ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

| Updated By: sandhya thejappa

Updated on: Jan 10, 2022 | 12:05 PM

ಮಂಗಳೂರಿನ ಖಾಸಗಿ ಬಸ್ ನಿಲ್ದಾಣದಲ್ಲಿ ವಾಮಂಜೂರು ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿತ್ತು. ಬಸ್​ನಲ್ಲಿ ಕುಳಿತಿದ್ದ ಜೋಡಿಯನ್ನ ಪ್ರಶ್ನಿಸಿ ಯುವಕರ ತಂಡ ಹಲ್ಲೆ ನಡೆಸಿತ್ತು.

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್
ಪ್ರಾತಿನಿಧಿಕ ಚಿತ್ರ
Follow us on

ಮಂಗಳೂರು: ನಗರದಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಖಾಸಗಿ ಬಸ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ. ಬಸ್​ನಲ್ಲಿ ಕುಳಿತಿದ್ದ ಅನ್ಯಕೋಮಿನ ಜೋಡಿಯನ್ನು ಪ್ರಶ್ನಿಸಿ ಯುವಕರ ತಂಡ ಹಲ್ಲೆ ನಡೆಸಿತ್ತು. ಬಸ್ ನಿರ್ವಾಹಕ ಸೇರಿದಂತೆ ಕೆಲ ಯುವಕರು ವಿದ್ಯಾರ್ಥಿನಿ ಜೊತೆಗಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಮಂಗಳೂರಿನ ಖಾಸಗಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು.

ಮಂಗಳೂರಿನ ಖಾಸಗಿ ಬಸ್ ನಿಲ್ದಾಣದಲ್ಲಿ ವಾಮಂಜೂರು ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿತ್ತು. ಬಸ್​ನಲ್ಲಿ ಕುಳಿತಿದ್ದ ಜೋಡಿಯನ್ನ ಪ್ರಶ್ನಿಸಿ ಯುವಕರ ತಂಡ ಹಲ್ಲೆ ನಡೆಸಿತ್ತು. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಯುವಕ ಶಿವಮೊಗ್ಗ ಮೂಲದವನಾಗಿದ್ದು, ವಿದ್ಯಾರ್ಥಿನಿ ಉಡುಪಿ ಮೂಲದವಳು ಎಂದು ತಿಳಿದುಬಂದಿದೆ.

ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ
ಮಂಗಳೂರಿ‌ನ ಆಟೋ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲ್ಲೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಮಹಿಳೆಯರು ಧರಿಸುವ ಚಪ್ಪಲಿ ಕಾರಿನಲ್ಲಿ ಪತ್ತೆಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿ ಹಿನ್ನೆಲೆ ಪರಿಶೀಲಿಸುತ್ತಿದ್ದೇವೆ. ಕಾರಿನಲ್ಲಿ ಮಹಿಳೆ ಇದ್ದಳು ಅಂತಾ ಸ್ಥಳೀಯರು ತಿಳಿಸಿದ್ದಾರೆ. ಆದರೆ ಗಾಯಾಳು ಹೇಳಿಕೆ ಇದುವರೆಗೂ ನೀಡಿಲ್ಲ ಅಂತ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ರಂಗನಾಥಸ್ವಾಮಿ ದರ್ಶನ ಮುಗಿಸಿ ಒಂದೇ ಕಾರಿನಲ್ಲಿ ಹೊರಟ ಸಿಎಂ ಮತ್ತು ಮಾಜಿ ಸಿಎಂ

ಕುಲಪತಿ ಹುದ್ದೆಯಿಂದ ನಾನು ಕೆಳಗಿಳಿಯುತ್ತೇನೆ, ನೀವೇ ಅದನ್ನು ನಿರ್ವಹಿಸಿ; ಕೇರಳ ಮುಖ್ಯಮಂತ್ರಿಗೆ ಖಡಕ್​ ಪತ್ರ ಬರೆದ ರಾಜ್ಯಪಾಲ ಆರಿಫ್​ ಮೊಹಮ್ಮದ್​ ಖಾನ್​

Published On - 2:46 pm, Sat, 11 December 21