ನಾಳೆ ಸಿದ್ದರಾಮಯ್ಯ ಮಂಗಳೂರಿಗೆ: ಸಿಎಂ ಭಾಗವಹಿಸುವ ಎರಡೂ ಕಾರ್ಯಕ್ರಮಗಳಲ್ಲಿ ಡ್ರೋಣ್ ನಿಷೇಧ

| Updated By: ರಮೇಶ್ ಬಿ. ಜವಳಗೇರಾ

Updated on: Feb 16, 2024 | 8:19 PM

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ(ಫೆಬ್ರವರಿ 17) ಮಂಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್ ಸಮಾವೇಶ ಹಾಗೂ ಕಂಬಳ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎರಡೂ ಕಾರ್ಯಕ್ರಮಗಳಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ.

ನಾಳೆ ಸಿದ್ದರಾಮಯ್ಯ ಮಂಗಳೂರಿಗೆ: ಸಿಎಂ ಭಾಗವಹಿಸುವ ಎರಡೂ ಕಾರ್ಯಕ್ರಮಗಳಲ್ಲಿ ಡ್ರೋಣ್ ನಿಷೇಧ
ಸಿದ್ದರಾಮಯ್ಯ
Follow us on

ಮಂಗಳೂರು, (ಫೆವ್ರವರಿ 16): ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah ) ನಾಳೆ(ಫೆಬ್ರವರಿ 17) ಮಂಗಳೂರಿನಲ್ಲಿ (Mangaluru) ಎರಡೂ ಕಾರ್ಯಕ್ರಮಗಳಲ್ಲಿ ಭಾವಹಿಸಲಿದ್ದು, ಈ ಕಾರ್ಯಕ್ರಮಗಳಲ್ಲಿ ಡ್ರೋನ್ ಹಾರಾಟ (Drone camera) ನಿಷೇಧಿಸಲಾಗಿದೆ. ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳದಲ್ಲಿ ಕಾರ್ಯಕ್ರಮ ಹಾಗೂ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎರಡೂ ಕಾರ್ಯಕ್ರಮಗಳಲ್ಲಿ ಡ್ರೋಣ್ ಹಾರಾಟ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್​ ಆದೇಶ

ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿರುವೈಲ್‍ನಲ್ಲಿ ನಡೆಯುವ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಸಂಜೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಈ ಎರಡೂ ಕಾರ್ಯಕ್ರಮಗಳಲ್ಲಿ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ.

ಇದನ್ನೂ ಓದಿ: ಫೆ.17 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ, ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಿದ ಕೈ ಪಡೆ

ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದ ಸುತ್ತಮುತ್ತ ತಾತ್ಕಾಲಿಕವಾಗಿ ರೆಡ್‍ಝೋನ್ ಎಂದು ಪರಿಗಣಿಸಿ 5 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್​ ಆದೇಶದಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 pm, Fri, 16 February 24