ಮಂಗಳೂರು: ಜಿಲ್ಲೆಯ ಪುತ್ತೂರಿಗೆ ಫೆಬ್ರವರಿ 11ರಂದು ಅಮಿತ್ ಶಾ ಭೇಟಿ ನೀಡಿಲಿದ್ದು, ಪುತ್ತೂರು ತೆಂಕಿಲ ವಿವೇಕಾನಂದ ಸಂಸ್ಥೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೋಳ್ಳಲಿದ್ದಾರೆ. ಜೊತೆಗೆ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿಗೂ ಭೇಟಿ ನೀಡಲಿದ್ದಾರೆ. ಈ ಹಿನ್ನಲೆ ಇಂದು(ಫೆ.2) ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ರಾಜ್ಯ ಬಿಜೆಪಿ ಅಧ್ಯಕ್ಷ ಕಟೀಲು ಉಪಸ್ಥಿತರಿರಲಿದ್ದಾರೆ.
ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇದ್ದು, ಬಿಜೆಪಿ ಚಾಣಾಕ್ಯ ಅಮಿತ್ ಶಾ ಭೇಟಿ ಬಿಜೆಪಿಗೆ ಬೂಸ್ಟ್ ನೀಡುವುದಂತು ಸುಳ್ಳಲ್ಲ. ಈ ಹಿಂದೆ ಜನವರಿ 28 ರಂದು ಧಾರವಾಡದಲ್ಲಿ ಭರ್ಜರಿ ರೋಡ್ ಶೋ ನಡೆಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಬಗ್ಗೆ ಹರಿಹಾಯ್ದಿದ್ದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ ಕಾಂಗ್ರೆಸ್ ಹೈ ಕಮಾಂಡ್ ಕರ್ನಾಟಕವನ್ನ ಎಟಿಎಂ ಮಾಡಿಕೊಂಡಿತ್ತು ಎಂದು ಸಿದ್ದರಾಮಯ್ಯ ಸರ್ಕಾರ ವಿರುದ್ದ ಟೀಕೆ ಮಾಡಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬರುತ್ತಿದ್ದು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೋಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿಯೇ ಇಂದು ಮಧ್ಯಾಹ್ನ ಸಭೆ ಕರೆದಿದ್ದು, ನಂತರವೇ ಕಾರ್ಯಕ್ರಮದ ಬಗ್ಗೆ ಅಧಿಕೃತ ಮಾಹಿತಿ ಸಿಗಲಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:50 pm, Thu, 2 February 23