ಸುರತ್ಕಲ್​ನಲ್ಲಿ ಫಾಜಿಲ್ ಹತ್ಯೆ: ನೈಟ್ ಕರ್ಫ್ಯೂ ಜಾರಿ, ಮಂಗಳೂರು ಸಂಪೂರ್ಣ ಸ್ತಬ್ಧ

| Updated By: ಆಯೇಷಾ ಬಾನು

Updated on: Jul 29, 2022 | 9:26 PM

ಮಂಗಳೂರಿನ ಸುರತ್ಕಲ್ನಲ್ಲಿ ಫಾಜೀಲ್ ಹತ್ಯೆ ಹಿನ್ನೆಲೆ ಸಂಜೆ 6 ರಿಂದ ಬೆಳಗ್ಗೆ 6 ವರಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.

ಸುರತ್ಕಲ್​ನಲ್ಲಿ ಫಾಜಿಲ್ ಹತ್ಯೆ: ನೈಟ್ ಕರ್ಫ್ಯೂ ಜಾರಿ, ಮಂಗಳೂರು ಸಂಪೂರ್ಣ ಸ್ತಬ್ಧ
ಮಂಗಳೂರಿನಲ್ಲಿ ಹೈ ಅಲರ್ಟ್​
Follow us on

ಮಂಗಳೂರು: ಮಂಗಳೂರಿನ ಸುರತ್ಕಲ್ನಲ್ಲಿ ಫಾಜೀಲ್ ಹತ್ಯೆ ಹಿನ್ನೆಲೆ ಸಂಜೆ 6 ರಿಂದ ಬೆಳಗ್ಗೆ 6 ವರಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿ ಮುಂಗಟ್ಟು ಬಂದ್ ಆಗಿರಲಿದೆ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಜಿಲ್ಲಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿಗಳು ಬಂದ್ ಮಾಡಲು ಆದೇಶ ಹೊರಡಿಸಿದ್ದರು. ಈಗ ನೈಟ್ ಕರ್ಫ್ಯೂ ಜಾರಿಯಿಂದಾಗಿ ಮಂಗಳೂರು ನಗರ ಸಂಪೂರ್ಣ ಸ್ತಬ್ಧವಾದಂತಾಗಿದೆ.

ಮಂಗಳೂರಿನಲ್ಲಿ ಎಲ್ಲವೂ ಬಂದ್

ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಅಂಗಡಿಗಳು ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇಂದಿನಿಂದ(ಜುಲೈ 29) ಆಗಸ್ಟ್ 1ರ ಬೆಳಗ್ಗೆ 6ರವರೆಗೆ ಆದೇಶ ಅನ್ವಯವಾಗಲಿದೆ. ತುರ್ತು ಸೇವೆಗಳನ್ನ ಹೊರತು ಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಮಾಡಲು ತಿಳಿಸಲಾಗಿದೆ. ಹಾಗೂ ಎಲ್ಲಾ ಗ್ರಾ.ಪಂ. ಮತ್ತು ಸ್ಥಳೀಯ ಸಂಸ್ಥೆಗಳಿಗೂ ಈ ಆದೇಶ ಅನ್ವಯವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧ

ಇಡೀ ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಈಗಾಗಲೇ ಬಜ್ಪೆ, ಪಣಂಬೂರು, ಮುಲ್ಕಿ ಸುರತ್ಕಲ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದು ಜಿಲ್ಲೆಯಲ್ಲಿ 2 ದಿನ ಮದ್ಯ ಮಾರಾಟ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಕರಾವಳಿಯಲ್ಲಿ ಸರಣಿ ಕೊಲೆ.. ಸಿಟಿಯಲ್ಲಿ ಹೈಅಲರ್ಟ್

ಕರಾವಳಿಯ ಹತ್ಯಾಕಾಂಡದಿಂದ ಬೆಚ್ಚಿರುವ ಸರ್ಕಾರ, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿದೆ. ಇವತ್ತು, ಪೊಲೀಸ್ ಮಹಾನಿರ್ದೇಶಕರನ್ನ ಕರೆಸಿಕೊಂಡು ಸಿಎಂ ಚರ್ಚೆ ನಡೆಸಿದ್ರು. ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸೂಚಿಸಿದ್ರು. ಹಾಗೇ, ಫಾಜಿಲ್​​ ಹತ್ಯೆಗೈದಿರುವ ಹಂತಕರ ಪತ್ತೆಗೆ ತಂಡ ರಚಿಸಿದ್ದೇವೆ ಅಂತಂದ್ರು.

ಇನ್ನು, ಬೆಂಗಳೂರು ಡಿಸಿಪಿಗಳ ಜತೆ ಪೊಲೀಸ್ ಕಮಿಷನರ್ ಸಭೆ ನಡೆಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಬಂದೋಬಸ್ತ್​ ಹೆಚ್ಚು ಮಾಡಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಕೆಲವೊಂದು ನಿರ್ದಿಷ್ಟ ಪ್ರದೇಶಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ನಗರಕ್ಕೆ ಬರುವ ಹೋಗುವವರ ಮೇಲೆ ನಿಗಾವಹಿಸಿದ್ದಾರೆ.

Published On - 9:10 pm, Fri, 29 July 22