AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಸರಗೋಡಿನ ಮನೆಯಲ್ಲಿ ಸಿಕ್ತು 2000 ಮುಖಬೆಲೆಯ ಬರೋಬ್ಬರಿ 7 ಕೋಟಿ ರೂ. ನಗದು!

ದಕ್ಷಿಣ ಕನ್ನಡ ಜಿಲ್ಲೆಯ ಸಮೀಪದ ಕಾಸರಗೋಡಿನ ಮನೆಯೊಂದರಲ್ಲಿ ಚಲಾವಣೆಯಿಂದ ಹಿಂಪಡೆಯಲಾಗಿರುವ 2000 ಮುಖಬೆಲೆಯ ಸುಮಾರು 7 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು ಹಲವು ಅನುಮಾನಗಳನ್ನು. ಸದ್ಯ ನಗದನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದಾರೆ. ಕರ್ನಾಟಕದ ಹಲವಡೆ ಕೂಡ ಗುರುವಾರ ಕೋಟ್ಯಂತರ ಮೌಲ್ಯದ ನಗದು, ಆಭರಣ, ಬಟ್ಟೆ ಬರೆ ವಶಪಡಿಸಿಕೊಳ್ಳಲಾಗಿದೆ. ಆ ಕುರಿತ ವಿವರ ಇಲ್ಲಿದೆ.

ಕಾಸರಗೋಡಿನ ಮನೆಯಲ್ಲಿ ಸಿಕ್ತು 2000 ಮುಖಬೆಲೆಯ ಬರೋಬ್ಬರಿ 7 ಕೋಟಿ ರೂ. ನಗದು!
ಸಾಂದರ್ಭಿಕ ಚಿತ್ರ
Ganapathi Sharma
|

Updated on: Mar 22, 2024 | 7:22 AM

Share

ಮಂಗಳೂರು, ಮಾರ್ಚ್​ 22: ನೆರೆಯ ಕೇರಳ ರಾಜ್ಯದ ಕಾಸರಗೋಡು (Kasaragod) ಜಿಲ್ಲೆಯ ಗುರಪುರದ ಅಂಬಲತ್ತರ ಎಂಬಲ್ಲಿನ ಮನೆಯೊಂದರಿಂದ 7 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿ (Currency Notes) ಮುಖಬೆಲೆಯ ನೋಟುಗಳನ್ನು ಪೊಲೀಸರು (Kasaragod Police) ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಖಚಿತ ಮಾಹಿತಿ ಪಡೆದ ಪೊಲೀಸರು ಗುರುವಾರ ಕಾರ್ಯಾಚರಣೆ ನಡೆಸಿದ್ದರು. 2000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಕೇಂದ್ರ ಸರ್ಕಾರ ಕಳೆದ ವರ್ಷದ ಆರಂಭದಲ್ಲಿ ಚಲಾವಣೆಯಿಂದ ಹಿಂಪಡೆದಿತ್ತು.

ನೋಟುಗಳು ಪತ್ತೆಯಾಗಿರುವುದು ಗಲ್ಫ್ ಉದ್ಯೋಗಿ ಕೆಪಿ ಬಾಬು ರಾಜ್ ಅವರ ಮಾಲೀಕತ್ವದ ಮನೆಯಲ್ಲಿ ಎಂದು ಪೊಲೀಸರು ತಿಳಿಸಿದ್ದಾರೆ. ಬಾಬು ರಾಜ್ ಅವರು ಪಾಣತ್ತೂರು ನಿವಾಸಿ ಅಬ್ದುಲ್ ರಜಾಕ್ ಎಂಬುವವರಿಗೆ ಮನೆ ಬಾಡಿಗೆಗೆ ನೀಡಿದ್ದರು.

ಕಳೆದ ಮೂರು ದಿನಗಳಿಂದ ಪೊಲೀಸರು ಮನೆಯ ಮೇಲೆ ನಿಗಾ ಇರಿಸಿದ್ದರು. ಬುಧವಾರ ದಾಳಿ ನಡೆಸಿ ಎರಡು ಕೊಠಡಿಗಳಲ್ಲಿ ಸಂಗ್ರಹಿಸಿಟ್ಟಿದ್ದ ಕರೆನ್ಸಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. 2000 ರೂಪಾಯಿ ನೋಟುಗಳನ್ನು ಥರ್ಮಾಕೋಲ್ ಬಾಕ್ಸ್, ರಟ್ಟಿನ ಬಾಕ್ಸ್ ಮತ್ತು ಗೋಣಿಚೀಲಗಳಲ್ಲಿ ತುಂಬಿರುವುದು ಪತ್ತೆಯಾಗಿದೆ.

ಕರ್ನಾಟಕದ ಹಲವೆಡೆ ಕೋಟಿ ಮೌಲ್ಯದ ವಸ್ತುಗಳು ವಶ

ಇನ್ನು ಕರ್ನಾಟಕದ ಹಲವೆಡೆ ಗುರುವಾರ ಕೋಟಿ ಕೋಟಿ ಮೌಲ್ಯದ ಬಟ್ಟೆಗಳು, ಸೀರೆ, ಆಭರಣ ಹಾಗೂ ನಗದನ್ನು ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಚುನಾವಣಾ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ‌ಕೆಆರ್ ಪುರಂನಲ್ಲಿರೋ ಡಿಲಕ್ಸ್ ಲಾಜಿಸ್ಟಿಕ್ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.1 ಕೋಟಿ ರೂ. ಮೌಲ್ಯದ ಬಟ್ಟೆಗಳನ್ನು ಸೀಜ್ ಮಾಡಿದ್ದಾರೆ. ಸದ್ಯ ಈ ಎಲ್ಲ ಬಟ್ಟೆಗಳನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ಪೈಪೋಟಿ​ ಮಧ್ಯೆ ಆಮಿಷದ ವಸ್ತುಗಳ ಸದ್ದು ಕೂಡ ಅಷ್ಟೇ ಜೋರಾಗಿದೆ. ಭದ್ರಾವತಿ ತಾಲೂಕಿನ ಬಿಆರ್​​ಪಿ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ 700ಕ್ಕೂ ಹೆಚ್ಚು ಸೀರೆಗಳು ವಶಪಡಿಸಿಕೊಳ್ಳಲಾಗಿದೆ. 500, 200 ಬೆಲೆಯ ಮತ್ತು ನೂರು ರೇಷ್ಮೆ ಸೀರೆಗಳು ಚೂಡಿದಾರ್ ಪೀಸ್​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತದಲ್ಲಿ ಹಸುಗೂಸು ಸೇರಿ ಮಂಗಳೂರಿನ ನಾಲ್ವರು ಸಾವು

ರಾಮನಗರ ಜಿಲ್ಲೆಯ ಮಾಗಡಿ‌ ತಾಲೂಕಿನ ತಟವಾಳ್ ಗ್ರಾಮದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್​ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಸದ್ಯ ಅಪರಿಚಿತರ ಮೇಲೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಚಿಕ್ಕಮಗಳೂರು ತಾಲೂಕಿನ ಮಾಗಡಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ತಪಾಸಣೆ ನಡೆಸುವ ವೇಳೆ 13.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಮುತ್ತು, ಹರಳು ಪತ್ತೆಯಾಗಿದ್ದು, ಚಿನ್ನದ ಸರ ಸೇರಿ ಉಂಗುರಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!