ಮಂಗಳೂರು: ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್ ​ಬುಕ್​ನಲ್ಲಿ ಪೋಸ್ಟ್​

ಏಪ್ರಿಲ್​ 23 ರಂದು ಜಮ್ಮು-ಕಾಶ್ಮೀರದ ಪಹಲ್ಗಾವ್​ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ಮಾಡಿದ್ದರು. ಈ ಗುಂಡಿನ ದಾಳಿಯಲ್ಲಿ ಕರ್ನಾಟಕದ ಇಬ್ಬರು ಪ್ರವಾಸಿಗರು ಸೇರಿದಂತೆ 27 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯನ್ನು ಸಮರ್ಥಿಸಿ ಫೇಸ್​ಬುಕ್​ ಪೇಜ್​ವೊಂದರಲ್ಲಿ ಪೋಸ್ಟ್​ ಹಾಕಲಾಗಿದೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಮಂಗಳೂರು: ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್ ​ಬುಕ್​ನಲ್ಲಿ ಪೋಸ್ಟ್​
ಪೆಹಲ್ಗಾವ್​ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್​ಬುಕ್​ನಲ್ಲಿ ಪೋಸ್
Edited By:

Updated on: Apr 25, 2025 | 2:45 PM

ಮಂಗಳೂರು, ಏಪ್ರಿಲ್​ 25: ಜಮ್ಮು-ಕಾಶ್ಮೀರದ (Jammu and Kashmir) ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು (Pahalgam Terror Attack) ಸಮರ್ಥಿಸಿಕೊಂಡು ಪೋಸ್ಟ್​ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಸತೀಶ್ ಕುಮಾರ್ ಎಂಬವರು‌ ನೀಡಿದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 192 ಮತ್ತು 353(1)(,b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್​ಬುಕ್ ಪೇಜ್​ನ ಡಿಪಿ‌ಯಲ್ಲಿರುವ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಿಚ್ಚು ಮಂಗಳೂರು ಎಂಬ‌ ಫೇಸ್​ಬುಕ್​ ಪೇಜ್​ನಲ್ಲಿ, “2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್​ನಲ್ಲಿ ಮೂವರು ಮುಸ್ಲಿಮರನ್ನು‌ ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್​ಗೆ ಸಾರ್ವಜನಿಕವಾಗಿ ನೇಣಿಗೆ ಹಾಕಲಿಲ್ಲ. ಪಾಲ್ಗರ್ ಘಟನೆ ಕಾರಣಕ್ಕೆ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ” ಎಂದು ಪೋಸ್ಟ್​ ಹಾಕಲಾಗಿದೆ. ಈ ಪೋಸ್ಟ್​ಗೆ ಸಾಮಾಜಿಕ‌ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಪೇಸ್ ​ಬುಕ್​ ಪೇಜ್​ನ ಡಿಪಿಯಲ್ಲಿರುವ ಯುವಕ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ‌ಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿ, ಹಿಂದೂಗಳ ಶಿರಚ್ಛೇದ ಮಾಡುತ್ತೇವೆ

ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದರು. ನಮ್ಮ ಸರ್ಕಾರ ಬಂದರೆ, ಹಿಂದೂ ಮನೆಗಳಲ್ಲಿ ಒಬ್ಬನೂ ಉಳಿಯುವುದಿಲ್ಲ ಎಂದು ಮೊಯಿನ್ ಸಿದ್ದಿಕಿ ಅಲಿಯಾಸ್ ಚೋಟಿ ಕಟ್ವಾ ಹೇಳಿದ್ದರು.

ಇದನ್ನೂ ಓದಿ
ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ಪಾಕಿಗಳ ವಿರುದ್ಧ ಕ್ರಮ: ಪರಮೇಶ್ವರ್
ಪೀರ್ ಪಂಜಾಲ್ ಪರ್ವತದಲ್ಲಿ ಅಡಗಿ ಕುಳಿತಿದ್ದಾರಂತೆ ಪಹಲ್ಗಾಮ್ ದಾಳಿಕೋರರು
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಎನ್​ಕೌಂಟರ್
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ

ಇದನ್ನೂ ಓದಿ: ಗಂಡನ ಕಳೆದುಕೊಂಡ ದುಃಖದಲ್ಲಿದ್ದರೆ, ಹತ್ಯೆಗೆ ಸಂಚು ರೂಪಿಸಿದ್ದೇ ಪತ್ನಿ ಎಂದವ ಅರೆಸ್ಟ್​

ಪಾಕಿಸ್ಥಾನ ಸಮರ್ಥನೆ: ಆಸ್ಸಾಂ ಶಾಸಕ ಅರೆಸ್ಟ್​

ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿ ಕೃತ್ಯಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವನ್ನು ಸಮರ್ಥಿಸಿಕೊಂಡಿದ್ದ ಎಐಯುಡಿಎಫ್​ ಶಾಸಕ ಅಮಿನಲ್​ ಇಸ್ಲಾಂ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದರು.

ಕ್ಷಮೆಯಾಚಿಸಿದ ಕಾಂಗ್ರೆಸ್​ ಶಾಸಕ

ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ದಾಳಿಗೆ ಕಾರಣ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಇದು ವಿವಾದಕ್ಕೀಡಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಕ್ಷಮೆಯಾವಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 am, Fri, 25 April 25