AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ವಿಶ್ವದರ್ಜೆಗೆ ಅಭಿವೃದ್ಧಿ ಪಡೆಸಲು ಆ.6 ರಂದು ಪ್ರಧಾನಿ ನರೇಂದ್ರ ಮೋದಿಯಿಂದ ಶಿಲಾನ್ಯಾಸ

ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಯ ರೈಲು ನಿಲ್ದಾಣವಾಗಿ ಅಭಿವೃದ್ಧಿ ಪಡಿಸಲು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ

Narendra Modi: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣವನ್ನು ವಿಶ್ವದರ್ಜೆಗೆ ಅಭಿವೃದ್ಧಿ ಪಡೆಸಲು ಆ.6 ರಂದು ಪ್ರಧಾನಿ ನರೇಂದ್ರ ಮೋದಿಯಿಂದ ಶಿಲಾನ್ಯಾಸ
ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದ ನೀಲನಕ್ಷೆ
TV9 Web
| Edited By: ಆಯೇಷಾ ಬಾನು|

Updated on: Aug 03, 2023 | 3:27 PM

Share

ಮಂಗಳೂರು, ಆ.03: ಅಮೃತ್‌ ಭಾರತ್‌ ರೈಲು(Amrit Bharat Rail) ನಿಲ್ದಾಣ ಯೋಜನೆ ಅಡಿಯಲ್ಲಿ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಯ ರೈಲು ನಿಲ್ದಾಣವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಈ ಕಾಮಗಾರಿಗೆ ಆ.6 ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣವನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಅಭಿನಂದನೆಗಳು. ಅಮೃತ್ ಭಾರತ್ ರೈಲ್ವೆ ಯೋಜನೆಯಡಿ 19.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಈ ಯೋಜನೆಯು ಕರಾವಳಿ ಭಾಗದಲ್ಲಿ ಬಹುದೊಡ್ಡ ಮೈಲಿಗಲ್ಲು ಆಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ: 21 ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಆಗಸ್ಟ್ 6ರಂದು ಪ್ರಧಾನಿ ಮೋದಿ ಶಂಕುಸ್ಥಾಪನೆ

2023-24ನೇ ಸಾಲಿನ ಬಜೆಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣ, ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್‌ ಭಾರತ್‌ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಪಡಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಘೋಷಿಸಿದ್ದರು.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್