Mangaluru: ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ

ಜೂನ್‌ ತಿಂಗಳಿನಲ್ಲಿ ಭತ್ತದ ಬೆಳೆ ಫಸಲ್‌ ಭಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಸರಕಾರ ಆದೇಶ ಹೊಡಡಿಸಿತ್ತು. ಇದರಿಂದಾಗಿ ಅಡಿಕೆ ಬೆಳೆಗಾರರು ಆತಂಕಕ್ಕೀಡಾಗಿದ್ದರು. ಸದ್ಯ ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ ಹೊರಡಿಸಲಾಗಿದೆ.

Mangaluru: ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ
ಅಡಿಕೆ ಮತ್ತು ಕಾಳುಮೆಣಸು ಒಳಗೊಂಡ ಹವಾಮಾನ ಆಧಾರಿತ ಬೆಳೆ ವಿಮೆ ಕಂತು ಪಾವತಿಗೆ ಆದೇಶ Image Credit source: microbi.tv
Follow us
Rakesh Nayak Manchi
|

Updated on: Jul 20, 2023 | 9:34 PM

ಮಂಗಳೂರು, ಜುಲೈ 20: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ಅಡಿಕೆ (Arecanut), ಕಾಳುಮೆಣಸು (Pepper) ಬೆಳೆಗಳನ್ನು ಸೇರ್ಪಡೆಗೊಳಿಸಲಾಗಿದ್ದು, ಯೋಜನೆಯಡಿ ಬೆಳಗಳಿಗೆ ಬೆಳೆ ವಿಮೆ (Crop Insurance) ಪಾವತಿಸಲು ಅವಕಾಶ ನೀಡಲಾಗಿದೆ. ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಜು 31 ಕಂತು ಪಾವತಿಸಲು ಕೊನೆಯ ದಿನವಾಗಿದೆ.

ನಾಲ್ಕೈದು ವರ್ಷಗಳ ಹಿಂದೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕಾರ್ಯರೂಪಕ್ಕೆ ತರಲಾಗಿದೆ. ಅಂದಿನಿಂದ ಪ್ರತಿ ವರ್ಷದ ಜೂನ್ ತಿಂಗಳಲ್ಲಿ ಕಂತು ಪಾವತಿಗೆ ಅವಕಾಶ ಕಲ್ಪಿಸಿ ಸರ್ಕಾರವು ಅಧಿಸೂಚನೆ ಹೊರಡಿಸುತ್ತಿತ್ತು. ಆದರೆ ಈ ಬಾರಿ ಯಾವುದೇ ಅಧಿಸೂಚನೆ ಹೊರಡಿಸಿರಲಿಲ್ಲ. ಆದರೇ ಜೂನ್‌ ತಿಂಗಳಿನಲ್ಲಿ ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಸರಕಾರ ಆದೇಶ ಹೊಡಡಿಸಿತ್ತು.

ಇದನ್ನೂ ಓದಿ: Arecanut Pirce 20 July: ಇಂದಿನ ಅಡಿಕೆ ರೇಟ್, ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ?

ಇದು ಸಹಜವಾಗಿ ಅಡಿಕೆ ಬೆಳೆಗಾರರಲ್ಲಿ ತಲ್ಲಣ ಉಂಟು ಮಾಡಿತ್ತು. ಈ ಕುರಿತು ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತನಾಡುವುದಾಗಿ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್‌ ಕುಮಾರ್‌ ರೈ ಭರವಸೆ ನೀಡಿದ್ದರಲ್ಲದೆ, ತೋಟಗಾರಿಕಾ ಇಲಾಖೆ ಸಚಿವ ರಾಜಣ್ಣ ಮಾತುಕತೆ ನಡೆಸಿದ್ದರು. ವಿಧಾನಸಭೆಯಲ್ಲೂ ಪ್ರಸ್ತಾಪಿಸಿದ್ದರು.

ಇನ್ನು, ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಕೋಟ ಶ್ರೀನಿವಾಸ ಪೂಜಾರಿ ತೋಟಗಾರಿಕೆ ಇಲಾಖೆ ಆಯುಕ್ತರಿಗೆ ಪತ್ರ ಬರೆದು ವಿಮೆ ಯೋಜನೆ ವ್ಯಾಪ್ತಿಗೆ ಅಡಿಕೆ, ಕಾಳು ಮೆಣಸು ಬೆಳೆಗಳನ್ನು ಸೇರಿಸುವಂತೆ ಮನವಿ ಮಾಡಿದ್ದರು. ಇದರ ಜೊತೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನೂ ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ