ಮಂಗಳೂರು: KPSC ಪರೀಕ್ಷೆಯಲ್ಲಿ ಬೇಜವಾಬ್ದಾರಿತನ, ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳ ಬಳಕೆ

| Updated By: ಆಯೇಷಾ ಬಾನು

Updated on: Dec 17, 2023 | 2:50 PM

ಮಂಗಳೂರಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಅವ್ಯವಸ್ಥೆ ಕಂಡು ಬಂದಿದೆ. ಮಂಗಳೂರಿನ ಬಲ್ಮಠ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ರಾಜ್ಯ ಲೆಕ್ಕ ಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರ ಹುದ್ದೆಗೆ ಪರೀಕ್ಷೆ ನಡೆದಿದ್ದು ಪರೀಕ್ಷಾ ಕೇಂದ್ರದಲ್ಲಿ ತಪಾಸಣೆಗೆ ವಿದ್ಯಾರ್ಥಿಗಳ ಬಳಕೆ ಮಾಡಿಕೊಳ್ಳಲಾಗಿದೆ.

ಮಂಗಳೂರು: KPSC ಪರೀಕ್ಷೆಯಲ್ಲಿ ಬೇಜವಾಬ್ದಾರಿತನ, ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳ ಬಳಕೆ
ಕೆಪಿಎಸ್​ಸಿ ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳ ಬಳಕೆ
Follow us on

ಮಂಗಳೂರು, ಡಿ.17: ಪಿಎಸ್​ಐ ಪರೀಕ್ಷಾ ಅಕ್ರಮ (PSI Exam) ಬಯಲಾಗುತ್ತಿದ್ದಂತೆ ಸರ್ಕಾರ ಪ್ರತಿ ಸ್ಪರ್ಧಾತ್ಮಕ ಪರೀಕ್ಷೆಯ ಮೇಲೂ ಕಟ್ಟುನಿಟ್ಟಿನ ನಿಗಾವಹಿಸುತ್ತಿದೆ. ಅಕ್ರಮವನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪರೀಕ್ಷೆಗೂ ಮುನ್ನ ಅಭ್ಯರ್ಥಿಗಳ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತಿದೆ. ಆದರೆ ಇಷ್ಟೆಲ್ಲಾ ಗಮನ ಹರಿಸಿದರೂ ಪ್ರಯೋಜನ ಆಗುತ್ತಿಲ್ಲ. ಏಕೆಂದರೆ ಮಂಗಳೂರಿನಲ್ಲಿ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಮಂಗಳೂರಿನ ಕೆಪಿಎಸ್​ಸಿ ಪರೀಕ್ಷಾ ಕೇಂದ್ರದಲ್ಲಿ (KPSC exam) ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.

ಮಂಗಳೂರಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಅವ್ಯವಸ್ಥೆ ಕಂಡು ಬಂದಿದೆ. ಮಂಗಳೂರಿನ ಬಲ್ಮಠ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ರಾಜ್ಯ ಲೆಕ್ಕ ಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರ ಹುದ್ದೆಗೆ ಪರೀಕ್ಷೆ ನಡೆದಿದ್ದು ಪರೀಕ್ಷಾ ಕೇಂದ್ರದಲ್ಲಿ ತಪಾಸಣೆಗೆ ವಿದ್ಯಾರ್ಥಿಗಳ ಬಳಕೆ ಮಾಡಿಕೊಳ್ಳಲಾಗಿದೆ. ಸಣ್ಣ ಸಣ್ಣ ಮಕ್ಕಳು ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ತಪಾಸಣೆ ಮಾಡುವ ಕಾರ್ಯ ಮಾಡಿದ್ದಾರೆ.

ಇದನ್ನೂ ಓದಿ: ಸಿವಿಲ್ ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆಯಲ್ಲಿ ಹೈ ಅಲರ್ಟ್; ENT ತಜ್ಞರಿಂದ ಅಭ್ಯರ್ಥಿಗಳ ಕಿವಿ ತಪಾಸಣೆ

ಸರ್ಕಾರಿ ಪರೀಕ್ಷೆಗೆ ವಿದ್ಯಾರ್ಥಿಗಳನ್ನ ತಪಾಸಣೆಗೆ ಬಳಸಿಕೊಂಡು ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದಾರೆ. ವಿದ್ಯಾರ್ಥಿಗಳು ಮೆಟಲ್ ಡಿಟೆಕ್ಟರ್ ಹಿಡಿದು ಪರೀಕ್ಷಾರ್ಥಿಗಳ ತಪಾಸಣೆ ಮಾಡಿದ್ದಾರೆ. ಮೆಟಲ್ ಡಿಟೆಕ್ಟರ್ ಹಿಡಿದು ನಿಂತ ವಿದ್ಯಾರ್ಥಿಗಳು ಬೇಕಾಬಿಟ್ಟಿಯಾಗಿ ಪರೀಕ್ಷಾರ್ಥಿಗಳನ್ನು ತಪಾಸಣೆ ಮಾಡಿದ್ದಾರೆ. ಪರೀಕ್ಷಾ ಕ್ರಮವನ್ನು ತಡೆಯುವ ದೃಷ್ಟಿಯಿಂದ ಮೊಬೈಲ್ ಜಾಮರ್, ಮೆಟಲ್ ಡಿಟೆಕ್ಟರ್, ಬಯೋ ಮೆಟ್ರಿಕ್ ಫೇಸ್ ಡಿಟೆಕ್ಷನ್ ಹಾಗೂ ಬಾಡಿ ಕ್ಯಾಮೆರಾ ಬಳಕೆಗೆ ಕೆಪಿಎಸ್‌ಸಿ ಸೂಚಿಸಿದೆ. ಆದರೆ ವಿದ್ಯಾರ್ಥಿಗಳನ್ನು ಬಳಸಿಕೊಂಡು ಕಾಟಾಚಾರದ ತಪಾಸಣೆಯನ್ನು ನಡೆಸಲಾಗಿದೆ. ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ಏಳೆಂಟು ವಿದ್ಯಾರ್ಥಿಗಳಿಂದ ಅಭ್ಯರ್ಥಿಗಳ ತಪಾಸಣೆ ಮಾಡಲಾದ ಫೋಟೋಗಳು ಸಿಕ್ಕಿವೆ. ಭದ್ರತೆ ಬಗ್ಗೆ ಅರಿವೇ ಇಲ್ಲದ ಮಕ್ಕಳನ್ನು ಪರೀಕ್ಷಾ ಕೇಂದ್ರದ ಭದ್ರತೆಗೆ ನೇಮಕ ಮಾಡಲಾಗಿದೆ. ಕೆಪಿಎಸ್ಸಿ ಪರೀಕ್ಷಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಬಲ್ಮಠ ಕಾಲೇಜು ಸೇರಿ ಮಂಗಳೂರಿನ ಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ.

ಇನ್ನು ಘಟನೆ ಸಂಬಂಧ ಟಿವಿ9ಗೆ ಪರೀಕ್ಷಾರ್ಥಿ ಜಯ್ವಂತ್ ಪ್ರತಿಕ್ರಿಯೆ ನೀಡಿದ್ದು, ಇವತ್ತು ಬೆಳಗ್ಗೆ ಮತ್ತು ಮಧ್ಯಾಹ್ನ 2 ಎಕ್ಸಾಂ ಇದ್ದವು. ಬೆಳಗ್ಗೆ ಯಾವುದೇ ರೀತಿ ಸರಿಯಾದ ತಪಾಸಣೆ ಇರಲಿಲ್ಲ. ಈಗ ಮಾತ್ರ ಮೊಬೈಲ್ ನಲ್ಲಿ ಫೋಟೋ ತೆಗೆದುಕೊಳ್ಳುತ್ತಿದ್ದಾರೆ. ಪರೀಕ್ಷಾ ಕೊಠಡಿಯಲ್ಲಿ ಪರೀಕ್ಷೆ ಸ್ಟಾಫ್ ಬಳಿ ಬಾಡಿ ಕ್ಯಾಮರಾ ಇರಲಿಲ್ಲ. ಕೊಠಡಿಯಲ್ಲಿ ಸಿಸಿಟಿವಿ ಇತ್ತು ಆದರೆ ಅದು ವರ್ಕ್ ಆಗ್ತಾ ಇದೆಯಾ ಇಲ್ವಾ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:45 pm, Sun, 17 December 23