ಉಪ್ಪಿನಂಗಡಿ: ಇಬ್ಬರು ಯುವಕರ ಮೇಲೆ ತಲವಾರಿನಿಂದ ಹಲ್ಲೆ ಪ್ರಕರಣ, ಹಲ್ಲೆಕೋರರ ಬಂಧನ ಖಂಡಿಸಿ ಠಾಣೆಗೆ ಮುತ್ತಿಗೆ

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಠಾಣಾ ವ್ಯಾಪ್ತಿಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಯಾಕಂದ್ರೆ ಡಿಸೆಂಬರ್ 6ರಂದು ನಡೆದ ಯುವಕರಿಬ್ಬರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು ನಿನ್ನೆ ಮೂವರನ್ನು ವಶಕ್ಕೆ ಪಡೆದಿದ್ದರು.

ಉಪ್ಪಿನಂಗಡಿ: ಇಬ್ಬರು ಯುವಕರ ಮೇಲೆ ತಲವಾರಿನಿಂದ ಹಲ್ಲೆ ಪ್ರಕರಣ, ಹಲ್ಲೆಕೋರರ ಬಂಧನ ಖಂಡಿಸಿ ಠಾಣೆಗೆ ಮುತ್ತಿಗೆ
ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಮುತ್ತಿಗೆ
Follow us
TV9 Web
| Updated By: ಆಯೇಷಾ ಬಾನು

Updated on:Dec 15, 2021 | 10:48 AM

ಮಂಗಳೂರು: ಉಪ್ಪಿನಂಗಡಿ ಠಾಣೆಯ ಮುಂಭಾಗದಲ್ಲಿ ಪಿಎಫ್‌ಐ ಮತ್ತು ಎಸ್ ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನೆಪದಲ್ಲಿ ಹೈಡ್ರಾಮಾ ನಡೆಸಿದ್ರು. ಇದಕ್ಕೆ ಪ್ರತಿಯಾಗಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಉಪ್ಪಿನಂಗಡಿ ಸುತ್ತಾಮುತ್ತಾ ಸೆಕ್ಷನ್ 144 ಜಾರಿಯಾಗಿದೆ.

ಹಲ್ಲೆಕೋರರ ಬಂಧನ ಖಂಡಿಸಿ ಠಾಣೆ ಮುತ್ತಿಗೆ ಯತ್ನ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಠಾಣಾ ವ್ಯಾಪ್ತಿಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಯಾಕಂದ್ರೆ ಡಿಸೆಂಬರ್ 6ರಂದು ನಡೆದ ಯುವಕರಿಬ್ಬರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸರು ನಿನ್ನೆ ಮೂವರನ್ನು ವಶಕ್ಕೆ ಪಡೆದಿದ್ದರು. ಇದನ್ನು ವಿರೋಧಿಸಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಉಪ್ಪಿನಂಗಡಿ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ರು. ಸಂಜೆಯಾದ್ರೂ ಪ್ರತಿಭಟನಾ ಧರಣಿ ನಡೆಯುತ್ತಲೇ ಇತ್ತು. ಈ ವೇಳೆ ಮತ್ತೊಂದು ಗುಂಪು ಕೂಡ ಠಾಣೆ ಮುಂದೆ ಜಮಾಯಿಸಿತ್ತು.

ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ಪೊಲೀಸರು ಎಷ್ಟು ಮನವಿ ಮಾಡಿಕೊಂಡ್ರೂ ಪ್ರತಿಭಟನಕಾರರು ಜಾಗ ಬಿಟ್ಟು ಕದಲಲಿಲ್ಲ ಕತ್ತಲಾದ್ರೂ ಪ್ರತಿಭಟನಾ ಧರಣಿ ಮುಂದುವರಿದಿತ್ತು. ಸುಮಾರು ಸಾವಿರಕ್ಕೂ ಹೆಚ್ಚು ಮಂದಿ ಠಾಣೆ ಬಳಿ ಜಮಾಯಿಸಿದ್ರು. ಈ ವೇಳೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆಯಿತು. ಈ ವೇಳೆ ಪೊಲೀಸರು ಗುಂಪು ಚದುರಿಸಲುಲಾಠಿ ಚಾರ್ಜ್ ನಡೆಸಿದ್ರು. ಈ ವೇಳೆ ಹತ್ತಕ್ಕೂ ಹೆಚ್ಚು ಕಾರ್ಯಕರ್ತರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ್ರು.

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಇನ್ನು ಬಂದೋಬಸ್ತ್‌ಗೆ ತೆರಳಿದ್ದ ಬಂಟ್ವಾಳ ನಗರ ಠಾಣೆ ಎಸ್‌ಐ ಪ್ರಸನ್ನಗೆ ದುಷ್ಕರ್ಮಿಗಳು ಚೂರಿ ಇರಿದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್‌ಐ ಉಮೇಶ್, ಮಹಿಳಾ ಎಸ್‌ಐ ಸೇರಿದಂತೆ ಹಲವು ಪೊಲೀಸರು ಕಲ್ಲಿನೇಟಿನಿಂದಾಗಿ ಗಾಯಗೊಂಡಿದ್ದು ಚಿಕಿತ್ಸೆ ನೀಡಲಾಗ್ತಿದೆ. ಸದ್ಯ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದ್ದು ಪ್ರತಿಭಟನಾ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಮತ್ತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚೆರಿಕಾ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: 2022ರ IIFA​ ಉತ್ಸವವನ್ನು ನಿರೂಪಣೆ ಮಾಡಲಿದ್ದಾರೆ ಬಾಲಿವುಡ್​ ನಟ ಸಲ್ಮಾನ್​ ಖಾನ್

Published On - 10:44 am, Wed, 15 December 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್