ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಪರಶುರಾಮನ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ

| Updated By: ಆಯೇಷಾ ಬಾನು

Updated on: Aug 31, 2022 | 12:29 PM

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ತುಳುನಾಡು ನಿರ್ಮಾತೃ ಪರಶುರಾಮನ ಪುತ್ಥಳಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿಗೆ ಉಡುಗೊರೆಯಾಗಿ ಪುತ್ಥಳಿ ನೀಡಲಾಗುತ್ತೆ.

ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಪರಶುರಾಮನ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ
ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us on

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸೆಪ್ಟೆಂಬರ್ 1 ಮತ್ತು 2ರಂದು ಕರ್ನಾಟಕ ಹಾಗೂ ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 2ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದು ಪ್ರಧಾನಿ ಮೋದಿಗೆ ಪರಶುರಾಮ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ತುಳುನಾಡು ನಿರ್ಮಾತೃ ಪರಶುರಾಮನ ಪುತ್ಥಳಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಮೋದಿಗೆ ಉಡುಗೊರೆಯಾಗಿ ಪುತ್ಥಳಿ ನೀಡಲಾಗುತ್ತೆ. ಕಾರ್ಯಕ್ರಮಕ್ಕೆ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಸಮಾವೇಶ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಕರೆತರಲು 2000 ಬಸ್ ವ್ಯವಸ್ಥೆ ಮಾಡಲಾಗಿದೆ. ದಕ್ಷಿಣ ಕನ್ನಡ ಮತ್ತು‌ ಉಡುಪಿ‌ ಜಿಲ್ಲೆಗಳಿಂದ ಕರೆತರಲು ಬಸ್ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ಬಳಿಕ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಸೇರಿದಂತೆ 1 ಗಂಟೆ ಕಾಲ ರಾಜ್ಯ ಬಿಜೆಪಿ ನಾಯಕರ ಜೊತೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ.

ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಸೆ. 2ರಂದು ಮಧ್ಯಾಹ್ನ 1.30ಕ್ಕೆ ಮಂಗಳೂರಿನಲ್ಲಿ ಸುಮಾರು 3,800 ಕೋಟಿ ರೂ.ಗಳ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. 1951ರಲ್ಲಿ ಜವಾಹರಲಾಲ್ ನೆಹರೂ ಪ್ರಧಾನಿಯಾಗಿದ್ದಾಗ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದ ಉದ್ಘಾಟನೆಗೆ ಆಗಮಿಸಿದ್ದರು. ಲಾಲ್​ ಬಹದ್ದೂರ್ ಶಾಸ್ತ್ರಿ, ರಾಜೀವ್ ಗಾಂಧಿ ಕೂಡ ಪ್ರಧಾನಿಯಾಗಿದ್ದಾಗ ಮಂಗಳೂರಿಗೆ ಆಗಮಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಕೂಡ ಮಂಗಳೂರು, ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದರು. ಇದೀಗ ನರೇಂದ್ರ ಮೋದಿಯವರು ಈ ವಾರ ಮಂಗಳೂರಿಗೆ ಆಗಮಿಸಲಿದ್ದಾರೆ.

ಪ್ರಧಾನಮಂತ್ರಿಯವರು ಭಾರತದಲ್ಲಿ ಮೊದಲ ಬಾರಿಗೆ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಯುದ್ಧನೌಕೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಬ್ಯೂರೋ (WDB) ವಿನ್ಯಾಸಗೊಳಿಸಿದ ಮತ್ತು ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯದ ಅಡಿಯಲ್ಲಿ ಸಾರ್ವಜನಿಕ ವಲಯದ ಶಿಪ್‌ಯಾರ್ಡ್ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ನಿರ್ಮಿಸಲ್ಪಟ್ಟಿದೆ. ವಿಕ್ರಾಂತ್ ಅತ್ಯಾಧುನಿಕ ಯಾಂತ್ರೀಕೃತಗೊಂಡ ವೈಶಿಷ್ಟ್ಯಗಳೊಂದಿಗೆ ನಿರ್ಮಿಸಲ್ಪಟ್ಟಿದೆ.