ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ (Cooker Blast) ಪ್ರಕರಣದ ತನಿಖೆಯನ್ನು ಎನ್ಐಎ ಚುರುಕುಗೊಳಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಇಂದು(ಜನವರಿ 05) ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜ್ (Mangaluru PA Engineering College)ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನಿಂದ ಬಂದಿರುವ 7 NIA ಅಧಿಕಾರಿಗಳು ಕಾಲೇಜಿನಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬಂಧಿತ ಶಂಕಿತ ಉಗ್ರ ಮಾಝ್ ಮುನೀರ್ ಪಿ ಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದಾರೆ. ಹಾಗೂ ಶಂಕಿತ ಉಗ್ರ ಶಾರಿಕ್ ವಿಚಾರಣೆ ನಡೆಸಿದ ಬಳಿಕ ಆತನಿಂದ ಕೆಲ ಮಾಹಿತಿಗಳ ಆಧಾರದ ಮೇಲೆ NIA ಅಧಿಕಾರಿಗಳು ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಟ್ರಾಯಲ್ ಬ್ಲಾಸ್ಟ್ ನಲ್ಲಿ ಶಿವಮೊಗ್ಗ ಪೊಲೀಸರು ಮಾಝ್ ಮುನೀರ್ ಬಂಧಿಸಿದ್ದರು. ಸದ್ಯ ಈ ಪ್ರಕರಣದ ತನಿಖೆಯನ್ನು ಎನ್.ಐ.ಎ ನಡೆಸುತ್ತಿದೆ. ಇನ್ನು ಮಾಝ್ ಮುನೀರ್ ಜೊತೆ ಕುಕ್ಕರ್ ಬ್ಲಾಸ್ಟ್ ರೂವಾರಿ ಶಾರೀಕ್ ಇದ್ದ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ್ಕೂ ನಂಟು ಸಾಧ್ಯತೆ ಇದ್ಯಾ ಎನ್ನುವ ಬಗ್ಗೆ ತನಿಖೆ ನಡೆಸಿದ್ದಾರೆ.
Published On - 3:12 pm, Thu, 5 January 23