ಮಂಗಳೂರು: ಚಲಿಸುತ್ತಿದ್ದ ಕೆಎಸ್​ಆರ್​​ಟಿಸಿ ಬಸ್​ನಿಂದ ಬಿದ್ದು ವ್ಯಕ್ತಿ ಸಾವು

ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಕಂಡಕ್ಟರ್​ವೊಬ್ಬರು ಚಲಿಸುತ್ತಿದ್ದ ಬಸ್​ನಿಂದ ಬಿದ್ದು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ನಡೆದಿದೆ. ಇಬ್ಬರು ಪ್ರಯಾಣಿಕರು ಕೆಎಸ್​ಆರ್​ಟಿಸಿ ಬಸ್​ನಿಂದ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದರೆ, ಮತ್ತೋರ್ವ ಪ್ರಾಣಾಪಾಯ ಪಾರಾಗಿದ್ದಾರೆ.

ಮಂಗಳೂರು: ಚಲಿಸುತ್ತಿದ್ದ ಕೆಎಸ್​ಆರ್​​ಟಿಸಿ ಬಸ್​ನಿಂದ ಬಿದ್ದು ವ್ಯಕ್ತಿ ಸಾವು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 26, 2023 | 1:02 PM

ಮಂಗಳೂರು, (ಸೆಪ್ಟೆಂಬರ್, 26): ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನಿಂದ (KSRTC Bus) ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ಪಟ್ಟಣದ ಅಂಚೆ ಕಚೇರಿ ಬಳಿ ನಡೆದಿದೆ. ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಮೃತ ವ್ಯಕ್ತಿ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ ಅಂಚೆ ಕಚೇರಿಯ ಸಮೀಪದ ತಿರುವಿನಲ್ಲಿ ಅಚ್ಚುತ್ತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಆಯತಪ್ಪಿ ಬಸ್ಸಿನಿಂದ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅಚ್ಚುತ್ತ ಗೌಡ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ಬಸ್​ನಿಂದ ಬಿದ್ದು ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಮೊದಲಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುಲಾಗುತ್ತಿತ್ತು. ಆದ್ರೆ, ದುರದೃಷ್ಟವಶಾಥ್ ರಸ್ತೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆಇದ್ದಾರೆ.  ಇನ್ನು ಚಂದ್ರಶೇಖರ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಕಡಬ ಪೊಲೀಸ್​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 279, 337 ಮತ್ತು 304(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಒದಿ: ಮಸೀದಿ ಆವರಣದೊಳಗೆ ನುಗ್ಗಿ ಜೈ ಶ್ರೀರಾಮ್​ ಘೋಷಣೆ ಕೂಗಿದ್ದ ಇಬ್ಬರ ಬಂಧನ

ಇತ್ತೀಚೆಗೆಷ್ಟೇ ಮಂಗಳೂರಿನಲ್ಲಿ ಕಂಡಕ್ಟರ್ ವೊಬ್ಬರು ಚಲಿಸುತ್ತಿದ್ದ ಬಸ್ ನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದರು. ಮಂಗಳೂರಿನ ನಂತೂರು ಸರ್ಕಲ್ ಬಳಿ ಈ ಘಟನೆ ಸಂಭವಿಸಿತ್ತು. ಬಾಗಲಕೋಟೆ ನಿವಾಸಿ 23 ವರ್ಷದ ಈರಯ್ಯ(ಗುರು) ಎನ್ನುವರು ಚಲಿಸುತ್ತಿದ್ದ ಬಸ್​ನಿಂದ ಬಿದ್ದು ಸಾವನ್ನಪ್ಪಿದ್ದರು. ಬಸ್ ನ ಮುಂಭಾಗದ ಬಾಗಿಲಿನ ಫುಟ್ ಬೋರ್ಡ್ ನಲ್ಲಿ ನಿಂತಿದ್ದ ಈರಯ್ಯ ಬಸ್ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು.

ಇನ್ನಷ್ಟು ಮಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ