ಮಂಗಳೂರು, ಏಪ್ರಿಲ್ 14: ಲೋಕಸಭೆ ಚುನಾವಣೆಗೆ (Lok Sabha Election) ದಿನಾಂಕ ಘೋಷಣೆಯಾದ ಬಳಿಕ ಎರಡನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು (Narendra Modi), ಇಂದು (ಏ.14) ರಾತ್ರಿ 7:45ಕ್ಕೆ ಮಂಗಳೂರಿನಲ್ಲಿ ರೋಡ್ ಶೋ (Road Show) ನಡೆಸಲಿದ್ದಾರೆ. ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಮಂಗಳೂರು ನಗರದ ಹಲವು ರಸ್ತೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರ್ಯಾಲಿ ಮುಗಿಯುವವರೆಗೂ ವಾಹನ ಸಂಚಾರ ನಿಷೇಧಿಸಿ, ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್.
ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ ಹಂಪನಕಟ್ಟೆವರೆಗೆ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂಜಿ ರಸ್ತೆ ಪ್ರವೇಶಿಸುವ ಎಲ್ಲ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ಕೆಎಸ್ಆರ್ಟಿಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿವಿಎಸ್ ಕಡೆಗೆ ಹೋಗಲು ಅವಕಾಶವಿಲ್ಲ. ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್, ಮಣ್ಣಗುಡ್ಡ ಜಂಕ್ಷನ್ ಮತ್ತು ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣಗುರು ವೃತ್ತ (ಲೇಡಿಹಿಲ್)ದ ಕಡೆಗೆ ಎಲ್ಲ ತರಹದ ವಾಹನ ಸಂಚಾರ ನಿಷೇಧಿಸಲಾಗಿದೆ.
ಕೆಎಸ್ಆರ್ಟಿಸಿಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣಗುರು ವೃತ್ತ ಕಡೆ ಹೋಗುವ ಹಾಗೂ ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್ ಹೋಗುವ ಮತ್ತು ಎಂಜಿ ರೋಡ್, ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆಯಿಂದ ನವಭಾರತ ಸರ್ಕಲ್ ಕಡೆಗೆ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಎಂಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ನಲ್ಲಿ ವಾಹನ ಸಂಚಾರಕ್ಕೆ ನಿಷೇಧಿಸಲಾಗಿದೆ.
ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಗೆಲುವು ಯಾರಿಗೆ? ಸಿಎಸ್ಡಿಎಸ್ ಸಮೀಕ್ಷೆಯಲ್ಲಿ ಬಿಜೆಪಿಗೆ ಬಲ, ದಕ್ಷಿಣ ಭಾರತದಲ್ಲಿಯೂ ಮೋದಿ ಮೋಡಿ
ಬಜ್ಪೆ ವಿಮಾನ ನಿಲ್ದಾಣದಿಂದ ಕೆಂಜಾರು, ಮರವೂರು, ಕಾವೂರು, ಬೊಂದೇಲ್, ಮೇರಿಹಿಲ್, ಕೆ.ಪಿ.ಟಿ, ಕೊಟ್ಟಾರ ಚೌಕಿ, ಉರ್ವ ಸ್ಟೋರ್ ಮತ್ತು ನಾರಾಯಣಗುರು ವೃತ್ತ (ಲೇಡಿಹಿಲ್) ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ರೋಡ್ ಶೋ ನಡೆಯುವ ಲೇಡಿಹಿಲ್ ಬಳಿ ನಾರಾಯಣಗುರು ವೃತ್ತದಿಂದ ಹಂಪನಕಟ್ಟೆ ವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹಂಪನಕಟ್ಟ, ಎಲ್.ಹೆಚ್.ಹೆಚ್, ಬಾವುಟಗುಡ್ಡ, ಬಂಟ್ಸ್ ಹಾಸ್ಟೆಲ್, ಕದ್ರಿ ಕಂಬಳದ ಎರಡು ಬದಿ, ಕಾವೂರು, ಪಂಜಿಮೊಗೆರು, ಕೊಟ್ಟಾರಚೌಕಿವರೆಗೆ ವಾಹನ ನಿಲುಗಡೆ ನಿಷೇಧ ಹೇರಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರಿಗೆ ಬರುವ ವಾಹನಗಳು ನಂತೂರು ಜಂಕ್ಷನ್ – ಸೆಂಟ್ ಆಗ್ನೇಸ್ – ಕಂಕನಾಡಿ ಮೂಲಕ ಸ್ಟೇಟ್‌ಬ್ಯಾಂಕ್ ಕಡೆಗೆ ಹೋಗಬೇಕು. ಸ್ಟೇಟ್‌ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಹೋಗಬಹುದು. ಪಂಪುವೆಲ್ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ವಾಹನಗಳು ಕಂಕನಾಡಿ ಜಂಕ್ಷನ್- ಮಿಲಾಗ್ರಿಸ್ ಜಂಕ್ಷನ್ ಮೂಲಕ ಸ್ಟೇಟ್‌ಬ್ಯಾಂಕ್ ಕಡೆಗೆ ಹೋಗಬಹುದು.
ಕಾರ್‌ಸ್ಟ್ರೀಟ್, ಕುದ್ರೋಳಿ ಕಡೆಯಿಂದ ಬರುವ ಎಲ್ಲ ವಾಹನಗಳು ಮಣ್ಣಗುಡ್ಡೆ, ಉರ್ವಾ ಮಾರ್ಕೆಟ್ ಮುಖಾಂತರ ಅಶೋಕನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸಬೇಕು. ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಮುಖಾಂತರ ಕೊಟ್ಟಾರ ಕ್ರಾಸ್/ ಕುಂಟಿಕಾನದ ಕಡೆಗೆ ಹೋಗಬಹುದು. ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ನ ಮುಖಾಂತರ ಬಿಜೈ ಚರ್ಚ್ ಕಡೆಗೆ ಹೋಗಬೇಕು.
ಕರಾವಳಿ ಮೈದಾನ, ಲೇಡಿಹಿಲ್ ಶಾಲಾ ಮೈದಾನ, ಲೇಡಿಹಿಲ್ ಚರ್ಚ್ ಮೈದಾನ, ಉರ್ವ ಮಾರ್ಕೆಟ್ ಮೈದಾನ, ಉರ್ವ ಸ್ಟೋರ್ ಮೈದಾನ, ಉರ್ವ ಕೆನರಾ ಶಾಲಾ ಮೈದಾನ, ಕೆನರಾ ಕಾಲೇಜು ಮೈದಾನ, ಡೊಂಗರಕೇರಿ ಕೆನರಾ ಶಾಲಾ ಮೈದಾನ. ಗಣಪತಿ ಶಾಲಾ ಮೈದಾನ, ರಾಮಕೃಷ್ಣ ಶಾಲಾ ಮೈದಾನ, ಬಂಟ್ಸ್ ಹಾಸ್ಟೇಲ್, ಸಿ.ವಿ ನಾಯಕ್ ಹಾಲ್ ಮೈದಾನ, ಟಿ.ಎಂ.ಎ ಪೈ ಹಾಲ್ ಮೈದಾನ, ಬಿ.ಇ.ಎಂ ಶಾಲಾ ಮೈದಾನ, ನೆಹರೂ ಮೈದಾನ, ಪುರಭವನ ಆವರಣದಲ್ಲಿ ಪಾರ್ಕಿಂಗ್ಗೆ ಅವಕಾಶ ನೀಡಲಾಗಿದೆ.
ಕದ್ರಿ ಮೈದಾನ, ಕೆಪಿಟಿ ಕಾಲೇಜು ಮೈದಾನ, ಕೆಪಿಟಿ ಬಳಿಯ ಆರ್.ಟಿ.ಓ ಮೈದಾನ, ಪದುವಾ ಕಾಲೇಜು ಮೈದಾನ, ಗೋಲ್ಡ್ ಫಿಂಚ್ ಸಿಟಿ ಮೈದಾನ, ಕೂಳೂರು, ಸುಲ್ತಾನ್ ಬತ್ತೇರಿ ಗ್ರೌಂಡ್ಸ್, ಗೋಕರ್ಣಥೇಶ್ವರ ಕಾಲೇಜು ಗ್ರೌಂಡ್, ಎಮ್ಮೆಕರೆ ಮೈದಾನ, ಮಂಗಳೂರು ವಿಶ್ವವಿದ್ಯಾನಿಲಯ ಮೈದಾನ, ಹಂಪನಕಟ್ಟೆ, ಮಿಲಾಗ್ರಿಸ್ ಚರ್ಚ್ ಪಾರ್ಕಿಂಗ್ ಗ್ರೌಂಡ್, ಮಿಲಾಗ್ರಿಸ್ ಕಾಲೇಜು ಮೈದಾನ, ಬಲ್ಮಠ ಶಾಂತಿ ನಿಲಯದ ಮೈದಾನ, ಸೇಂಟ್ ಸೆಬಾಸ್ಟಿಯನ್ ಹಾಲ್ ಫಕಿಂಗ್ (ಸೆಂಟ್ ಅಗ್ನೇಸ್ ಶಾಲೆ) ಆವರಣದಲ್ಲಿ ವಾಹನ ಪಾರ್ಕ್ ಮಾಡಬಹುದು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:29 am, Sun, 14 April 24