ಮೈಸೂರು ಘಟನೆ ಹಿನ್ನೆಲೆ ಮಂಗಳೂರು ಪೊಲೀಸರಿಂದ ಮಹಿಳಾ ಸುರಕ್ಷತೆಗಾಗಿ ಜಾಗೃತಿ ಕಾರ್ಯಕ್ರಮ, ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ

ಈ ಕಾರ್ಯಕ್ರಮದಲ್ಲಿ ನಗರ ವ್ಯಾಪ್ತಿಯಲ್ಲಿ 5 ನಿಮಿಷದಲ್ಲಿ ಸ್ಥಳಕ್ಕೆ ಬಂದು ಪ್ರತಿಕ್ರಿಯೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ಕರೆ ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಪರೀಕ್ಷೆ ನಡೆಸಿದ್ದಾರೆ. ಜತೆಗೆ ಮಹಿಳೆಯರು, ವಿದ್ಯಾರ್ಥಿನಿಯರು ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡಿ ಎಂದು ತಿಳಿಸಿದ್ದಾರೆ.

ಮೈಸೂರು ಘಟನೆ ಹಿನ್ನೆಲೆ ಮಂಗಳೂರು ಪೊಲೀಸರಿಂದ ಮಹಿಳಾ ಸುರಕ್ಷತೆಗಾಗಿ ಜಾಗೃತಿ ಕಾರ್ಯಕ್ರಮ, ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ
ಮಂಗಳೂರು ಪೊಲೀಸರಿಂದ ಮಹಿಳಾ ಸುರಕ್ಷತೆಗಾಗಿ ಜಾಗೃತಿ ಕಾರ್ಯಕ್ರಮ
Follow us
TV9 Web
| Updated By: preethi shettigar

Updated on: Aug 28, 2021 | 1:58 PM

ದಕ್ಷಿಣ ಕನ್ನಡ: ಸಾಮೂಹಿಕ ಅತ್ಯಾಚಾರ ಪ್ರಕರಣ ಮೈಸೂರಿನಲ್ಲಿ ನಡೆದ ಬಳಿಕ ಎಚ್ಚೆತ್ತುಕೊಂಡ ಮಂಗಳೂರು ಪೊಲೀಸರು, ಮಹಿಳಾ ಸುರಕ್ಷತೆಗಾಗಿ ಒಂದು ದಿನದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಇಆರ್​ಎಸ್​ಎಸ್​ ವಾಹನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಕೆ ಮಾಡುವಂತೆ ಮತ್ತು ಕಮೀಷನರ್, ಡಿಸಿಪಿ ಸೇರಿದಂತೆ ಅಧಿಕಾರಿಗಳಿಗೆ‌ ಕರೆ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಲು ಜಾಗೃತಿ ಮೂಡಿಸಿದ್ದಾರೆ.  ಒಲಿಂಪಿಯನ್ ಎಂ.ಆರ್ ಪೂವಮ್ಮಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

100 ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, 20 ಕ್ಕೂ ಹೆಚ್ಚು ತುರ್ತು ಪೊಲೀಸ್ ವಾಹನ ಬಳಕೆ ಮಾಡಲು ಈ ಸಂದರ್ಭದಲ್ಲಿ ಸೂಚಿಸಲಾಗಿದೆ. ಇನ್ನು ತುರ್ತು ಸಂದರ್ಭದಲ್ಲಿ 112 ನಂಬರ್​ಗೆ ಕರೆ ಮಾಡುವ ಬಗ್ಗೆಯೂ ಜಾಗೃತಿ ನೀಡಲಾಯಿತು. ಅಲ್ಲದೆ ಕರೆ ಬಂದ ಸ್ಥಳಕ್ಕೆ ಗರಿಷ್ಠ 15 ನಿಮಿಷದ ಒಳಗೆ ತಲುಪುವ ಇಆರ್​ಎಸ್​ಎಸ್ ವಾಹನದ ಬಗ್ಗೆ ಮಾಹಿತಿ ನೀಡಿದ್ದು, ನಗರ ವ್ಯಾಪ್ತಿಯಲ್ಲಿ 5 ನಿಮಿಷದಲ್ಲಿ ಸ್ಥಳಕ್ಕೆ ಬಂದು ಪ್ರತಿಕ್ರಿಯೆ ನೀಡುವ ಬಗ್ಗೆಯೂ ಪ್ರಾಯೋಗಿಕವಾಗಿ ಕರೆ ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಪರೀಕ್ಷೆ ನಡೆಸಿದ್ದಾರೆ. ಜತೆಗೆ ಮಹಿಳೆಯರು, ವಿದ್ಯಾರ್ಥಿನಿಯರು ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡಿ ಎಂದು ತಿಳಿಸಿದ್ದಾರೆ.

ಬೆಂಗಳೂರು: ಸುತ್ತೋಲೆ ವಾಪಸ್ ಪಡೆಯಲು ಸಚಿವ ಅಶ್ವತ್ಥನಾರಾಯಣ ಆದೇಶ ಸಾಮೂಹಿಕ ಅತ್ಯಾಚಾರ ಪ್ರಕರಣ ಮೈಸೂರಿನಲ್ಲಿ ನಡೆದ ಹಿನ್ನೆಲೆಯಲ್ಲಿ ಸಂಜೆ 6.30ರ ನಂತರ  ವಿವಿ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿನಿಯರ ಓಡಾಟವನ್ನು ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈಗಾಗಲೇ ಈ ಸುತ್ತೋಲೆಯನ್ನು ವಾಪಸ್ ಪಡೆಯುವಂತೆ ಕುಲಪತಿ ಪ್ರೊ.ಹೇಮಂತ ಕುಮಾರ್ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ವಿಶ್ವವಿದ್ಯಾಲಯಗಳ ಕ್ಯಾಂಪಸ್​ಗಳು ಬಹಳ ವಿಶಾಲವಾಗಿರುತ್ತವೆ ಎಂಬುವುದೇನೋ ನಿಜ. ಹಾಗಂತ ವಿದ್ಯಾರ್ಥಿನಿಯರು ಓಡಾದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅದರ ಬದಲಿಗೆ ರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತವಾದ ವಿವಿ ಕ್ಯಾಂಪಸ್​ಗಳನ್ನು ರೂಪಿಸಬೇಕೆಂದು ಎಲ್ಲಾ ವಿವಿ ಕುಲಪತಿಗಳಿಗೂ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೂಚಿಸಿದ್ದಾರೆ.

ಅತ್ಯಾಚಾರ ಘಟನೆ ಖಂಡನೀಯ. ಈ ಘಟನೆ ನಡೆಯಿತು ಎನ್ನುವ ಕಾರಣಕ್ಕೆ ಹೆಣ್ಣುಮಕ್ಕಳ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಬೇಡ. ಅವರ ಸ್ವಾತಂತ್ರ್ಯಕ್ಕೆ ಚ್ಯುತಿಯಾಗದಂತೆ ಅವರಿಗೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು. ವಿಶ್ವವಿದ್ಯಾಲಯಗಳ ಕ್ಯಾಂಪಸ್​ಗಳಲ್ಲಿ  ಹೆಚ್ಚು ನಿಗಾ ವಹಿಸುವ  ಕೆಲಸ ಆಗಬೇಕು. ಈಗಾಗಲೇ ಆ ಬಗ್ಗೆ ಸರಕಾರದಿಂದ ಕ್ರಮ ವಹಿಸಲಾಗಿದೆ. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ವ್ಯಾಪಕ ನಿಗಾ ಇರಿಸುವುದರ ಜತೆಗೆ, ಭದ್ರತಾ ಸಿಬ್ಬಂದಿಯಿಂದ ಪೆಟ್ರೋಲಿಂಗ್ ಮಾಡಬೇಕು. ಅಗತ್ಯವಾದ ಎಲ್ಲ ಕಡೆಗಳಲ್ಲೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಕಾನೂನು-ಸುವವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ದಿಕ್ಕಿನಲ್ಲೂ ತೀವ್ರ ನಿಗಾ ಇಟ್ಟಿರಬೇಕು. ಈ ಬಗ್ಗೆ ಎಲ್ಲ ಕುಲಪತಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಮಾನಸ ಗಂಗೋತ್ರಿ ಆವರಣದಲ್ಲಿ ಸಂಜೆ 6.30ರ ಬಳಿಕ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡಲು ನಿಷೇಧ, ಕುಕ್ಕರಹಳ್ಳಿ ಕೆರೆಗೂ ಪ್ರವೇಶ ನಿರ್ಬಂಧ

ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ; ಸುತ್ತೋಲೆ ವಾಪಸ್ ಪಡೆಯಲು ಸಚಿವ ಅಶ್ವತ್ಥನಾರಾಯಣ ಆದೇಶ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ