ಚೀನಾದಲ್ಲಿ ನ್ಯುಮೋನಿಯಾ ವೈರಸ್​ ಉಲ್ಭಣ; ದಕ್ಷಿಣ ಕನ್ನಡ ಜಿಲ್ಲಾದ್ಯಂತ ಆರೋಗ್ಯ ಇಲಾಖೆ ಅಲರ್ಟ್​​

ಚೀನಾ(China)ದಲ್ಲಿ ನ್ಯುಮೋನಿಯಾ ವೈರಸ್ ಹೆಚ್ಚಳ ಹಿನ್ನಲೆ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ​ಉಸಿರಾಟ ತೊಂದರೆ ಅನುಭವಿಸುತ್ತಿರುವ ರೋಗಿಗಳ ಮಾಹಿತಿ ಸಂಗ್ರಹ ಮಾಡುತ್ತಿದೆ. ಜೊತೆಗೆ ವೈದ್ಯಕೀಯ ಸೇವೆ ಒದಗಿಸಲು ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ತಯಾರಿ ನಡೆಸುತ್ತಿದೆ.

ಚೀನಾದಲ್ಲಿ ನ್ಯುಮೋನಿಯಾ ವೈರಸ್​ ಉಲ್ಭಣ; ದಕ್ಷಿಣ ಕನ್ನಡ ಜಿಲ್ಲಾದ್ಯಂತ ಆರೋಗ್ಯ ಇಲಾಖೆ ಅಲರ್ಟ್​​
ಪ್ರಾತಿನಿಧಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 02, 2023 | 6:24 PM

ದಕ್ಷಿಣ ಕನ್ನಡ, ಡಿ.02: ಚೀನಾ(China)ದಲ್ಲಿ ನ್ಯುಮೋನಿಯಾ ವೈರಸ್​(pneumonia virus) ಉಲ್ಭಣವಾಗಿದ್ದು, ಈಗಾಗಲೇ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಅದರಂತೆ​ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ​ಉಸಿರಾಟ ತೊಂದರೆ ಅನುಭವಿಸುತ್ತಿರುವ ರೋಗಿಗಳ ಮಾಹಿತಿ ಸಂಗ್ರಹ ಮಾಡುತ್ತಿದೆ. ಜೊತೆಗೆ ವೈದ್ಯಕೀಯ ಸೇವೆ ಒದಗಿಸಲು ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ತಯಾರಿ ನಡೆಸುತ್ತಿದೆ. ಇನ್ನು ಜಿಲ್ಲೆಯಲ್ಲಿ ಸರಾಸರಿಗಿಂತ ಹೆಚ್ಚಿನ ಜ್ವರದ ಕೇಸ್​​ಗಳು ಬರುತ್ತಿಲ್ಲ. ಹಾಗಾಗಿ ಗಡಿಯಲ್ಲಿ ತಪಾಸಣೆ ಮಾಡುವ ಅಗತ್ಯ ಸಧ್ಯಕ್ಕಿಲ್ಲ ಎಂಬ ನಿರ್ಧಾರ ಕೈಗೊಂಡಿದ್ದು, ಕೋವಿಡ್​​ಗೆ ಅನುಸರಿಸಿದ ಪ್ರೈಮರಿ ಅಲರ್ಟ್​​ ಪಾಲಿಸುವಂತೆ ಜನರಿಗೆ ಸೂಚನೆ ನೀಡಲಾಗಿದೆ.

ಚೀನಾದಲ್ಲಿ ಕೋವಿಡ್ ಮಾದರಿಯ ಯಾವುದೇ ವೈರಸ್ ಪತ್ತೆಯಾಗಿಲ್ಲ; ವಿಶ್ವ ಆರೋಗ್ಯ ಸಂಸ್ಥೆ

ಚೀನಾದಲ್ಲಿ ನ್ಯುಮೋನಿಯಾ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಆದರೆ, ಈ ಪ್ರಕರಣಗಳಲ್ಲಿ ಯಾವುದೇ ವೈರಸ್​ಗಳು ಪ್ರಭಾವ ಬೀರುತ್ತಿಲ್ಲ ಎಂದು ಚೀನಾ ಹೇಳಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿತ್ತು. ಅದರಂತೆ ಅಕ್ಟೋಬರ್ ಮಧ್ಯದಿಂದ ಚೀನಾದ ಮಕ್ಕಳಲ್ಲಿ ಹೆಚ್ಚುತ್ತಿರುವ ಉಸಿರಾಟ ಸಮಸ್ಯೆಗೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆ ನಿಗಾ ಇಡುತ್ತಿದೆ. ನ್ಯುಮೋನಿಯಾ ಹಾಗೂ ಉಸಿರಾಟಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಯಿಂದ ಚೀನಾದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

ಇದನ್ನೂ ಓದಿ:ಚೀನಾದಲ್ಲಿ ನ್ಯುಮೋನಿಯಾ ವೈರಸ್ ರುದ್ರ ತಾಂಡವ; ಚಾಮರಾಜನಗರದಲ್ಲೂ ಹೈ ಅಲರ್ಟ್

ಇನ್ನು ಚೀನಾದಲ್ಲಿ ಹೊಸ ಮಾದರಿ ಸೋಂಕು ಪತ್ತೆಯಾದ ಕೂಡಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ಮಾಡಿತ್ತು.

• ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳುವುದು.

• ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳುವುದು.

• ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸುವುದು.

• ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು.

• ಫ್ಲೂ ಪೀಡಿತ ವ್ಯಕ್ತಿಗಳಿಂದ ಮೂಲಭೂತ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳುವುದು.

• ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿ ಮತ್ತು ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಿಕೊಳ್ಳುವುದು.

• ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸುವುದು.

• ಸಾರ್ವಜನಿಕವಾಗಿ ಉಗುಳುವುದನ್ನು ತಪ್ಪಿಸುವುದು.

• ಇನ್ಫ್ಲುಯೆನ್ಸ ಮತ್ತು ಇತರ ಉಸಿರಾಟದ ಕಾಯಿಲೆಗಳ ಹೆಚ್ಚಿನ ಸಂಭವವಿರುವ ಸ್ಥಳಗಳಿಗೆ ಪ್ರಯಾಣವನ್ನು ತಪ್ಪಿಸುವುದು.

• ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಿ.

• ನಿಮ್ಮ ವೈದ್ಯರನ್ನು ಸಂಪರ್ಕಿಸದೆ ಸ್ವಯಂ-ಔಷಧಿಗಳನ್ನು ಮಾಡಬೇಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಬ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ