AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIA Raid: ಬಿಹಾರದಲ್ಲಿ ಮೋದಿ ಕಾರ್ಯಕ್ರಮ ವೇಳೆ ದುಷ್ಕೃತ್ಯಕ್ಕೆ ಸಂಚು ಕೇಸ್, ದಕ್ಷಿಣ ಕನ್ನಡದ 16 ಕಡೆ NIA ದಾಳಿ

ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಿದ್ದಾರೆ.

NIA Raid: ಬಿಹಾರದಲ್ಲಿ ಮೋದಿ ಕಾರ್ಯಕ್ರಮ ವೇಳೆ ದುಷ್ಕೃತ್ಯಕ್ಕೆ ಸಂಚು ಕೇಸ್, ದಕ್ಷಿಣ ಕನ್ನಡದ 16 ಕಡೆ NIA ದಾಳಿ
ಎನ್​ಐಎ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 31, 2023 | 9:00 AM

Share

ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ (Bihar) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ 2022ರ ಜುಲೈ ತಿಂಗಳಲ್ಲಿ ಬಿಹಾರದ ಪಾಟ್ನಾದಲ್ಲಿ ನಡೆದಿದ್ದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರರು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಅಂಶ ಬಹಿರಂಗವಾಗಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಐಎನ್​ಎ ಅಧಿಕಾರಿಗಳು ಫುಲ್ವಾರಿ ಶರೀಫ್ ಎಂಬುವವನನ್ನು ಬಂಧಿಸಿದ್ದರು.

ಇನ್ನು ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಲು ದಕ್ಷಿಣ ಕನ್ನಡದಿಂದ ಹಣಕಾಸು ನೆರವು ನೀಡಲಾಗಿದೆ ಎಂಬ ಸತ್ಯ ತನಿಖೆ ವೇಳೆ ಬಹಿರಂಗವಾಗಿತ್ತು. ಈ ಹಣದ ಜಾಡು ಹಿಡಿದು ಹೊರಟ ಅಧಿಕಾರಿಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಮೂಲಕ ಭಾರತಕ್ಕೆ ಹಣ ಬರುತ್ತಿದ್ದು, ಇದನ್ನು ಭಾರತದಲ್ಲಿ ಭಯೋತ್ಪಾದಕ ಎಸಗಲು ಬಳಸಲಾಗುತ್ತಿದೆ ಎಂಬ ಅಂಶವನ್ನು ಪತ್ತೆ ಹಚ್ಚಿದ್ದಾರೆ.

ಇದನ್ನೂ ಓದಿ: G-20 in Srinagar: ಜಿ20 ಸಭೆಗಾಗಿ ಕಾಶ್ಮೀರದಲ್ಲಿ ಕಟ್ಟೆಚ್ಚರ, ಎಲ್​ಒಸಿ ಬಳಿ ಬಿಗಿ ಭದ್ರತೆ, 15 ಕಡೆ ಎನ್​ಐಎ ದಾಳಿ

ಈ ಹಿನ್ನೆಲೆ ಇಂದು (ಮೇ.31) ಎನ್​ಐಎ ಅಧಿಕಾರಿಗಳು ಮತ್ತೆ ದಕ್ಷಿಣ ಕನ್ನಡದ ಹಲವು ಕಡೆ ದಾಳಿ ಮಾಡಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದ NIA ಅಧಿಕಾರಿಗಳು

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಮಾರ್ಚ್​ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.

ಪ್ರಧಾನಿ ಮೋದಿ ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಿರುವವರ ಜೊತೆ ಈ ನಾಲ್ವರು ಸಂಪರ್ಕ ಹೊಂದಿದ್ದು, ಹಣಕಾಸು ನೆರವು ಒದಗಿಸಿದ್ದಾರೆ ಎಂಬ ಆರೋಪದಡಿ ದಾಳಿ ನಡೆದಿತ್ತು. ಕೃತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವೂ ಸಹ ಇವರ ಮೇಲಿದೆ ಎಂದು ಹೇಳಲಾಗಿತ್ತು.

ಇನ್ನು ದಾಳಿ ವೇಳೆ ನಂದಾವರಕ್ಕೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಂದಾವರದ ವ್ಯಕ್ತಿಯೊಬ್ಬರು ಹಣಕಾಸಿನ ನೆರವು ನೀಡಿದ ಮೂಲ ಹಾಗೂ ವಿವರಗಳನ್ನು ಪಡೆದುಕೊಳ್ಳಲು ದಾಳಿ ನಡೆದಿತ್ತು. ಮೂವರ ವಿಚಾರಣೆ ನಡೆಸಲಾಗಿತ್ತು. ಇವರಲ್ಲಿ ಒಬ್ಬರು ದುಬೈನಿಂದ ಕಳೆದ ವರ್ಷ ಊರಿಗೆ ಮರಳಿದ್ದರು. ಉಳಿದವರು ಮೆಲ್ಕಾರ್​ನಲ್ಲಿ ಪಾಸ್ ಪೋರ್ಟ್ ವ್ಯವಹಾರ ಮಾಡಿಕೊಂಡಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 am, Wed, 31 May 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?