ದಕ್ಷಿಣ ಕನ್ನಡ: ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Crime News: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಕೇಸ್ನ ಪ್ರತ್ಯೇಕ ಪ್ರಕರಣದಲ್ಲಿ ಪಾದಚಾರಿಯೋರ್ವರ ಸಾವಿಗೆ ಕಾರಣರಾಗಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಮೂಡುಬಿದಿರೆಯಲ್ಲಿ ಪ್ರಕರಣ ನಡೆದಿದೆ. ಇದಕ್ಕೆ ಸಂಬಂಧಪಟ್ಟಂತೆ ಸಮಿತ್ ರಾಜ್ ಹಾಗೂ ಸಂದೀಪ್ ಪೂಜಾರಿ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯರನ್ನು ದಂಪತಿಯೋರ್ವರು ಕಾರಿನಲ್ಲಿ ಕರೆದೊಯ್ಯುತ್ತಿದ್ದರು. ಈ ವೇಳೆ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಲ್ಲಿಸಲಾಗಿದೆ ಎಂದು ಆರೋಪಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354, 153A, 504, 506ರಡಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ಅಪಘಾತವೆಸಗಿ ಪರಾರಿಯಾಗಿದ್ದ ಕಾರು ಚಾಲಕನ ಅರೆಸ್ಟ್: ಬೆಂಗಳೂರು: ಅಪಘಾತವೆಸಗಿ ಪರಾರಿಯಾಗಿದ್ದ ಕಾರು ಚಾಲಕನನ್ನು ಅರೆಸ್ಟ್ ಮಾಡಲಾಗಿದೆ. ಕಾರು ಚಾಲಕ ಶ್ರೀಧರ್ ಎಂಬುವವರನ್ನು ಬಂಧಿಸಲಾಗಿದ್ನದು, ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ K.R.ಪುರ ಸಂಚಾರಿ ಠಾಣೆಯಲ್ಲಿ ಕೇಸ್ ದಾಖಲು ದಾಖಲಾಗಿದೆ. ಸೆಪ್ಟೆಂಬರ್ 21ರಂದು ನಡೆದಿದ್ದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ, ಗಂಭೀರ ಗಾಯಗೊಂಡಿದ್ದ ಪಾದಚಾರಿಯೋರ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.
ಕಸ್ತೂರಿ ನಗರದ 2ನೇ ಮುಖ್ಯ ರಸ್ತೆಯಲ್ಲಿ ಅಪಘಾತ ನಡೆದಿತ್ತು. ಅಪಘಾತ ಬಳಿಕ ಕೇಸ್ ದಾಖಲಿಸಿ ತನಿಖೆ ನಡೆಸಿದ ಕೆ ಆರ್ ಪುರ ಟ್ರಾಫಿಕ್ ಪೊಲೀಸರು ಕಾರು ಮತ್ತು ಚಾಲಕನ ಪತ್ತೆಗೆ ತೀವ್ರ ಶೋಧ ನಡೆಸಿದ್ದರು. ಸುಮಾರು 59 ಸಿಸಿಟಿವಿಗಳನ್ನ ಪರಿಶೀಲನೆ ನಡೆಸಿ, ಕಾರು ಮತ್ತು ಚಾಲಕನ ಚಲನವಲನಗಳನ್ನು ಗಮನಿಸಲಾಗಿತ್ತು. ಎಚ್ಎಎಲ್ ನಿವೃತ್ತ ಉದ್ಯೋಗಿ ಶ್ರೀಧರ್ ಎಂಬುವರಿಂದ ಅಪಘಾತವಾಗಿದ್ದು, ಆ ವೇಳೆ ಭಾರಿ ಮಳೆಯಿದ್ದರಿಂದ ಕಾರು ನಿಲ್ಲಿಸದೆ ಹೋಗಿದ್ದರು. ಸದ್ಯ ಶ್ರೀಧರ್ ಮತ್ತು ಕಾರು ಪತ್ತೆ ಹಚ್ಚಿ ಕೆ.ಆರ್.ಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ:
ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣ; ಇನ್ಸ್ಪೆಕ್ಟರ್ ಸೇರಿ ಏಳು ಜನ ಅಮಾನತು
ಬೊಲಿವಿಯಾ ವಾಯುಪಡೆ ವಿಮಾನ ಅಮೇಜಾನ್ ಕಾಡಿನಲ್ಲಿ ಪತನ; 6ಮಂದಿ ಸಾವು
‘ನಾನು ಒಳ್ಳೆಯ ನಟನಾಗಲಿ ಅಂತ ಅಪ್ಪನಿಗೆ ಆಸೆ ಇತ್ತು’; ಸತ್ಯಜಿತ್ ನಿಧನದ ಬಳಿಕ ಪುತ್ರ ಆಕಾಶ್ ನೋವಿನ ಮಾತು