ಮಾಜಿ ಶಾಸಕನ ಕುಟುಂಬಕ್ಕೆ ಉಗ್ರರ ನಂಟು? ಬಿಎಂ ಇದಿನಬ್ಬ ಮಗನ ಮನೆ ಮೇಲೆ ಎನ್ಐಎ ದಾಳಿ

ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗ ಬಿ.ಎಂ.ಭಾಷನಿಗೆ ಉಗ್ರರ ಜೊತೆ ನಂಟಿದೆ ಎಂಬ ಬಗ್ಗೆ ಅನುಮಾನ ಮೂಡಿದ್ದು ಬೆಂಗಳೂರಿನಿಂದ ಬಂದ ಎನ್.ಐ.ಎ. ಅಧಿಕಾರಿಗಳ ತಂಡ ಉಳ್ಳಾಲದಲ್ಲಿರುವ ಮನೆ ಮೇಲೆ ದಾಳಿ ನಡೆಸಿದೆ. ಸಿರಿಯ ಮೂಲದ ಐಸಿಸ್ ಉಗ್ರರ ಜೊತೆ ನಂಟಿರುವ ಆರೋಪ? ಕೇಳಿ ಬಂದಿದೆ. ಸದ್ಯ ದಾಳಿ ನಡೆಸಿ ತನಿಖೆ ನಡೆಸಲಾಗುತ್ತಿದೆ.

ಮಾಜಿ ಶಾಸಕನ ಕುಟುಂಬಕ್ಕೆ ಉಗ್ರರ ನಂಟು? ಬಿಎಂ ಇದಿನಬ್ಬ ಮಗನ ಮನೆ ಮೇಲೆ ಎನ್ಐಎ ದಾಳಿ
ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗನ ಮನೆ ಮೇಲೆ ಎನ್.ಐ.ಎ. ದಾಳಿ
Follow us
TV9 Web
| Updated By: ಆಯೇಷಾ ಬಾನು

Updated on:Aug 04, 2021 | 10:53 AM

ಮಂಗಳೂರು: ಮಾಜಿ ಶಾಸಕನ ಕುಟುಂಬಕ್ಕೆ ಉಗ್ರರ ನಂಟಿದೆಯಾ?(Terrorist Links) ಎಂಬ ಅನುಮಾನ ಎದುರಾಗಿದೆ. ಏಕೆಂದರೆ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗನ ಮನೆ ಮೇಲೆ ಬೆಂಗಳೂರು ಎನ್ಐಎ(NIA) ತಂಡ ದಾಳಿ ನಡೆಸಿದೆ. ಮಂಗಳೂರಿನ ಉಳ್ಳಾಲದಲ್ಲಿರುವ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ.

ಮಾಜಿ ಶಾಸಕ ಬಿ.ಎಂ.ಇದಿನಬ್ಬ ಮಗ ಬಿ.ಎಂ.ಬಾಷಾನಿಗೆ ಉಗ್ರರ ಜೊತೆ ನಂಟಿದೆ ಎಂಬ ಬಗ್ಗೆ ಅನುಮಾನ ಮೂಡಿದ್ದು ಬೆಂಗಳೂರಿನಿಂದ ಬಂದ ಎನ್ಐಎ ಅಧಿಕಾರಿಗಳ ತಂಡ ಉಳ್ಳಾಲದಲ್ಲಿರುವ ಮನೆ ಮೇಲೆ ದಾಳಿ ನಡೆಸಿದೆ. ಸಿರಿಯ ಮೂಲದ ಐಸಿಸ್ ಉಗ್ರರ ಜೊತೆ ನಂಟಿರುವ ಆರೋಪ? ಕೇಳಿ ಬಂದಿದೆ. ಸದ್ಯ ದಾಳಿ ನಡೆಸಿ ತನಿಖೆ ನಡೆಸಲಾಗುತ್ತಿದೆ.

ಉಳ್ಳಾಲದಲ್ಲಿ ಮಾಜಿ ಶಾಸಕ, ಸಾಹಿತಿ ದಿ.ಇದಿನಬ್ಬ ಮರಿ ಮೊಮ್ಮಗಳು ಐಸಿಸ್ ಸೇರಿರುವ ಹಿನ್ನೆಲೆ ಎನ್​ಐಎ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದಿನಬ್ಬ ಪುತ್ರ ಇಸ್ಮಾಯಿಲ್ ಬಾಷಾರ ಪುತ್ರಿಯ ಮಗಳು ಅಜ್ಮಲ್ ಕುಟುಂಬ ಮೂರು ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿತ್ತು. 2 ವರ್ಷಗಳ ಹಿಂದೆ ಕಾಸರಗೋಡಿನ 17 ಮಂದಿ ಸಿರಿಯಾದ ಐಸಿಸ್ ಉಗ್ರ ಸಂಘಟನೆ ಸೇರಿದ್ದರು. ಈ 17 ಜನರ ಪೈಕಿ ಇದಿನಬ್ಬ ಪುತ್ರ ಇಸ್ಮಾಯಿಲ್ ಬಾಷಾರ ಮೊಮ್ಮಗಳು ಅಜ್ಮಲ್ ಕುಟುಂಬವೂ ಇತ್ತು. ಅಜ್ಮಲ್​ಳನ್ನ ಕೇರಳ ಮೂಲದ ಎಂಬಿಎ ಪದವೀಧರ ಸಿಯಾಝ್ ಅನ್ನೋನ ಜೊತೆ ವಿವಾಹ ಮಾಡಿ ಕೊಡಲಾಗಿತ್ತು.

ವರ್ಷಗಳ ಹಿಂದೆ ಗಂಡ ಸಿಯಾಝ್ ಉನ್ನತ ಶಿಕ್ಷಣಕ್ಕಾಗಿ ಶ್ರೀಲಂಕಾಕ್ಕೆ ಹೋಗ್ತಿರೋದಾಗಿ ಹೇಳಿ ಹೋದವರು ಇಂದಿನವರೆಗೂ ಸಂಪರ್ಕಕ್ಕೆ ಸಿಕ್ಕಿಲ್ಲ. ಶ್ರೀಲಂಕಾದಿಂದ ಮಸ್ಕತ್ ಹಾಗೂ ಕತಾರ್ ಗೆ ತೆರಳಿ ಅಲ್ಲಿಂದ ಸಿರಿಯಾಕ್ಕೆ ಹೋಗಿ ಐಸಿಸ್ ಸೇರಿದ್ದಾರೆಂದು ಮಾಹಿತಿ‌ ಇತ್ತು. ವೈದ್ಯರಾಗಿರುವ ಸಿಯಾಝ್‍ನ ಸಹೋದರ ಕೂಡ ಹೆಂಡತಿ ಮತ್ತು ಮಗುವಿನೊಂದಿಗೆ ತೆರಳಿದ್ದ. ಈ ಬಗ್ಗೆ ಕೇರಳ ಆಂತರಿಕ ಭದ್ರತಾ ಹಾಗೂ ಗುಪ್ತಚರ ಇಲಾಖೆ ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ಆರಂಭಿಸಿತ್ತು. ಅದೇ ತನಿಖೆಯ ಭಾಗವಾಗಿ ಅಜ್ಮಲ್ ಅಜ್ಜ ಇಸ್ಮಾಯಿಲ್ ಭಾಷಾ ಮನೆಗೆ ದಾಳಿ ನಡೆದಿರಬಹುದು ಎನ್ನಲಾಗುತ್ತಿದೆ. ಸಾಹಿತಿಯೂ ಆಗಿದ್ದ ದಿ.ಇದಿನಬ್ಬ ಮೂರು ಬಾರಿ ಕಾಂಗ್ರೆಸ್ ನಿಂದ ಉಳ್ಳಾಲ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: ಉಗ್ರರಿಂದ ಗುಂಡಿನ ದಾಳಿ: ಬಾಂಗ್ಲಾ ಗಡಿಯಲ್ಲಿ ಕಲಬುರಗಿ ಜಿಲ್ಲೆಯ ಯೋಧ ಹುತಾತ್ಮ

Published On - 9:29 am, Wed, 4 August 21