ಇಂದು ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯಲಿರುವ ಹೋರಾಟಗಾರರು; ಸ್ಥಳದಲ್ಲಿ ಪೊಲೀಸ್ ಭದ್ರತೆ

ಇಂದು ಸಾವಿರಾರು ಹೋರಾಟಗಾರರೇ ಬೃಹತ್ ಪ್ರತಿಭಟನೆಯ ಮೂಲಕ ಟೋಲ್ ಗೇಟನ್ನು ಕಿತ್ತೆಸೆಯಲು ಮುಂದಾಗಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇಂದು ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯಲಿರುವ ಹೋರಾಟಗಾರರು; ಸ್ಥಳದಲ್ಲಿ ಪೊಲೀಸ್ ಭದ್ರತೆ
ಸುರತ್ಕಲ್ ಟೋಲ್ ಗೇಟ್ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on:Oct 18, 2022 | 10:30 AM

ಮಂಗಳೂರು: ಮಂಗಳೂರಿನ ಸುರತ್ಕಲ್ ಟೋಲ್(Surathkal Gate) ಗೇಟ್ ಕಿತ್ತೆಸೆಯಲು ಇಂದು ‘ನೇರ ಕಾರ್ಯಾಚರಣೆ’ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಭದ್ರತೆ ಏರ್ಪಡಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಸುರತ್ಕಲ್‍ನ ಎನ್‍ಐಟಿಕೆ (NITK) ಬಳಿ ಇರುವ ಟೋಲ್ ಗೇಟ್ ಅಕ್ರಮವಾಗಿ ಕಟ್ಟಲಾಗಿದೆ. ಹೀಗಾಗಿ ಅದನ್ನು ತೆರವುಗೊಳಿಸಬೇಕೆಂದು ಈ ಹಿಂದೆ ಸಾಕಷ್ಟು ಹೋರಾಟಗಳು ನಡೆದಿತ್ತು. ಆದ್ರೆ ಈವರೆಗೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರಾಜಕಾರಣಿಗಳು ತೆರವಿಗೆ ಪ್ರಯತ್ನಪಟ್ಟಿಲ್ಲ. ಹೀಗಾಗಿ ಇಂದು ಸಾವಿರಾರು ಹೋರಾಟಗಾರರೇ ಬೃಹತ್ ಪ್ರತಿಭಟನೆಯ ಮೂಲಕ ಟೋಲ್ ಗೇಟನ್ನು ಕಿತ್ತೆಸೆಯಲು ಮುಂದಾಗಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಸ್ಥಳದಲ್ಲಿ 300ಕ್ಕೂ ಹೆಚ್ಚು ಪೊಲೀಸರಿಂದ ಭದ್ರತೆ

ಸುರತ್ಕಲ್ ಟೋಲ್ ತೆರವಿಗೆ ಇವತ್ತು ಪ್ರತಿಭಟನೆಗೆ ಸಂಘಟನೆಗಳು ನಿರ್ಧರಿಸಿವೆ. ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಭದ್ರತೆ ಏರ್ಪಡಿಸಲಾಗಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಸಮಸ್ಯೆ ಆಗಬಾರದು. ಅಗತ್ಯ ಅನಿಸುವಷ್ಟು ನಾವು ಪೊಲೀಸರನ್ನ ಭದ್ರತೆಗೆ ಹಾಕಿದ್ದೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಠಾಣೆಗಳ ಪೊಲೀಸರನ್ನ ಭದ್ರತೆಗೆ ಹಾಕಿದ್ದೇವೆ. ಬಹುತೇಕ 300ಕ್ಕೂ ಅಧಿಕ ಪೊಲೀಸರು, ಕೆಎಸ್​ಆರ್​ಟಿಸಿ ಸಿಬ್ಬಂದಿ ನಿಯೋಜಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಟೋಲ್ ಸಂಸ್ಥೆ ರಕ್ಷಣೆ ಕೇಳಿದ್ದಾರೆ. ಹೀಗಾಗಿ ನಾವು ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಭದ್ರತೆ ಹಾಕಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ನೇರ ಕಾರ್ಯಾಚರಣೆ ಅಂತ ಪೋಸ್ಟ್ ಹಾಕಲಾಗಿತ್ತು. ಹೀಗಾಗಿ ಹಲವು ಹೋರಾಟಗಾರರಿಗೆ ನಾವು ನೋಟೀಸ್ ನೀಡಿದ್ದೇವೆ. ಇದರಲ್ಲಿ ಕೆಲವರ ಮನೆಗೆ ರಾತ್ರಿ ನೋಟಿಸ್ ಕೊಡಲು ಹೋದಾಗ ತಡವಾಗಿದೆ. ಆದರೆ ನಿಯಮ ಪ್ರಕಾರವೇ ನಾವು ನೋಟಿಸ್ ಕೊಟ್ಟಿದ್ದೇವೆ.

ಹೋರಾಟದ ಪ್ರಮುಖ ಮುಖಂಡರು ಶಾಂತಿಯುತ ಪ್ರತಿಭಟನೆ ಅಂತ ಹೇಳಿದ್ದಾರೆ. ಈ ಹಿಂದೆಯೂ ಇವರ ಪ್ರತಿಭಟನೆ ಶಾಂತಿಯುತವಾಗಿ ಇತ್ತು. ಹೀಗಾಗಿ ಇವತ್ತು ಕೂಡ ಶಾಂತಿಯುತ ಪ್ರತಿಭಟನೆ ಮಾಡಬಹುದು. ಈ ಹೆದ್ದಾರಿ ಅತ್ಯಂತ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಆಗಿದೆ. ಹೀಗಾಗಿ ಇಲ್ಲಿ ಯಾವುದೇ ವಾಹನ ಮತ್ತು ಜನ ಸಂಚಾರಕ್ಕೆ ಸಮಸ್ಯೆ ಆಗಬಾರದು ಎಂದರು. ಇದನ್ನೂ ಓದಿ: ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುವ ಕಾರ್ಯಾಚರಣೆ ಬೇಡ: ನಳಿನ್ ಕುಮಾರ್ ಕಟೀಲ್ ರೆಡ್ ಸಿಗ್ನಲ್​​

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಇಂದು ಪ್ರತಿಭಟನೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸಮಾನ ಮನಸ್ಕರ ಸಂಘಟನೆಗಳ ಸಹಭಾಗಿತ್ವದಲ್ಲಿ ಇಂದು ಪ್ರತಿಭಟನೆ ನಡೆಯಲಿದೆ. ಈ ಟೋಲ್ ಗೇಟ್ 2015 ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆರಂಭಗೊಂಡಿದೆ. ಹೈವೆಯಲ್ಲಿ 60 ಕಿಲೋಮೀಟರ್ ಅಂತರದಲ್ಲಿ ಟೋಲ್ ಇರಬೇಕಾದದ್ದು ಹೆದ್ದಾರಿ ಪ್ರಾಧಿಕಾರದ ನಿಯಮ. ಆದರೆ ಸುರತ್ಕಲ್ ಟೋಲ್ ಆ ನಿಯಮವನ್ನು ಮೀರಿದೆ ಎಂಬ ಆರೋಪವಿದೆ. ಸುರತ್ಕಲ್ ಟೋಲ್ ನಿಂದ ಹೆಜಮಾಡಿ ಟೋಲ್ ಪ್ಲಾಜಾ ದೂರ ಕೇವಲ 17 ಕಿ.ಮೀ. ಸುರತ್ಕಲ್ ಟೋಲ್ ‌ಮುಚ್ಚುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸಲಾಗಿತ್ತು. ಆದರೆ ಮುಚ್ಚುವ ಬದಲು ಹೊಸ ಗುತ್ತಿಗೆದಾರನಿಗೆ ಟೋಲ್ ವಹಿಸಲು ಟೆಂಡರ್‌ ನೀಡಲಾಗಿದೆ. ಹೀಗಾಗಿ ನಿರ್ಣಾಯಕ ಹೋರಾಟಕ್ಕೆ ಸಂಘಟನೆಗಳು ಮುಂದಾಗಿವೆ.

Published On - 9:53 am, Tue, 18 October 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್