AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ ನೆಪದಲ್ಲಿ ವೃತ್ತಕ್ಕೆ ಹಸಿರು ಬಟ್ಟೆ ಅಲಂಕಾರ! ಪರಿಸ್ಥಿತಿಯ ಗಂಭೀರತೆ ಅರಿತು ಹಸಿರು ಬಟ್ಟೆ ತೆರವು ಮಾಡಿದ ಪೊಲೀಸರು

ಈದ್ ಮಿಲಾದ್ ಹಬ್ಬದ ಹಿನ್ನೆಲೆ ವೀರ ಸೈನಿಕನ ಹೆಸರಿನ ವೃತ್ತಕ್ಕೆ ಹಸಿರು ಬಟ್ಟೆ ಮತ್ತು ಹಸಿರು ಬಾವುಟ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

ಈದ್ ನೆಪದಲ್ಲಿ ವೃತ್ತಕ್ಕೆ ಹಸಿರು ಬಟ್ಟೆ ಅಲಂಕಾರ! ಪರಿಸ್ಥಿತಿಯ ಗಂಭೀರತೆ ಅರಿತು ಹಸಿರು ಬಟ್ಟೆ ತೆರವು ಮಾಡಿದ ಪೊಲೀಸರು
ಈದ್ ನೆಪದಲ್ಲಿ ವೃತ್ತಕ್ಕೆ ಹಸಿರು ಬಟ್ಟೆ ಅಲಂಕಾರ
TV9 Web
| Updated By: ಆಯೇಷಾ ಬಾನು|

Updated on:Oct 08, 2022 | 2:20 PM

Share

ಮಂಗಳೂರು: ಇಸ್ಲಾಂನ ಕೊನೆಯ ಪ್ರವಾದಿ ಹಜರತ್ ಮುಹಮ್ಮದ್ ಜನಿಸಿದ ದಿನದ ಅಂಗವಾಗಿ ಅಕ್ಟೋಬರ್ 9ರಂದು ಮುಸ್ಲೀಮರು ಈದ್ ಮಿಲಾದ್ ಹಬ್ಬವನ್ನು ಆಚರಿಸುತ್ತಾರೆ. ಹಬ್ಬದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಸಂದೀಪ್ ಉನ್ನಿಕೃಷ್ಣನ್ ವೃತ್ತಕ್ಕೆ ಹಸಿರು ಬಟ್ಟೆ ಹೊದಿಸಿ ತಯಾರಿ ಮಾಡಿಕೊಳ್ಳಲಾಗಿದೆ. ಆದ್ರೆ ಹಸಿರು ಬಟ್ಟೆ ಹೊದಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ.

ಈದ್ ಮಿಲಾದ್ ಹಬ್ಬದ ಹಿನ್ನೆಲೆ ವೀರ ಸೈನಿಕನ ಹೆಸರಿನ ವೃತ್ತಕ್ಕೆ ಹಸಿರು ಬಟ್ಟೆ ಮತ್ತು ಹಸಿರು ಬಾವುಟ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಹಸಿರು ಬಟ್ಟೆ ತೆಗೆಯಲು ಹಿಂದೂ ಪರ ಸಂಘಟನೆಗಳು ಆಗ್ರಹಿಸಿವೆ. ಅಧಿಕಾರಿಗಳು ತಕ್ಷಣ ಪರಿಸ್ಥಿತಿ ಗಂಭೀರತೆ ಅರಿತು ಹಸಿರು ಬಟ್ಟೆ ತೆರವು ಮಾಡಿದ್ದಾರೆ. ಸದ್ಯ ಹಸಿರು ಬಟ್ಟೆ ತೆರವು ಮಾಡಿ ಪೊಲೀಸರು ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಸಂಪ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಅನುಮೋದನೆಗೆ ಬಿಜೆಪಿ ಕ್ಯಾಬಿನೆಟ್​ ಅಸ್ತು

ಚಿಕ್ಕಮಗಳೂರು ದತ್ತಪೀಠದ ಹೋಮ ಮಂಟಪದಲ್ಲೇ ಮಾಂಸಹಾರದ ಊಟ, ಹಿಂದೂ ಭಾವನೆಗಳಿಗೆ ಧಕ್ಕೆ

ಚಿಕ್ಕಮಗಳೂರು: ಇಲ್ಲಿನ ಐತಿಹಾಸಿಕ ದತ್ತಪೀಠದ ಆವರಣದಲ್ಲಿರುವ ಹೋಮ ಮಂಟಪದಲ್ಲಿಯೇ ಮತ್ತೆ ಮಾಂಸಹಾರದ ಊಟ (Meat consumption) ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಭಾವೈಕ್ಯತೆ ಕೇಂದ್ರದಲ್ಲಿ (chikmagalur datta peeta) ಹೀಗೆ ಮತ್ತೆ ಹಿಂದೂಗಳ (Hindus) ಭಾವನೆಗಳಿಗೆ ಧಕ್ಕೆ ಮಾಡಿರುವುದರಿಂದ ಹಿಂದೂ ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವೇ ಕ್ರಮ ಕೈಗೊಳ್ತೀವಿ ಎಂದೂ ಹಿಂದೂ ಬ್ರಿಗೇಡ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯದಿಂದ ಹೋಮ ಮಂಟಪದಲ್ಲಿ ಮಾಂಸಾಹಾರ ಸೇವನೆಯಾಗಿದೆ. ಪೀಠದ ಆವರಣದ ಪಕ್ಕದಲ್ಲೇ ಹೋಮಕ್ಕೆಂದು ನಿರ್ಮಿಸಿರುವ ತಾತ್ಕಾಲಿಕ ಶೆಡ್ ನಲ್ಲಿ ಮಾಂಸಾಹಾರ ಮಾಡಲಾಗಿದೆ. ಆರು ತಿಂಗಳ ಹಿಂದೆಯೂ ಇದೇ ಮಂಟಪದಲ್ಲಿ ಬಿರಿಯಾನಿ ಮಾಡಿದ್ದರು. ಆದರೆ ಕ್ರಮ ಕೈಗೊಳ್ಳುತ್ತೇವೆಂದು ಹೇಳಿ ಜಿಲ್ಲಾಡಳಿತ ಸುಮ್ಮನಾಗಿದೆ ಎಂದು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 2:00 pm, Sat, 8 October 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​