ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಅಮಿತ್​ ಶಾ ಭೇಟಿ ಹಿನ್ನಲೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ

ಜಿಲ್ಲೆಯ ಪುತ್ತೂರಿಗೆ ಫೆಬ್ರವರಿ 11ರಂದು ಅಮಿತ್​ ಶಾ ಭೇಟಿ ನೀಡುವ ಹಿನ್ನಲೆ ಇಂದು(ಫೆ.2) ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ.

ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಅಮಿತ್​ ಶಾ ಭೇಟಿ ಹಿನ್ನಲೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ
ಅಮಿತ್ ಶಾ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 02, 2023 | 3:05 PM

ಮಂಗಳೂರು: ಜಿಲ್ಲೆಯ ಪುತ್ತೂರಿಗೆ ಫೆಬ್ರವರಿ 11ರಂದು ಅಮಿತ್​ ಶಾ ಭೇಟಿ ನೀಡಿಲಿದ್ದು, ಪುತ್ತೂರು ತೆಂಕಿಲ ವಿವೇಕಾನಂದ ಸಂಸ್ಥೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೋಳ್ಳಲಿದ್ದಾರೆ. ಜೊತೆಗೆ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿಗೂ ಭೇಟಿ ನೀಡಲಿದ್ದಾರೆ. ಈ ಹಿನ್ನಲೆ ಇಂದು(ಫೆ.2) ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಚಿವರಾದ ಎಸ್​.ಅಂಗಾರ​, ಕೋಟ ಶ್ರೀನಿವಾಸ ಪೂಜಾರಿ, ಸುನೀಲ್​ ಕುಮಾರ್​, ರಾಜ್ಯ ಬಿಜೆಪಿ ಅಧ್ಯಕ್ಷ ಕಟೀಲು ಉಪಸ್ಥಿತರಿರಲಿದ್ದಾರೆ.

ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ಬಿಜೆಪಿ ಚಾಣಾಕ್ಯ ಅಮಿತ್​ ಶಾ ಭೇಟಿ  ಬಿಜೆಪಿಗೆ  ಬೂಸ್ಟ್​ ನೀಡುವುದಂತು ಸುಳ್ಳಲ್ಲ. ಈ ಹಿಂದೆ ಜನವರಿ 28 ರಂದು ಧಾರವಾಡದಲ್ಲಿ ಭರ್ಜರಿ ರೋಡ್​ ಶೋ ನಡೆಸಿ ಕಾಂಗ್ರೆಸ್​ ಹಾಗೂ ಜೆಡಿಎಸ್​ ಬಗ್ಗೆ ಹರಿಹಾಯ್ದಿದ್ದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ ಕಾಂಗ್ರೆಸ್​ ಹೈ ಕಮಾಂಡ್​ ಕರ್ನಾಟಕವನ್ನ ಎಟಿಎಂ ಮಾಡಿಕೊಂಡಿತ್ತು ಎಂದು ಸಿದ್ದರಾಮಯ್ಯ ಸರ್ಕಾರ ವಿರುದ್ದ ಟೀಕೆ ಮಾಡಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬರುತ್ತಿದ್ದು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೋಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿಯೇ ಇಂದು ಮಧ್ಯಾಹ್ನ ಸಭೆ ಕರೆದಿದ್ದು, ನಂತರವೇ ಕಾರ್ಯಕ್ರಮದ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Thu, 2 February 23