದ್ ಮನೆ ಮೇಲೆ ದಾಳಿ ನಡೆಸಿ ನೋಟಿಸ್ ನೀಡಿದ್ದರು. ಇದೀಗ ರಾಷ್ಟ್ರೀಯ ತನಿಖಾ ದಳದವರು ಸುಳಿವು ನೀಡಿದವರಿಗೆ ಬರೊಬ್ಬರಿ 2 ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ.

ಇನ್ನು ಇದೇ ಅಕ್ಟೋಬರ್​ 04 ರಂದು ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್‌ ಆದೇಶ ಹೊರಡಿಸಿತ್ತು. ಹೌದು, ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಈ ಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದೆ. ಹೀಗಾಗಿ ಆರೋಪಿ ನಂ. 9 ಕೆ.ಇಸ್ಮಾಯಿಲ್‌ ಶಫಿ, ಆರೋಪಿ ನಂ.10 ಕೆ.ಮೊಹಮ್ಮದ್‌ ಇಕ್ಬಾಲ್‌ ಹಾಗೂ ಆರೋಪಿ. 11 ಎಂ.ಶಾಹೀದ್‌  ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿ ಆದೇಶಿಸಿತ್ತು.

ಇದನ್ನೂ ಓದಿ:ಶರಣಾಗತಿಗೆ ವಾರ್ನಿಂಗ್​​: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಲೆಗೆ ಹೊಸ ಅಸ್ತ್ರ ಪ್ರಯೋಗಿಸಿದ NIA

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್​ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ