ಮಂಗಳೂರು: ಹರೇಕಳದಲ್ಲಿ ಹಾಕಿದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರಿಂದ ನೋಟಿಸ್

| Updated By: Rakesh Nayak Manchi

Updated on: Feb 18, 2024 | 9:45 PM

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಫೆ.16 ರಂದು ಟಿಪ್ಪು ಸುಲ್ತಾನ್ ಕಟೌಟ್ ಅನ್ನು ಡಿವೈಎಫ್ಐ ಸಂಘಟನೆಗೆ ಅಳವಡಿಸಿತ್ತು. ಆದರೆ, ಅನುಮತಿ ಪಡೆಯದೆ ಕಟೌಟ್ ಅಳವಡಿಸಿದ ಹಿನ್ನೆಲೆ ಕೂಡಲೇ ಅದನ್ನು ತೆರವುಗೊಳಿಸುವಂತೆ ಡಿವೈಎಫ್​ಐ ಸಂಘಟನೆಗೆ ಕೊಣಾಜೆ ಠಾಣಾ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಮಂಗಳೂರು: ಹರೇಕಳದಲ್ಲಿ ಹಾಕಿದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರಿಂದ ನೋಟಿಸ್
ಹರೇಕಳದಲ್ಲಿ ಹಾಕಿದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರಿಂದ ನೋಟಿಸ್
Follow us on

ಮಂಗಳೂರು, ಫೆ.18: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಅನುಮತಿ ಪಡೆಯದೇ ಟಿಪ್ಪು ಸುಲ್ತಾನ್ (Tipu Sultan) ಕಟೌಟ್​ ಅಳವಡಿಕೆ ಹಿನ್ನೆಲೆ ಕಟೌಟ್ ತೆರವುಗೊಳಿಸುವಂತೆ ಡಿವೈಎಫ್ಐ (DYFI) ಸಂಘಟನೆಗೆ ಕೊಣಾಜೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಫೆ.16 ರಂದು ಡಿವೈಎಫ್ಐ ಆರು ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಿತ್ತು. ಯಾವುದೇ ಅನುಮತಿ ಪಡೆಯದೇ ಅಳವಡಿಸಿರುವುದರಿಂದ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕೂಡಲೇ ಕಟೌಟ್​​ ತೆರವು ಮಾಡುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ರಾಜ್ಯದಲ್ಲಿ ಧರ್ಮ ದಂಗಲ್ ನಡೆಯುತ್ತಿದ್ದು, ಸಾರ್ವಜನಿಕ ಪ್ರದೇಶದಲ್ಲಿ ಹಾಕಿರುವ ಧಾರ್ಮಿಕ ಗುರುತುಗಳನ್ನು ತೆರವುಗೊಳಿಸಲಾಗುತ್ತದೆ. ಇತ್ತೀಚೆಗೆ ಕೇಸರಿ ಧ್ವಜಗಳನ್ನು ತೆರವುಗೊಳಿಸಲಾಗಿತ್ತು. ಮಂಡ್ಯದಲ್ಲಿ ಹನುಮ ಧ್ವಜ ತೆರವು ವಿಚಾರ ಭಾರೀ ಪ್ರತಿಭಟನೆಗೆ ಕಾರಣವಾಗಿತ್ತು. ಬಳಿಕ ಇತರೆ ಕಡೆಗಳಲ್ಲಿ ಇರುವ ಕೇಸರಿ ಬಾವುಗಳನ್ನು ಕೂಡ ತೆರವುಗೊಳಿಸಲಾಗಿತ್ತು.

ಇದನ್ನೂ ಓದಿ: ಮಂಗಳೂರು ಜೆರೋಸಾ ಶಾಲೆ ಪ್ರಕರಣ; IAS ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ

ಈ ಎಲ್ಲಾ ಬೆಳವಣಿಗೆ ನಡುವೆ, ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶದಲ್ಲಿ ಯಾವುದೇ ಅನುಮತಿ ಪಡೆಯದೆ ಹರೇಕಳದಲ್ಲಿ ಡಿವೈಎಫ್​ಐ ಅಳವಡಿಸಿದ್ದ ಆರು ಅಡಿ ಎತ್ತರದ ಟಿಪ್ಪು ಕಟೌಟ್​​ ತೆರವಿಗೆ ಪೊಲೀಸರು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ