NIA Raid: ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು: ದಕ್ಷಿಣ ಕನ್ನಡದ ನಾಲ್ವರು ವಶಕ್ಕೆ

|

Updated on: May 31, 2023 | 11:24 AM

ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್​​ಐಎ ಅಧಿಕಾರಿಗಳ ದಾಳಿ​​ ಮಾಡಿ, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.

NIA Raid: ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು: ದಕ್ಷಿಣ ಕನ್ನಡದ ನಾಲ್ವರು ವಶಕ್ಕೆ
ಎನ್​ಐಎ
Follow us on

ಮಂಗಳೂರು: ಬಿಹಾರದ (Bihar) ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ಎಸಗಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ 16 ಕಡೆ ಎನ್​​ಐಎ (NIA) ಅಧಿಕಾರಿಗಳ ದಾಳಿ​​ ಮಾಡಿ, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರಿನ ಕೂರ್ನಡ್ಕ, ತಾರಿಪಡ್ಪು, ಕುಂಬ್ರದ ಭಾಗದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆಂಬ ಮಾಹಿತಿ ದೊರೆತಿದೆ. ಅಲ್ಲದೇ ಎನ್​ಐಎ ಅಧಿಕಾರಿಗಳು ಬೆಳ್ತಂಗಡಿ ತಾಲೂಕಿನ ವೇಣೂರು ಹಾಗೂ ಉರುವಾಲು ಗ್ರಾಮದ ಹುಣ್ಸೆಕಟ್ಟೆ ನಿವಾಸಿ ಮಹಮ್ಮದ್ ಕೈಸ್ ಎಂಬವುರ ಮನೆ ಮೇಲೆ ದಾಳಿ ಮಾಡಿದ್ದಾರೆ. ಹಾಗೇ ಮೂಡಬಿದ್ರೆ ಪಟ್ಟಾಡಿಯಲ್ಲಿ ಟೈಲ್ಸ್ ಅಂಗಡಿ ಮಾಲಿಕ ಪೆರಿಂಜೆಯ ಬದ್ರುದ್ದೀನ್ ಎಂಬುವರ ಮನೆ ಮೇಲೂ ದಾಳಿ ಮಾಡಿದ್ದಾರೆ.

ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದ NIA ಅಧಿಕಾರಿಗಳು

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮಾರ್ಚ್​ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.

ಇದನ್ನೂ ಓದಿ: ಜೂನ್‌ 1 ರಿಂದ ಎಂದಿನಂತೆ ವಿಮಾನ ಹಾರಾಟ ಪುನರಾರಂಭ

ಪ್ರಧಾನಿ ಮೋದಿ ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಿರುವವರ ಜೊತೆ ಈ ನಾಲ್ವರು ಸಂಪರ್ಕ ಹೊಂದಿದ್ದು, ಹಣಕಾಸು ನೆರವು ಒದಗಿಸಿದ್ದಾರೆ ಎಂಬ ಆರೋಪದಡಿ ದಾಳಿ ನಡೆದಿತ್ತು. ಕೃತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವೂ ಸಹ ಇವರ ಮೇಲಿದೆ ಎಂದು ಹೇಳಲಾಗಿತ್ತು.

ಇನ್ನು ದಾಳಿ ವೇಳೆ ನಂದಾವರಕ್ಕೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಂದಾವರದ ವ್ಯಕ್ತಿಯೊಬ್ಬರು ಹಣಕಾಸಿನ ನೆರವು ನೀಡಿದ ಮೂಲ ಹಾಗೂ ವಿವರಗಳನ್ನು ಪಡೆದುಕೊಳ್ಳಲು ದಾಳಿ ನಡೆದಿತ್ತು. ಮೂವರ ವಿಚಾರಣೆ ನಡೆಸಲಾಗಿತ್ತು. ಇವರಲ್ಲಿ ಒಬ್ಬರು ದುಬೈನಿಂದ ಕಳೆದ ವರ್ಷ ಊರಿಗೆ ಮರಳಿದ್ದರು. ಉಳಿದವರು ಮೆಲ್ಕಾರ್​ನಲ್ಲಿ ಪಾಸ್ ಪೋರ್ಟ್ ವ್ಯವಹಾರ ಮಾಡಿಕೊಂಡಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Wed, 31 May 23