Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪೊಲೀಸ್ ಹಾಗೂ RAW ಅಧಿಕಾರಿ ಎಂದು ಕಾಲೇಜಿನಲ್ಲಿ ಬಿಲ್ಡಪ್ ಕೊಡ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

ಅಗ್ರಿಕಲ್ಚರ್ , RAW ಅಧಿಕಾರಿ ಹೀಗೆ ನಾನಾ ಹೆಸರು ಹೇಳಿಕೊಂಡು ಕಾಲೇಜಿನಲ್ಲಿ ಬಿಲ್ಡಪ್​ ಕೊಡಯತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಕಾಲೇಜಿನಲ್ಲಿ ಡ್ರಗ್ಸ್​ ಅವೇರ್​ನೆಸ್ ಕಾರ್ಯಕ್ರಮದ ವೇಳೆ ಬೆನೆಡಿಕ್ಟ್ ಸಾಬು ಅಸಲಿ ಮುಖ ಬೆಳಕಿಗೆ ಬಂದಿದೆ.

ಮಂಗಳೂರು: ಪೊಲೀಸ್ ಹಾಗೂ RAW ಅಧಿಕಾರಿ ಎಂದು ಕಾಲೇಜಿನಲ್ಲಿ ಬಿಲ್ಡಪ್ ಕೊಡ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್
ಬೆನೆಡಿಕ್ಟ್ ಸಾಬು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Aug 21, 2023 | 9:59 AM

ಮಂಗಳೂರು, (ಆಗಸ್ಟ್ 21): ಪೊಲೀಸ್ ಹಾಗೂ RAW ಅಧಿಕಾರಿ ಎಂದು ಹೇಳಿಕೊಂಡು ವಂಚನೆ ಮಾಡುತ್ತಿದ್ದ ಮಂಗಳೂರಿನ (Mangaluru) ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯನ್ನು(Student) ಪೊಲೀಸರು ಬಂಧಿಸಿದ್ದಾರೆ. ಕೇರಳದ ಇಡುಕಿ ಮೂಲದ ಆರೋಪಿ ಬೆನೆಡಿಕ್ಟ್ ಸಾಬು ಬಂಧಿತ ವಿದ್ಯಾರ್ಥಿ. 6 ತಿಂಗಳ ಹಿಂದೆ ಜಿಎನ್​ಎಂ ಕೋರ್ಸ್​ಗೆ ಸೇರಿದ್ದ ಬೆನೆಡಿಕ್ಟ್ ಸಾಬು, ಕೇರಳದ ಕೃಷಿ ಅಧಿಕಾರಿ ಎಂದು ಪ್ರಿನ್ಸಿಪಾಲ್​ ಬಳಿ ಹೇಳಿದ್ದ. ಬಳಿಕ ಸಬ್ ಇನ್ಸ್​ಪೆಕ್ಟರ್​ ಎಂದು ಹೇಳಿಕೊಂಡಿದ್ದ. ಅಲ್ಲದೇ ಸದ್ಯ RAW ಫೀಲ್ಡ್ ಏಜೆಂಟ್ ಆಗಿರುವುದಾಗಿ ಹೇಳಿಕೊಂಡಿದ್ದ. ಬಳಿಕ ಕಾಲೇಜಿನಲ್ಲಿ ಡ್ರಗ್ಸ್​ ಅವೇರ್​ನೆಸ್ ಕಾರ್ಯಕ್ರಮದ ವೇಳೆ ಬೆನೆಡಿಕ್ಟ್ ಸಾಬು ಅಸಲಿ ಮುಖ ಬೆಳಕಿಗೆ ಬಂದಿದೆ.

ಮೊದಲು ತಾನು ಕೇರಳ ಅಗ್ರಿಕ ರ್ ಇಲಾಖೆಯ ಅಧಿಕಾರಿ ಎಂದು ಕಾಲೇಜಿನ ಪ್ರಿನ್ಸಿಪಾಲ್ ಗೆ ತಿಳಿಸಿದ್ದ ವಿದ್ಯಾರ್ಥಿ, ನಂತರ ಕೇರಳ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಎಂದು ಹೇಳಿ ಕೊಂಡಿದ್ದ. ಆದ್ರೆ, ಕಾಲೇಜಿನಲ್ಲಿ ನಲ್ಲಿ ಪೊಲೀಸ್ ಇಲಾಖೆಯಿಂದ ಆಯೋಸಲಾಗಿದ್ದ ಡ್ರಗ್ ಜಾಗೃತಿ ಕಾರ್ಯಕ್ರಮದ ವೇಳೆ ಬೆನೆಡಿಕ್ಟ್ ಸಾಬು ವರ್ತನೆಯಿಂದ ಪೊಲೀಸರಿಗೆ ಅನುಮಾನ ಬಂದಿದೆ. ಕಾರ್ಯಕ್ರಮ ಮುಗಿದ ಬಳಿಕ ಪೊಲೀಸರು ವಿದ್ಯಾರ್ಥಿ ಬೆನೆಡಿಕ್ಟ್ ಸಾಬುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ: ಬೆಂಗಳೂರು: ಬಸ್​ನಲ್ಲಿ ಪ್ರಯಾಣಿಕರ ಲ್ಯಾಪ್​ಟಾಪ್​ ಕದಿಯುತ್ತಿದ್ದ ಆರೋಪಿಗಳ ಬಂಧನ, 39 ಲ್ಯಾಪ್‌ಟಾಪ್​ ವಶಕ್ಕೆ

ಪೊಲೀಸರಿಗೂ ಸಹ ತಾನು RAW ಅಧಿಕಾರಿ ಎಂದು ಹೇಳಿಕೊಂಡಿದ್ದ. ಸಾಲದಕ್ಕೆ ಪೊಲೀಸ್ ಸಮವಸ್ತ್ರವನ್ನು ಹೊಲಿಸಿಕೊಂಡಿದ್ದ. ಇದರಿಂದ ಅನುಮಾನಗೊಂಡು ಉರ್ವಾ ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆನೆಡಿಕ್ಟ್ ಸಾಬು ಮುಖವಾಡ ಬಟಾಬಯಲಾಗಿದೆ, ಬಂಧಿತನಿಂದ ನಕಲಿ‌ ಐಡಿ ಕಾರ್ಡ್​ಗಳು, ಪೊಲೀಸ್ ಸಮವಸ್ತ್ರ, ಮೊಬೈಲ್, ಲ್ಯಾಪ್​ಟಾಪ್ ವಶಪಡಿಸಿಕೊಂಡಿದ್ದಾರೆ.

ಮಂಗಳೂರಿನ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್