ಮಂಗಳೂರು ಕಾಲೇಜಿನಲ್ಲಿ ಮಹಿಳಾ ಸಿಬ್ಬಂದಿಗಳ ಫೋನ್ ನಂಬರ್ ಲೀಕ್ ಆರೋಪ; ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಂಟ್ವಾಳ ತಹಶೀಲ್ದಾರ್

| Updated By: ಆಯೇಷಾ ಬಾನು

Updated on: May 20, 2022 | 3:04 PM

ಪ್ರತಿಭಟನಾ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರ ಫೋನ್ ನಂಬರ್ ಕೂಡ ಲೀಕ್ ಆಗೋ ಸಾದ್ಯತೆ ಇದೆ ಎಂದು ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ತಹಶೀಲ್ದಾರ್ ಡಾ.ಸ್ಮಿತಾ ರಾಮುಗೆ ದೂರು ನೀಡಿದ್ದಾರೆ.

ಮಂಗಳೂರು ಕಾಲೇಜಿನಲ್ಲಿ ಮಹಿಳಾ ಸಿಬ್ಬಂದಿಗಳ ಫೋನ್ ನಂಬರ್ ಲೀಕ್ ಆರೋಪ; ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಂಟ್ವಾಳ ತಹಶೀಲ್ದಾರ್
ಮಂಗಳೂರಿನಲ್ಲಿ ಪ್ರಾಧ್ಯಾಪಕಿಯ ಕುರಿತು ಮಾನಹಾನಿಕರ ಪತ್ರ ಹಾಗೂ ಪೋಸ್ಟರ್ ಹಂಚಿಕೆ; ಪ್ರತಿಷ್ಠಿತ ಕಾಲೇಜಿನ ಪ್ರಾಧ್ಯಾಪಕರು ಅರೆಸ್ಟ್
Follow us on

ಮಂಗಳೂರು: ಸಹ ಪ್ರಾಧ್ಯಾಪಕಿ ಫೋನ್ ನಂಬರ್ನ ಪೋಸ್ಟರ್ನ್ನು ಟಾಯ್ಲೆಟ್ನಲ್ಲಿ ಅಂಟಿಸಿ ಬಂಧನವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿರೋ ಎಸ್.ವಿ.ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಕ್ಲಾಸ್ ರೂಂ ತ್ಯಜಿಸಿ ಮಳೆಯಲ್ಲೇ ಪ್ರತಿಭಟನೆಗೆ ಮುಂದಾಗಿದ್ದಾರೆ. ಪ್ರಾಧ್ಯಾಪಕಿ ವಿರುದ್ಧ ಮಾನಹಾನಿಕರ ಪೋಸ್ಟರ್ ತಯಾರಿಸಿ ಸಹ ಸಿಬ್ಬಂದಿ ಹರಿಬಿಟ್ಟಿದ್ದರು. ಪ್ರಕರಣ ಸಂಬಂಧ ಪ್ರಾಧ್ಯಾಪಕರಾದ ಪ್ರಾಕಾಶ್ ಶೆಣೈ, ಪ್ರದೀಪ್ ಪೂಜಾರಿ, ತಾರಾನಾಥ ಬಿ.ಎಸ್. ಬಂಧನವಾಗಿದ್ದರು. ಇವರ ಬಿಡುಗಡೆಯಾಗಿ ಮತ್ತೆ ಕಾಲೇಜಿಗೆ ಬರಲು ಯತ್ನ ಆರೋಪ ಕೇಳಿ ಬಂದಿದೆ. ಪ್ರದೀಪ್ ಪೂಜಾರಿ ಎಂಬ ಲಕ್ಚರರ್ ಕಾಲೇಜು ಬಳಿ ಬಂದಿದ್ದರು ಅಂತಾ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅವರನ್ನು ಮತ್ತೆ ಸೇರಿಸಿಕೊಳ್ಳಬಾರದು ಅಂತಾ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನು ಪ್ರತಿಭಟನಾ ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರ ಫೋನ್ ನಂಬರ್ ಕೂಡ ಲೀಕ್ ಆಗೋ ಸಾದ್ಯತೆ ಇದೆ ಎಂದು ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ತಹಶೀಲ್ದಾರ್ ಡಾ.ಸ್ಮಿತಾ ರಾಮುಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಸಿಎಂ ಹೇಮಂತ್ ಸೊರೇನ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಜಾರ್ಖಂಡ್ ಸರ್ಕಾರ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಘಟನೆ ಹಿನ್ನೆಲೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪ್ರತಿಷ್ಠಿತ ಖಾಸಗಿ ಕಾಲೇಜ್ನಲ್ಲಿ ಪ್ರಾಧ್ಯಾಪಕಿ ಬಗ್ಗೆ ಮಾನಹಾನಿಕರ ಪೋಸ್ಟರ್ ಹರಿಬಿಟ್ಟ ಹಿನ್ನೆಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಶೆಣೈ (44), ಪ್ರದೀಪ್ ಪೂಜಾರಿ(36), ತಾರಾನಾಥ ಬಿ ಎಸ್ ಶೆಟ್ಟಿ(32) ಬಂಧಿತ ಆರೋಪಿಗಳು. ಇದನ್ನೂ ಓದಿ: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು: ಡೆತ್​​ನೋಟ್ ಬಗ್ಗೆ ಪೊಲೀಸರಿಗೆ ಅನುಮಾನ

ಆರೋಪಿಗಳು, ಪ್ರಾಧ್ಯಾಪಕಿ ಬಗ್ಗೆ ಮಾನಹಾನಿಕರ ಪೋಸ್ಟರ್ ತಯಾರಿಸಿ ಅಂಚೆ ಮೂಲಕ ಸಹೋದ್ಯೋಗಿ ಪ್ರಾಧ್ಯಾಪಕರಿಗೆ, ಕಾಲೇಜಿನ ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆಯ ಉನ್ನತ ದರ್ಜೆಯ ಅಧಿಕಾರಿಗಳಿಗೆ ಪೋಸ್ಟ್ ಮಾಡಿದ್ದಾರೆ. ಮಾನಹಾನಿಕರವಾದ ಬರಹವನ್ನು ಪ್ರಾರಂಭದಲ್ಲಿ ಪೋಸ್ಟ್ ಕಾರ್ಡ್, ಇನ್ ಲ್ಯಾಂಡ್ ಲೆಟರ್ ಮೂಲಕ ಪ್ರಾಧ್ಯಾಪಕಿ ಫೋಟೋ ಬಳಸಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಪ್ರಾಧ್ಯಾಪಕಿಯ ಮೊಬೈಲ್ ನಂಬರ್ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿ ಅಶ್ಲೀಲವಾಗಿ ಬರೆದು ಪೋಸ್ಟರ್ ಹಂಚಿದ್ದಾರೆ. ಸುಳ್ಯ, ಸುಬ್ರಹ್ಮಣ್ಯ, ಸಂಪಾಜೆ, ಮಡಿಕೇರಿ, ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ, ಬಾಳೆಹೊನ್ನೂರು, ಎನ್ ಆರ್ ಪುರ, ಶಿವಮೊಗ್ಗ ಮುಂತಾದ ಬಸ್ ಸ್ಟಾಂಡ್ ಗಳ ಸಾರ್ವಜನಿಕ ಶೌಚಾಲಯಗಳಲ್ಲಿ ಪೋಸ್ಟರ್ ಅಂಟಿಸಿದ್ದಾರೆ. ಆರೋಪಿಗಳ ಪೈಕಿ ಪ್ರದೀಪ್ ಪೂಜಾರಿ ಎಂಬವರ ವಿರುದ್ಧ ಈ ಹಿಂದೆ 2019 ನೇ ಇಸವಿಯಲ್ಲಿ ಕಾಲೇಜ್ ಪ್ರಾದ್ಯಪಕಿಯೊಬ್ಬರಿಗೆ ಮಾನಹಾನಿಗೆ ಯತ್ನಿಸಿದ ಪ್ರಕರಣ ದಾಖಲಾಗಿದೆ.

ಪ್ರದೀಪ್ ಪೂಜಾರಿ ಕಾಲೇಜಿನ ಎಕನಾಮಿಕ್ ಪ್ರಾಧ್ಯಾಪಕನಾಗಿದ್ದ. ಕಾಲೇಜಿನಲ್ಲಿ ಪ್ರಾಧ್ಯಾಪಕಿ ಜೊತೆ ಇದ್ದ ಮನಸ್ತಾಪದ ಹಿನ್ನೆಲೆಯಲ್ಲಿ ಕೃತ್ಯ ಎಸಗಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲವರು ಬಾಕಿಯಿದ್ದು, ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:04 pm, Fri, 20 May 22