ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿ ಉಗ್ರ ಸಂಚು; ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಎನ್​ಐಎ ದಾಳಿ, ಓರ್ವನ ವಿಚಾರಣೆ

| Updated By: Rakesh Nayak Manchi

Updated on: Mar 05, 2024 | 10:43 PM

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದುಕೊಂಡೇ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಕ್ಷಿಣಕನ್ನಡ ಜಿಲ್ಲೆಯಲ್ಲಿಯೂ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೇರಳದ ಇಡುಕ್ಕಿ ಮೂಲದ ಬಿಜು ಅಬ್ರಹಾಂ ಎಂಬವನ ವಿಚಾರಣೆ ನಡೆಸಲಾಗಿದೆ.

ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿ ಉಗ್ರ ಸಂಚು; ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಎನ್​ಐಎ ದಾಳಿ, ಓರ್ವನ ವಿಚಾರಣೆ
ಎನ್​ಐಎ
Follow us on

ಮಂಗಳೂರು, ಮಾರ್ಚ್​.05: ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದುಕೊಂಡೇ (Bangalore Central Jail) ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣಕನ್ನಡ ಜಿಲ್ಲೆಯಲ್ಲಿಯೂ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಳಿ ನಡೆಸಿದೆ. ಕಡಬ ತಾಲೂಕಿನ ಎಣ್ಮೂರು ಗ್ರಾಮದ ಕುಲಾಯಿತೋಡು ಎಂಬಲ್ಲಿ ಎನ್​ಐಎ ದಾಳಿ ನಡೆಸಿದೆ. ದಾಳಿ ವೇಳೆ ಕೇರಳದ ಇಡುಕ್ಕಿ ಮೂಲದ ಬಿಜು ಅಬ್ರಹಾಂ ಎಂಬವನ ವಿಚಾರಣೆ ನಡೆಸಲಾಗಿದೆ.

ಬಾಡಿಗೆ ಮನೆಯಲ್ಲಿ ವಾಸವಿದ್ದ ಬಿಜು ಅಬ್ರಹಾಂ, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದಾರೆ. ನಾಲ್ಕು‌ ದಿನದ ಹಿಂದಷ್ಟೇ ಎಡಮಂಗಲದಿಂದ ಕುಲಾಯಿತೋಡು ಎಂಬಲ್ಲಿಗೆ ಶಿಫ್ಟ್ ಆಗಿದ್ದರು. ಸದ್ಯ ದಾಳಿ ನಡೆಸಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇನ್ನು ಏಳು ರಾಜ್ಯಗಳ 17 ಸ್ಥಳಗಳಲ್ಲಿ ಎನ್​ಐಎ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಲಷ್ಕರ್-ಏ-ತೊಯ್ಬಾ (ಎಲ್ಇಟಿ) ಸಂಘಟನೆಯ ಭಯೋತ್ಪಾದಕ ನಸೀರ್, ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದುಕೊಂಡೇ ಹಲವರನ್ನ ತೀವ್ರಗಾಮಿಗಳನ್ನಾಗಿ ಮಾಡಿ, ದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಪ್ರಚೋದಿಸಿದ್ದಾನೆ ಎಂಬ ಆರೋಪವಿದೆ. ಸದ್ಯ ಕಡಬ ತಾಲೂಕಿನ ಎಣ್ಮೂರು ಗ್ರಾಮದ ಕುಲಾಯಿತೋಡು ಎಂಬಲ್ಲಿ ಎನ್​ಐಎ ದಾಳಿ ನಡೆಸಿ ಕೇರಳದ ಇಡುಕ್ಕಿ ಮೂಲದ ಬಿಜು ಅಬ್ರಹಾಂ ವಿಚಾರಣೆ ನಡೆಸಿದೆ.

ಇದನ್ನೂ ಓದಿ: ಬೆಂಗಳೂರು ಜೈಲಿನ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಕೆ: ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ಎನ್​ಐಎ ದಾಳಿ

ಎನ್​ಐಎ ಅಧಿಕಾರಿಗಳು ಮಾರ್ಚ್​.04ರ ರಾತ್ರಿ 8 ಗಂಟೆಯಿಂದ ಬೆಳಗ್ಗಿನ ಜಾವ 6 ಗಂಟೆ ವರೆಗೂ ಪರಪ್ಪನ ಅಗ್ರಹಾರದಲ್ಲಿ ಪರಿಶೀಲನೆ ನಡೆಸಿ ನಜೀರ್ ಸೇರಿದಂತೆ ಅನೇಕರ ವಿಚಾರಣೆ ನಡೆಸಿದ್ದಾರೆ. ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು 2022ರ ಜುಲೈನಲ್ಲಿ ರಾಜ್ಯ ರಾಜಧಾನಿಯ ತಿಲಕ ನಗರದ ತಿಲಕ ನಗರದ ಬಹು ಮಹಡಿ ಕಟ್ಟಡದ ಮೂರನೇ ಮಹಡಿಯಲ್ಲಿರುವ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದ, ಲಷ್ಕರ್-ಎ-ತೊಯ್ಬಾ (LeT) ಸಂಘಟನೆ ಜೊತೆ ನಂಟು ಹೊಂದಿದ್ದ ಅಖ್ತರ್‌ ಹುಸೇನ್‌ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು.

ನಂತರ ಕಳೆದ ವರ್ಷ ಜುಲೈ 18 ರಂದು ಸಿಸಿಬಿ ಅಧಿಕಾರಿಗಳು ಆರ್‌ಟಿ ನಗರದ ಸುಲ್ತಾನ್ ಪಾಳ್ಯದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದರು. ಸಿಸಿಬಿ ಪೊಲೀಸರ ಪ್ರಕಾರ ಬಂಧಿತ ಆರೋಪಿಗಳು ನಗರದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು.  ಬಂಧಿತ ಆರೋಪಿಗಳಲ್ಲಿ ಒಬ್ಬನ ಮನೆಯಲ್ಲಿ ನಾಲ್ಕು ಜೀವಂತ ಗ್ರೆನೇಡ್‌ಗಳನ್ನು ಪತ್ತೆಯಾಗಿದ್ದವು. ಹಾಗೆ 7 ನಾಡ ಬಂದೂಕುಗಳು ಮತ್ತು 45 ಸುತ್ತು ಜೀವಂತ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:22 pm, Tue, 5 March 24