ಕನ್ನಡೇತರ ನಾಮಫಲಕ ತೆರವಿಗೆ ತುಳುನಾಡಿನಲ್ಲಿ ವಿರೋಧ; ಯಾವುದೇ ಬೋರ್ಡ್​ಗೆ ಕೈ ಹಾಕದಂತೆ ಎಚ್ಚರಿಕೆ

ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡೇತರ ನಾಮಫಲಕ ಧ್ವಂಸಗೊಳಿಸಿ ಹೋರಾಟ ನಡೆಯುತ್ತಿರುವ ಹಿನ್ನೆಲೆ ಆಕ್ರೋಶಗೊಂಡಿರುವ ತುಳು ಭಾಷೆ ಹೋರಾಟಗಾರರು ತುಳುನಾಡಿನಲ್ಲಿ ಯಾವುದೇ ಬೋರ್ಡ್​​ಗೆ ಕೈ ಹಾಕದಂತೆ ಎಚ್ಚರಿಕೆ ನೀಡಿದ್ದಾರೆ.

ಕನ್ನಡೇತರ ನಾಮಫಲಕ ತೆರವಿಗೆ ತುಳುನಾಡಿನಲ್ಲಿ ವಿರೋಧ; ಯಾವುದೇ ಬೋರ್ಡ್​ಗೆ ಕೈ ಹಾಕದಂತೆ ಎಚ್ಚರಿಕೆ
ಕನ್ನಡೇತರ ನಾಮಫಲಕ ತೆರವಿಗೆ ತುಳುನಾಡು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿರೋಧ; ಯಾವುದೇ ಬೋರ್ಡ್​ಗೆ ಕೈ ಹಾಕದಂತೆ ಎಚ್ಚರಿಕೆ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on: Mar 08, 2024 | 12:01 PM

ಮಂಗಳೂರು, ಮಾ.8: ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ (Kannada Nameplate) ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡೇತರ ನಾಮಫಲಕ ಧ್ವಂಸಗೊಳಿಸಿ ಹೋರಾಟ ನಡೆಯುತ್ತಿರುವ ಹಿನ್ನೆಲೆ ಆಕ್ರೋಶಗೊಂಡಿರುವ ತುಳು (Tulu) ಭಾಷೆ ಹೋರಾಟಗಾರರು ತುಳುನಾಡಿನಲ್ಲಿ ಯಾವುದೇ ಬೋರ್ಡ್​​ಗೆ ಕೈ ಹಾಕದಂತೆ ಎಚ್ಚರಿಕೆ ನೀಡಿದ್ದಾರೆ.

ಪ್ರೀತಿಯಿಂದ ಭಾಷೆಗಳನ್ನು ಬಳಸಬೇಕೇ ಹೊರತು ಒತ್ತಾಯದ ಹೇರಿಕೆ ಸರಿಯಲ್ಲ ಎಂದು ತುಳು ಹೋರಾಟಗಾರ ರೋಷನ್ ರೇನಾಲ್ಡ್ ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಸರ್ಕಾರದ ಕಡತಗಳಲ್ಲೇ ಇಂಗ್ಲೀಷ್ ಇದೆ. ಇವರು ಮೊದಲು ಅದನ್ನೆಲ್ಲಾ ತೆಗೆಯಲಿ ಎಂದರು.

ಬೋರ್ಡ್​ಗಳನ್ನು ಒಡೆಯುವುದು ಒಂದು ದಂಧೆ

ಬೋರ್ಡ್​ಗಳನ್ನು ಒಡೆಯುವುದು ಒಂದು ದಂಧೆಯಾಗಿದೆ. ಬೋರ್ಡ್ ಮಾಡುವ ಅಂಗಡಿಗಳಿಂದ ಇವರಿಗೆ ಫಂಡಿಂಗ್ ಆಗುತ್ತಿದೆ. ತುಳುವರು ಯಾವತ್ತು ಭಾಷೆಗಳ ವಿರೋಧಿಗಳಲ್ಲ. ತುಳು ಭಾಷೆ ರಾಜ್ಯದ ಎರಡನೇ ಭಾಷೆ ಆಗಬೇಕೆಂದು ಎರಡು ವರ್ಷಗಳಿಂದ ಕೇಳುತ್ತಿದ್ದೇವೆ. ಪಂಚದ್ರಾವಿಡ ಭಾಷೆಗಳಲ್ಲಿ ತುಳು ಭಾಷೆಯೂ ಒಂದು. ಎಲ್ಲಾ ಭಾಷೆಗಳು ಎಂಟನೇ ಪರಿಚ್ಛೇದಕ್ಕೆ ಸೇರಿವೆ. ಆದರೆ ತುಳು ಬಾಕಿ ಉಳಿದಿದೆ. ಇದರ ಬಗ್ಗೆ ನಮಗೆ ಬಹಳ ನೋವಿದೆ ಎಂದರು.

ಇಲ್ಲಿರುವ ನಾಲ್ಕೈದು ತುಳುವರು ಕನ್ನಡ ಸಂಘಟನೆ ಕಟ್ಟಿಕೊಂಡಿದ್ದಾರೆ. ಕನ್ನಡ ಉಳಿಸಬೇಕೆಂದಿದ್ದರೆ ಅವರಿಗೆ ಶಿಕ್ಷಣದಲ್ಲಿ ಉಳಿಸಬೇಕಿತ್ತು. ಕನ್ನಡ ಶಾಲೆಗಳು ಇವತ್ತು ಮುಚ್ಚುತ್ತಿದೆ. ಅದು ಬಿಟ್ಟು ವ್ಯಾಪಾರ ಮಾಡುವ ಅಂಗಡಿಗಳ ಬೋರ್ಡ್ ಒಡೆಯುವುದು ಸರಿಯಲ್ಲ. ತುಳುನಾಡಿನಲ್ಲಿ ಭಾಷೆಗಳ ನಡುವೆ ದ್ವೇಷ ಸೃಷ್ಟಿಸಿ ಜಗಳ ಪ್ರಾರಂಭಿಸುವುದನ್ನು ನಾವು ಒಪ್ಪಲ್ಲ ಎಂದರು.

ಇದನ್ನೂ ಓದಿ: ಕನ್ನಡ ನಾಮಫಲಕ: ಗಡುವು ವಿಸ್ತರಿಸಿದ್ದಕ್ಕೆ ಕರವೇ ನಾರಾಯಣಗೌಡ ಗರಂ, ಸರ್ಕಾರಕ್ಕೆ ಖಡಕ್ ಎಚ್ಚರಿಕೆ

ತುಳುನಾಡಿನಲ್ಲಿ ಎಲ್ಲಿಯೂ ಸಹ ಯಾವುದೇ ಬೋರ್ಡ್​ಗೆ ಕೈ ಹಾಕಿದರೆ ಇದನ್ನು ಖಂಡಿಸುತ್ತೇವೆ. ಕೊರೊನಾ ಬಳಿಕ ವ್ಯಾಪಾರಿಗಳು ಕಷ್ಟದಲ್ಲಿರುವಾಗ ಇವರ್ಯಾರು ಬಂದಿಲ್ಲ. ಈಗ ಬೋರ್ಡ್ ಒಡೆದು ಹಾಕಿ ನಷ್ಟ ಮಾಡಬಾರದು. ಇಲ್ಲಿ‌ ಅಂತಾರಾಷ್ಟ್ರೀಯ ಮಟ್ಟದ ಟೂರಿಸಂ ಇದೆ. ಇಲ್ಲಿಗೆ ವಿದೇಶ, ನೆರೆ ರಾಜ್ಯದಿಂದ ಪ್ರವಾಸಿಗರು ಬರುತ್ತಾರೆ. ಅವರಿಗೆಲ್ಲಾ ತೊಂದರೆ ಆಗುತ್ತದೆ ಎಂದರು.

ತುಳುನಾಡಿನ ಬೋರ್ಡ್​ಗಳಲ್ಲಿ ಕೇವಲ ಇಂಗ್ಲೀಷ್ ಮಾತ್ರವಲ್ಲ, ಕನ್ನಡ, ಇಂಗ್ಲಿಷ್, ತುಳು ಭಾಷೆಯ ಲಿಪಿಗಳು ಇವೆ. ಬೋರ್ಡ್​ಗಳ ವಿಚಾರಕ್ಕೆ ಬಂದರೆ ನಾವು ಬಿಡುವುದಿಲ್ಲ. ಬೇರೆ ರಾಜ್ಯದಿಂದ ಬಂದವರಿಗೆ ಕೇವಲ ಕನ್ನಡದಲ್ಲಿದ್ದರೆ ಅದು ಅರ್ಥ ಆಗಲ್ಲ. ಈಗ ಇಲ್ಲಿನ ಜನ ತುಳು ಬೋರ್ಡ್ ಸಹ ಹಾಕುತ್ತಿದ್ದಾರೆ. ಪ್ರೀತಿಯಿಂದ ಬಳಸಬೇಕೆ ಹೊರತು ಒತ್ತಾಯದ ಹೇರಿಕೆ ಆಗಬಾರದು ಎಂದರು.

ತುಳು ವಿರೋಧಿ ಸಂಘಟನೆಗಳನ್ನು ಬಿಡುವುದಿಲ್ಲ

ತುಳುವನ್ನು ವಿರೋಧ ಮಾಡುವ ತಾಕತ್ತು ಅವರಿಗಿಲ್ಲ. ಈ ಮಣ್ಣಿನ ಭಾಷೆಯನ್ನು ವಿರೋಧ ಮಾಡುವ ಯಾವುದೇ ಸಂಘಟನೆಯನ್ನು ಬಿಡುವುದಿಲ್ಲ. ಆ ಸಂಘಟನೆಗಳನ್ನು ಮಂಗಳೂರಿನಲ್ಲಿ ಇರುವುದಕ್ಕೂ ಬಿಡುವುದಿಲ್ಲ. ತುಳು ಲಿಪಿಯ ಬೋರ್ಡ್ ತೆಗೆದಿರುವ ಮಾಹಿತಿ ಈವರೆಗೂ ಬಂದಿಲ್ಲ. ತುಳು ಲಿಪಿಯ ಬೋರ್ಡ್ ಮುಟ್ಟಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇಷ್ಟು ಪರ್ಸೆಂಟ್ ಹಾಕಬೇಕು, ಹಾಕಬಾರದೆಂಬ ಒತ್ತಾಯವಿಲ್ಲ. ಇಲ್ಲಿ ಯಾವುದೇ ದ್ವೇಷವಿಲ್ಲ. ವ್ಯಾಪಾರದಲ್ಲಿ ಪರ್ಸಂಟೇಜ್ ಕೇಳುವ ಸಂಘಟನೆಗಳು ಇವೆ. ಯಾವುದೇ ಬೋರ್ಡ್​ಗೆ ಕೈ ಹಾಕಿದರೆ ತುಳುವರು ಎಚ್ಚೆತ್ತುಕೊಳ್ಳುತ್ತೇವೆ. ಈ ಬಗ್ಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪೊಲೀಸ್ ವರಿಷ್ಟಾಧಿಕಾರಿಯವರಿಗೂ ಹೇಳಿದ್ದೇವೆ. ಇದು ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಹೇಳಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ