Part Time Job: ಮಂಗಳೂರಿನಲ್ಲಿ ಹೆಚ್ಚುತ್ತಿದೆ ಆನ್​ಲೈನ್ ಪಾರ್ಟ್​ ಟೈಮ್ ಉದ್ಯೋಗ ವಂಚನೆ

ಪಾರ್ಟ್​​ಟೈಮ್ ಜಾಬ್ ವಿಚಾರದಲ್ಲಿ ವಂಚಿಸುತ್ತಿರುವ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಹೆಚ್ಚಾಗುತ್ತಿದ್ದು, ಜನವರಿಯಿಂದ ಈವರೆಗೆ ನಗರದಲ್ಲಿ 27 ಪ್ರಕರಣಗಳು ದಾಖಲಾಗಿವೆ.

Part Time Job: ಮಂಗಳೂರಿನಲ್ಲಿ ಹೆಚ್ಚುತ್ತಿದೆ ಆನ್​ಲೈನ್ ಪಾರ್ಟ್​ ಟೈಮ್ ಉದ್ಯೋಗ ವಂಚನೆ
ಮಂಗಳೂರಿನಲ್ಲಿ ಹೆಚ್ಚುತ್ತಿದೆ ಆನ್​ಲೈನ್ ಪಾರ್ಟ್​ ಟೈಮ್ ಉದ್ಯೋಗ ವಂಚನೆ (ಸಾಂದರ್ಭಿಕ ಚಿತ್ರ)
Follow us
Rakesh Nayak Manchi
|

Updated on: Jun 23, 2023 | 7:48 AM

ಮಂಗಳೂರು: ನಗರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅರೆಕಾಲಿಕ ಉದ್ಯೋಗ (Part Time Job) ವಂಚನೆ (Fraud) ಪ್ರಕರಣಗಳು ಹೆಚ್ಚಾಗುತ್ತಿದೆ. ಈ ವರ್ಷದ ಜನವರಿಯಿಂದ ಈವರೆಗೆ ಮಂಗಳೂರು (Mangaluru) ನಗರದ ಸಿಇಎನ್ ಪೊಲೀಸರು 27 ಅರೆಕಾಲಿಕ ಉದ್ಯೋಗ ವಂಚನೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ವಂಚಕರು ವಿವಿಧ ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ಸಂಪರ್ಕಿಸಿ ಹೆಚ್ಚುವರಿ ಆದಾವುದಾಗಿ ಭರವಸೆ ನೀಡಿ ನಂತರ ಮೋಸಗೊಳಿಸುತ್ತಾರೆ.

ಹಣದ ಮೇಲೆ ಲಾಭದಾಯಕ ಆದಾಯವನ್ನು ನೀಡುವ ಮೂಲಕ ವಂಚಕರು ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ಸಂಪರ್ಕಿಸುತ್ತಾರೆ. ಆರಂಭದಲ್ಲಿ ವಂಚಕರು ಉತ್ತಮ ಆದಾಯವನ್ನು ನೀಡಿ ಜನರನ್ನ ಮತ್ತಷ್ಟು ಆಕರ್ಷಿಸುತ್ತಾರೆ. ಇದಕ್ಕೆ ಮರುಳಾದ ಜನರು ದೊಡ್ಡ ಹೂಡಿಕೆ ಮಾಡಿದ ನಂತರ ವಂಚಕರು ಸಂಪರ್ಕಕ್ಕೆ ಸಿಗುವುದಿಲ್ಲ.

ಇದನ್ನೂ ಓದಿ: ಮಂತ್ರವಾದಿಯ ಸೋಗಿನಲ್ಲಿ ವಂಚನೆ ಆರೋಪ, ಮನೆಯಲ್ಲಿ ಕೂಡಿ ಹಾಕಿ ಹಲ್ಲೆ: ವಿಡಿಯೋ ವೈರಲ್​

ವಂಚಕರು ಜನರನ್ನು ಮೋಸದ ಬಲೆಗೆ ಬೀಳಿಸಲು ಪ್ರತಿಬಾರಿಯೂ ಹೊಸಹೊಸ ತಂತ್ರಗಳನ್ನು ಪ್ರಯೋಗಿಸುತ್ತಾರೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸುದ್ದಿ ಸಂಸ್ಥೆ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ. ವಂಚಕರ ತಂತ್ರಗಳ ಬಗ್ಗೆ ಜನರು ತಿಳಿದುಕೊಂಡ ಹಿನ್ನೆಲೆ ಅವರು ಹೊಸ ತಂತ್ರಗಳನ್ನು ಪ್ರಯೋಗಿಸುತ್ತಾರೆ. ಲಿಂಕ್ ಅನ್ನು ಸಾಮಾನ್ಯವಾಗಿ ಟೆಲಿಗ್ರಾಮ್ ಅಪ್ಲಿಕೇಶನ್​ನಲ್ಲಿ ಅಥವಾ ಇಮೇಲ್ ಅಥವಾ ಇತರ ಪ್ಲಾಟ್ಫಾರ್ಮ್​ಗಳ ಮೂಲಕ ಕಳುಹಿಸಲಾಗುತ್ತದೆ. ಪ್ರತಿ ಪ್ರಕರಣದಲ್ಲೂ ಸರಾಸರಿ 40,000-50,000 ರೂ.ಗಳನ್ನು ವಂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ನಗರದಲ್ಲಿ ವರದಿಯಾದ 112 ಪ್ರಕರಣಗಳಲ್ಲಿ 27 ಅರೆಕಾಲಿಕ ಉದ್ಯೋಗ ಪ್ರಕರಣಗಳಾಗಿವೆ. ಇದನ್ನು ಹೊರತುಪಡಿಸಿ ಸಿಇಎನ್ ಪೊಲೀಸರು, 14 ಗ್ರಾಹಕ ಸೇವಾ ವಂಚನೆ ಪ್ರಕರಣ, 13 ಹೂಡಿಕೆ ವಂಚನೆ ಪ್ರಕರಣ, 11 ಕೆವೈಸಿ ವಂಚನೆ ಪ್ರಕರಣ ಮತ್ತು ಸುಮಾರು 8 ಸಾಮಾಜಿಕ ಮಾಧ್ಯಮ ವಂಚನೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ಇಂತಹ ಹಲವಾರು ಪ್ರಕರಣಗಳು ಇನ್ನೂ ವರದಿಯಾಗುತ್ತಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಕುಲದೀಪ್ ಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು