ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ; ಫೋನ್ ಮಾಡಿ ಯೋಗಕ್ಷೇಮ ವಿಚಾರಿಸಿದ ರಾಹುಲ್, ಸೋನಿಯಾ ಗಾಂಧಿ

Oscar Fernandes health: ಆಸ್ಪತ್ರೆಯಲ್ಲಿ ಹಿರಿಯ ವೈದ್ಯರು ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ, ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಫೆರ್ನಾಂಡಿಸ್ ಕುಟುಂಬದವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ; ಫೋನ್ ಮಾಡಿ ಯೋಗಕ್ಷೇಮ ವಿಚಾರಿಸಿದ ರಾಹುಲ್, ಸೋನಿಯಾ ಗಾಂಧಿ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರೊಂದಿಗೆ ಆಸ್ಕರ್ ಫರ್ನಾಂಡಿಸ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 21, 2021 | 1:46 PM

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ದೂರವಾಣಿ ಮೂಲಕ ಫೆರ್ನಾಂಡಿಸ್ ಕುಟುಂಬದವರೊಂದಿಗೆ ಮಾತನಾಡಿದ್ದಾರೆ.

ಮನೆಯಲ್ಲಿ ಜಾರಿಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿರುವ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾರೆ. ಭಾನುವಾರ ಬೆಳಗ್ಗೆ ಯೋಗ ಮಾಡುವ ವೇಳೆ ಆಸ್ಕರ್ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್‌ಗೆಂದು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿತ್ತು.

ಆಸ್ಪತ್ರೆಯಲ್ಲಿ ಹಿರಿಯ ವೈದ್ಯರು ಆಸ್ಕರ್ ಫೆರ್ನಾಂಡಿಸ್ ಅವರನ್ನು  ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಪತ್ತೆಯಾಗಿದೆ. ತಕ್ಷಣ ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮಧ್ಯೆ, ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಫೆರ್ನಾಂಡಿಸ್ ಕುಟುಂಬದವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಆಸ್ಕರ್ ಫೆರ್ನಾಂಡಿಸ್ ಯೋಗ ಕ್ಷೇಮ ವಿಚಾರಿಸಿದ್ದಾರೆ.

ಗದ್ಗದಿತರಾದ ಜನಾರ್ಧನ ಪೂಜಾರಿ: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ಧನ ಪೂಜಾರಿ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೂಜಾರಿ ಆಸ್ಕರ್ ಬಗ್ಗೆ ಮಾತನಾಡುತ್ತಾ ಗದ್ಗದಿತರಾದರು. ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿ ಕಣ್ಣೀರಿಟ್ಟ ಪೂಜಾರಿ ಆಸ್ಕರ್ ಆರೋಗ್ಯವಾಗಿ ಬರುತ್ತಾರೆ. ದೇವರು ಅವರಿಗೆ ಸಹಾಯ ಮಾಡುತ್ತಾರೆ. ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಆಸ್ಕರ್ ಫರ್ನಾಂಡಿಸ್ ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ಕೇಂದ್ರ ಮಂತ್ರಿಯಾಗಿದ್ದರು. ರಸ್ತೆ, ಸಾರಿಗೆ, ಹೆದ್ದಾರಿ ಮತ್ತು ಕಾರ್ಮಿಕ ಸಚಿವರಾಗಿಯೂ ಕೆಲಸ ಮಾಡಿದ್ದರು. ರಾಜೀವ್ ಗಾಂಧಿ ಜೊತೆಗೆ ಸಂಸತ್ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. 1980ರಿಂದ 1996ರ ವರೆಗೆ ಕರ್ನಾಟಕದ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆ ಆಗಿದ್ದರು. ಬಳಿಕ, 1998ರಲ್ಲಿ ಹಾಗೂ 2004ರಲ್ಲಿ ರಾಜ್ಯಸಭೆಗೂ ಆಯ್ಕೆ ಆಗಿದ್ದರು.

oscar fernandes ill health rahul gandhi sonia gandhi talks to his family members 1

ಆಸ್ಕರ್ ಫೆರ್ನಾಂಡಿಸ್ ತಲೆಗೆ ಪೆಟ್ಟು ಬಿದ್ದಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆಯಲ್ಲಿ ಜಾರಿ ಬಿದ್ದು ಆಸ್ಕರ್​ ಫರ್ನಾಂಡಿಸ್​ ತಲೆಗೆ ಗಾಯ; ಮಂಗಳೂರಿನ ಖಾಸಗಿ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ

(oscar fernandes ill health: rahul gandhi sonia gandhi talks to his family members)

Published On - 11:54 am, Wed, 21 July 21

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ