NIA Raid: ಕರ್ನಾಟಕ ಸೇರಿದಂತೆ ಹಲವೆಡೆ ಎನ್​​ಐಎ ದಾಳಿ, ಅಪಾರ ಪ್ರಮಾಣದ ನಗದು ಜಪ್ತಿ

ನಿನ್ನೆ(ಮೇ.31) ದೇಶದ ಬಿಹಾರ, ಕರ್ನಾಟಕ, ಕೇರಳ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್​​ಐಎ(NIA) ದಾಳಿ ಮಾಡಿತ್ತು. ಹೌದು ಮೂರು ರಾಜ್ಯಗಳ 85 ಕಡೆ ದಾಳಿ ನಡೆಸಿದ್ದ ಎನ್​ಐಎ ತಂಡ, ಕರ್ನಾಟಕದ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ 25 ಕಡೆ ದಾಳಿ ಮಾಡಿದ್ದು, ಈ ವೇಳೆ ಲಕ್ಷಗಟ್ಟಲೆ ನಗದು ಜಪ್ತಿಯಾಗಿದೆ.

NIA Raid: ಕರ್ನಾಟಕ ಸೇರಿದಂತೆ ಹಲವೆಡೆ ಎನ್​​ಐಎ ದಾಳಿ, ಅಪಾರ ಪ್ರಮಾಣದ ನಗದು ಜಪ್ತಿ
ಎನ್​ಐಎ ದಾಳಿ
Follow us
|

Updated on:Jun 01, 2023 | 1:42 PM

ಬೆಂಗಳೂರು: ನಿನ್ನೆ(ಮೇ.31) ದೇಶದ ಬಿಹಾರ, ಕರ್ನಾಟಕ, ಕೇರಳ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್​​ಐಎ(NIA) ದಾಳಿ ಮಾಡಿತ್ತು. ಹೌದು ಮೂರು ರಾಜ್ಯಗಳ 85 ಕಡೆ ದಾಳಿ ನಡೆಸಿದ್ದ ಎನ್​ಐಎ ತಂಡ, ಕರ್ನಾಟಕದ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ 25 ಕಡೆ ದಾಳಿ ಮಾಡಿದ್ದು, ಕೇರಳ ರಾಜ್ಯದ ಕಾಸರಗೋಡು, ಮಲ್ಲಾಪುರಂ, ಕೋಝಿಕೊಡ್, ತಿರುವನಂತಪುರಂನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ 17,50,100 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಇಂದು(ಜೂ.1) ಕೂಡ ಕೆಲವೆಡೆ ದಾಳಿ ಮುಂದುವರಿಸಿದೆ ಎಂದು ರಾಷ್ಟ್ರೀಯ ತನಿಖಾ ದಳದಿಂದ ಅಧಿಕೃತ ಮಾಹಿತಿ ಟಿವಿ9ಗೆ ಲಭ್ಯವಾಗಿದೆ.

ಬಿಹಾರದಲ್ಲಿ ಮೋದಿ ಕಾರ್ಯಕ್ರಮ ವೇಳೆ ದುಷ್ಕೃತ್ಯಕ್ಕೆ ಸಂಚು ಕೇಸ್, ದಕ್ಷಿಣ ಕನ್ನಡದ16 ಕಡೆ NIA ದಾಳಿ

ಮಂಗಳೂರು: ನಿನ್ನೆ ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ದಾಳಿ ಮಾಡಿದ್ದರು. ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಿದ್ದರು. ಕಳೆದ ವರ್ಷ 2022ರ ಜುಲೈ ತಿಂಗಳಲ್ಲಿ ಬಿಹಾರದ ಪಾಟ್ನಾದಲ್ಲಿ ನಡೆದಿದ್ದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಅಂಶ ಬಹಿರಂಗವಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಐಎನ್​ಎ ಅಧಿಕಾರಿಗಳು ಫುಲ್ವಾರಿ ಶರೀಫ್ ಎಂಬುವವನನ್ನು ಬಂಧಿಸಿದ್ದರು.

ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪದಲ್ಲಿ ಕಮ್ಯುನಿಟಿ ಹಾಲ್​ ಎನ್​ಐಎ ವಶಕ್ಕೆ

ದಕ್ಷಿಣ ಕನ್ನಡದಿಂದ ಹಣಕಾಸು ನೆರವು

ಇನ್ನು ಈ ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಲು ದಕ್ಷಿಣ ಕನ್ನಡದಿಂದ ಹಣಕಾಸು ನೆರವು ನೀಡಲಾಗಿದೆ ಎಂಬ ಸತ್ಯ ತನಿಖೆ ವೇಳೆ ಬಹಿರಂಗವಾಗಿತ್ತು. ಈ ಹಣದ ಜಾಡು ಹಿಡಿದು ಹೊರಟ ಅಧಿಕಾರಿಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಮೂಲಕ ಭಾರತಕ್ಕೆ ಹಣ ಬರುತ್ತಿದ್ದು, ಇದನ್ನು ಭಾರತದಲ್ಲಿ ಭಯೋತ್ಪಾದಕ ಎಸಗಲು ಬಳಸಲಾಗುತ್ತಿದೆ ಎಂಬ ಅಂಶವನ್ನು ಪತ್ತೆ ಹಚ್ಚಿದ್ದರು. ಈ ಹಿನ್ನಲೆ ರಾಜ್ಯದ ಒಟ್ಟು 25 ಕಡೆಗಳಲ್ಲಿ ದಾಳಿ ಮಾಡಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Thu, 1 June 23

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ