AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪಿನಂಗಡಿ: ಪಿಎಫ್ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಖಂಡಿಸಿ ಪಿಎಫ್‌ಐ ಕಚೇರಿಯಿಂದ ಎಸ್​ಪಿ ಕಚೇರಿಗೆ ಮೆರವಣಿಗೆ

ಮಂಗಳೂರು ನಗರದಲ್ಲಿ ಪೊಲೀಸ್ ಬಿಗಿಭದ್ರತೆ ಮಾಡಲಾಗಿದೆ. 6 ಎಸಿಪಿಗಳು, 16 ಇನ್ಸ್‌ಪೆಕ್ಟರ್‌ಗಳು, 32 ಪಿಎಸ್‌ಐಗಳು 4 ಕೆಎಸ್‌ಆರ್‌ಪಿ ತುಕಡಿ, 5 ಸಿಎಆರ್ ತುಕಡಿ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಉಪ್ಪಿನಂಗಡಿ: ಪಿಎಫ್ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಖಂಡಿಸಿ ಪಿಎಫ್‌ಐ ಕಚೇರಿಯಿಂದ ಎಸ್​ಪಿ ಕಚೇರಿಗೆ ಮೆರವಣಿಗೆ
ಮಂಗಳೂರು ನಗರದಲ್ಲಿ ಪೊಲೀಸ್ ಬಿಗಿಭದ್ರತೆ
TV9 Web
| Updated By: preethi shettigar|

Updated on:Dec 17, 2021 | 1:21 PM

Share

ಮಂಗಳೂರು: ಪಿಎಫ್ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಖಂಡಿಸಿ ಇಂದು (ಡಿಸೆಂಬರ್ 17) ಪಿಎಫ್‌ಐ ಸಂಘಟನೆಯಿಂದ ಎಸ್ಪಿ ಕಚೇರಿ ಚಲೋ ನಡೆಯುತ್ತಿದೆ. ಆದರೆ ಪೊಲೀಸರು ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಿಲ್ಲ. ಹೀಗಾಗಿ ಮಂಗಳೂರು ನಗರದಲ್ಲಿ ಪೊಲೀಸ್ ಬಿಗಿಭದ್ರತೆ ಮಾಡಲಾಗಿದೆ. 6 ಎಸಿಪಿಗಳು, 16 ಇನ್ಸ್‌ಪೆಕ್ಟರ್‌ಗಳು, 32 ಪಿಎಸ್‌ಐಗಳು 4 ಕೆಎಸ್‌ಆರ್‌ಪಿ ತುಕಡಿ, 5 ಸಿಎಆರ್ ತುಕಡಿ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಕೇವಲ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲು ಮಾತ್ರ ಅವಕಾಶ ನೀಡಿರುವ ಮಂಗಳೂರು ಪೊಲೀಸ್ ಕಮಿಷನರ್. ಆದರೆ ಮಧ್ಯಾಹ್ನ 3 ಗಂಟೆಗೆ ಎಸ್​ಪಿ ಕಚೇರಿ ಚಲೋ ನಡೆಸಲಿರುವ ಪಿಎಫ್​ ಸಂಘಟನೆ. ಹೀಗಾಗಿ ಮಂಗಳೂರು ‌ಕಮಿಷನರ್ ಶಶಿಕುಮಾರ್ ಹಾಗೂ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಭದ್ರತೆ ವಹಿಸಲಾಗಿದೆ.

ಕೇವಲ ಕ್ಲಾಕ್ ಟವರ್ ಸರ್ಕಲ್ ಬಳಿ ಮಾತ್ರ ಪ್ರತಿಭಟನೆಗೆ ಅವಕಾಶ: ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಪಿಎಫ್ ಐ ಸಂಘಟನೆಯವರಿಗೆ ನಿಗದಿತ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ ಸಂಜೆ 4 ಗಂಟೆಯವರೆಗೆ‌ ಮಾತ್ರ ಪ್ರತಿಭಟನೆಗೆ ಅವಕಾಶ. ಯಾವುದೇ ಕಾರಣಕ್ಕೂ ಮೆರವಣಿಗೆ ‌ನಡೆಸಲು ಅನುಮತಿ ಇಲ್ಲ. ಪ್ರತಿಭಟನೆ ‌ಮುಗಿದ ಮೇಲೆ ಎಸ್ಪಿಯವರು ಸ್ಥಳಕ್ಕೆ ಬರುತ್ತಾರೆ. ಪ್ರತಿಭಟನಾ ನಿರತರ ಮನವಿಯನ್ನು ಅವರು ಸ್ಥಳಕ್ಕೆ ‌ಬಂದು ಸ್ವೀಕರಿಸುತ್ತಾರೆ. ಸದ್ಯ ಪ್ರತಿಭಟನಾ ಸ್ಥಳ ಮತ್ತು ಮಂಗಳೂರು ನಗರದಲ್ಲಿ ಭದ್ರತೆ ಬಿಗಿ ಮಾಡಲಾಗಿದೆ. ನಮ್ಮ ಎಲ್ಲಾ ಠಾಣೆಗಳ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ‌ನಡೆಯದಂತೆ ಕ್ರಮ ವಹಿಸಿದ್ದೇವೆ. ಕೇವಲ ಕ್ಲಾಕ್ ಟವರ್ ಸರ್ಕಲ್ ಬಳಿ ಮಾತ್ರ ಪ್ರತಿಭಟನೆಗೆ ಅವಕಾಶ. ನಿಗದಿತ ಜಾಗ ಬಿಟ್ಟು ಬೇರೆ ಯಾವುದೇ ಜಾಗದಲ್ಲಿ ಮೆರವಣಿಗೆ, ಗುಂಪು ಸೇರುವುದು ನಿರ್ಬಂಧ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಪುತ್ತೂರು ಉಪವಿಭಾಗದಲ್ಲಿ ಸೆಕ್ಷನ್ 144 ಜಾರಿ ಪಿಎಫ್​ಐ ಪ್ರಮುಖರ ಅಕ್ರಮ ಬಂಧನ ಖಂಡಿಸಿ ಕಾರ್ಯಕರ್ತರು ಠಾಣೆಯ ಎದುರು ಪ್ರತಿಭಟಿಸಿದ್ದರು. ರಾತ್ರಿಯೂ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಏಕಾಏಕಿ ಲಾಠಿಚಾರ್ಜ್ ನಡೆಸಿದ್ದಾರೆ. ಕಾಲಿಗೆ ಹೊಡೆಯುವ ಬದಲು ಬೇಕಾಬಿಟ್ಟಿಯಾಗಿ ತಲೆಯ ಮೇಲೆ ಲಾಠಿಯಲ್ಲಿ ಹೊಡೆದಿದ್ದಾರೆ. ಮುಸ್ಲಿಂ ಧರ್ಮಗುರು ಸೈಯ್ಯದ್ ಅತೂರ್ ತಂಗಲ್ ತಲೆಗೂ ಹೊಡೆದಿದ್ದಾರೆ. ಇದರಿಂದ ಹಲವಾರು ಜನರಿಗೆ ಗಾಯವಾಗಿದ್ದು, ಕೆಲವರು ಐಸಿಯುನಲ್ಲಿದ್ದಾರೆ. ಅಂಬ್ಯುಲೆನ್ಸ್​ಗೂ ತಡೆ ಹಾಕಿ ಪೊಲೀಸರು ಅಡ್ಡಿ ಪಡಿಸಿದ್ದಾರೆ. ಇದೀಗ ಅವರ ದುಷ್ಕೃತ್ಯ ಮರೆಮಾಚಲು ಪೊಲೀಸರ ಮೇಲೆ ಹಲ್ಲೆ ಎಂಬ ಕಥೆ ಕಟ್ಟಿದ್ದಾರೆ ಎಂದು ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ನಡೆದ ಪಿಎಫ್​ಐ ಕಾರ್ಯಕರ್ತರ ಮೇಲಿನ ಲಾಠಿಚಾರ್ಜ್ ವಿಚಾರವಾಗಿ ಸುದ್ದಿಗೋಷ್ಟಿ ನಡೆಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್ ಬುಧವಾರ ಹೇಳಿಕೆ ನೀಡಿದ್ದಾರೆ.

ಉಪ್ಪಿನಂಗಡಿ ತಲವಾರು ಕೇಸ್​ನಲ್ಲಿ ಅಮಾಯಕರನ್ನು ಹಿಡಿದು ಸಿಲುಕಿಸಿದ್ದಾರೆ. ಇದನ್ನು ಪ್ರತಿಭಟಿಸಿದವರ ಮೇಲೆ ಅಮಾನವೀಯ ಲಾಠಿಚಾರ್ಜ್ ನಡೆಸಲಾಗಿದೆ. ತಕ್ಷಣ ಈ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನ ಅಮಾನತು ಮಾಡಬೇಕು. ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಬೇಕು. ಲಾಠಿಚಾರ್ಜ್ ಘಟನೆ ಖಂಡಿಸಿ ಡಿಸೆಂಬರ್ 17ರ ಶುಕ್ರವಾರ ಎಸ್​ಪಿ ಕಚೇರಿ ಚಲೋ ನಡೆಸುತ್ತೇವೆ ಎಂದು ಮಂಗಖೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು. ಅದರಂತೆ ಇಂದು ಮೆರವಣಿಗೆಗೆ ಮುಂದಾಗಿದ್ದಾರೆ.

ಉಪ್ಪಿನಂಗಡಿ ಪೊಲೀಸ್ ಠಾಣೆಯ ಎದುರು ಪಿಎಫ್​ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ವಿಚಾರಕ್ಕೆ ಸಂಬಂಧಿಸಿ ಬುಧವಾರ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ 144 ಸೆಕ್ಷನ್ ನಡಿ‌‌ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಈ ಕುರಿತು ಆದೇಶ ನೀಡಿದ್ದಾರೆ. ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನಾದ್ಯಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.  ಡಿಸೆಂಬರ್ 17 ರ ಮಧ್ಯರಾತ್ರಿವರೆಗೆ ನಿಷೇಧಾಜ್ಷೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಪುತ್ತೂರು ಉಪವಿಭಾಗದಲ್ಲಿ ಕೋಮುಗಲಭೆ ತಡೆಯುವ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಆಗಿದ್ದು ಯಾವುದೇ ಪ್ರತಿಭಟನೆ ನಡೆಸದಂತೆ ಸೆಕ್ಷನ್ 144 ಜಾರಿ ಮಾಡಿ ಆದೇಶಿಸಲಾಗಿದೆ.

ಇದನ್ನೂ ಓದಿ:

ಉಪ್ಪಿನಂಗಡಿ: ಪೊಲೀಸರ ಲಾಠಿ ಚಾರ್ಜ್ ಖಂಡಿಸಿ ಎಸ್​ಪಿ ಕಚೇರಿ ಚಲೋ; ಪುತ್ತೂರು ಉಪವಿಭಾಗದಲ್ಲಿ ಸೆಕ್ಷನ್ 144 ಜಾರಿ

ಉಪ್ಪಿನಂಗಡಿ: ಇಬ್ಬರು ಯುವಕರ ಮೇಲೆ ತಲವಾರಿನಿಂದ ಹಲ್ಲೆ ಪ್ರಕರಣ, ಹಲ್ಲೆಕೋರರ ಬಂಧನ ಖಂಡಿಸಿ ಠಾಣೆಗೆ ಮುತ್ತಿಗೆ

Published On - 1:01 pm, Fri, 17 December 21

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ